Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚರ್ಚೆಗೆ ಸಮಯ, ಸ್ಥಳ ನಿಗಧಿ ಮಾಡಿ : ಬಿಜೆಪಿ ತಿರುಗೇಟು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚರ್ಚೆಗೆ ಸಮಯ, ಸ್ಥಳ ನಿಗಧಿ ಮಾಡಿ : ಬಿಜೆಪಿ ತಿರುಗೇಟು*

ಜನವರಿ 31, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK :  ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಈ ಹಿಂದಿನ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ಕಾಂಗ್ರೆಸ್ಸಿಗರು ಸಮಯ ಮತ್ತು ಸ್ಥಳವನ್ನು ನಿಗಧಿ ಮಾಡಿದರೆ ನಾವು ಬರಲು ಸಿದ್ಧರಿದ್ದೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಂಸದರನ್ನು ಟೀಕಿಸಿರುವುದು ಖಂಡನೀಯ, ಜನರ ಮುಂದೆ ವಾಸ್ತವಾಂಶವನ್ನು ಹೇಳಬೇಕಾಗಿದೆ. 2018ರಲ್ಲಿ ಜಿಲ್ಲೆಗೆ ರೈಲ್ವೆ ಯೋಜನೆ ತರುವುದಾಗಿ ಹೇಳಿದ್ದು ನಿಜ, ಯಾವುದೇ ರೈಲ್ವೆ ಯೋಜನೆಗೆ ಭೂ ಸ್ವಾಧೀನವನ್ನು ಹಾಗೂ ಶೇ.50 ಅನುದಾನ ರಾಜ್ಯ ಸರ್ಕಾರ ಮಾಡಿ ಕೊಡಬೇಕು 2013 ರಿಂದ 18ರವರೆಗೆ ಇದ್ದ ಸಿದ್ದರಾಮಯ್ಯನವರು ಉಚಿತವಾಗಿ ಭೂ ಸ್ವಾದೀನ ಹಾಗೂ ಶೇ.50 ಅನುದಾನ ನೀಡಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದರು. ಆದರೂ 2018ರಲ್ಲಿ ಲೈನ್ ಎಸ್ಟಿಮೇಟ್ ಮಾಡಿದ್ದು 1954 ಕೋಟಿ ಯೋಜನೆ ಆಗಿತ್ತು ಆಗ ಪಿಯೂಷ್ ಗೋಯಲ್ ಅವರು ಮಂಡಿಸಿದ ರೈಲ್ವೆ ಬಜೆಟಿನಲ್ಲಿ ಘೋಷಣೆ ಆಗಿ (ಪಿಂಕ್ ಬುಕ್)ನಲ್ಲಿ ನಮೂದಾಗಿದೆ ಮತ್ತೆ ಈಗ ಡಿ.ಪಿ.ಆರ್. ಮಾಡಿಸಲಾಗಿದ್ದು, 3092 ಕೋಟಿಗಳಿಗೆ ಸಬ್‍ಮಿಟ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ವಿರಾಜಪೇಟೆ ನಗರದ ಕುಡಿಯುವ ನೀರಿನ ಅಮೃತ್ ಯೋಜನೆಗೆ 58 ಕೋಟಿ ರೂ. ಅನುಮೋದನೆಯಗಿದ್ದು, ಈ ಯೋಜನೆಯು 2023ರ ಫೆಬ್ರವರಿ ತಿಂಗಳಿನಲ್ಲಿ ಆಗಿನ ಶಾಸಕ ಕೆ.ಜಿ.ಬೋಪಯ್ಯ ಅವರ ಪ್ರಯತ್ನದ ಫಲವಾಗಿ ಜಾರಿಗೆ ಬಂದಿದೆ. ಇದನ್ನು ಈಗಿನ ಶಾಸಕರು ನಾನು ತಂದಿರುವುದು ಎಂದು ಹೇಳಿಕೊಂಡಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.
ಜಿಲ್ಲೆಯಲ್ಲಿ ಆಗಿರುವ ಪ್ರಧಾನಮಂತ್ರಿ ಗ್ರಾಮೀಣ ಸಡಕ್ ರಸ್ತೆಗಳು, ಅನೇಕ ಹೆದ್ದಾರಿಗಳ ಅಭಿವೃದ್ಧಿ, ಚತುಷ್ಪಥ ರಸ್ತೆ ನಿರ್ಮಾಣ ಆರಂಭವಾಗಿರುವುದು ಸಂಸದ ಪ್ರತಾಪ್ ಸಿಂಹ ಅವರ ಕಾಲದಲ್ಲಿ. ಯಾವುದೇ ಯೋಜನೆಗಳ ಬಗ್ಗೆ ಚರ್ಚೆಗೆ ನಮ್ಮ ಸಂಸದರು, ಮಾಜಿ ಶಾಸಕರುಗಳು ತಯಾರಿದ್ದು, ನಿಮ್ಮ ಶಾಸಕರುಗಳನ್ನು ಕರೆದು ವೇದಿಕೆ ಸಿದ್ಧಪಡಿಸಿ, ಚರ್ಚೆ ಮಾಡೋಣ ಎಂದು ರವಿ ಕಾಳಪ್ಪ ತಿಳಿಸಿದರು.
ಜಿಲ್ಲೆಯಲ್ಲಿ ಅನೇಕ ಯೋಜನೆಗಳು ನಮ್ಮ ಹಿಂದಿನ ಶಾಸಕರ ಸಂದರ್ಭದಲ್ಲಿ ಆಗಿದ್ದು, ಅದರ ಉದ್ಘಾಟನೆಯನ್ನು ಈಗಿನವರು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರದ ಕಾಮಗಾರಿಗಳನ್ನು ನಮ್ಮದು ಎಂದು ಹೇಳಿಕೊಳ್ಳುತ್ತಿರುವುದು ಖಂಡನೀಯ ಎಂದರು.
ಉಚಿತ ಭಾಗ್ಯ ಯೋಜನೆಗಳ ಪೂರೈಕೆಗಾಗಿ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹತ್ತು ಕೆಜಿ ಅಕ್ಕಿಯನ್ನು ತಾನೇ ಕೊಡುವುದಾಗಿ ಹೇಳಿ ಕೇಂದ್ರದ ಮೇಲೆ ಅವಲಂಭಿತವಾಗಿದೆ. ತಾನು ಘೋಷಿಸಿದ 10 ಕೆಜಿ ಯನ್ನು ಮೊದಲು ಕಾಂಗ್ರೆಸ್ ಸರ್ಕಾರ ನೀಡಲಿ ಎಂದು ರವಿ ಕಾಳಪ್ಪ ಒತ್ತಾಯಿಸಿದರು.
ಉಚಿತ ಬಸ್ ಸೇವೆ ಆರಂಭವಾದಲ್ಲಿಂದ ಅನೇಕ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತೊಂದರೆಯಾಗಿದೆ ಎಂದು ಟೀಕಿಸಿದರು.
ಉಚಿತ ವಿದ್ಯುತ್ 200ಯೂನಿಟ್ ನೀಡುವುದಾಗಿ ಭರವಸೆ ನೀಡಿ ಅವು ಯಾರಿಗೂ ತಲುಪುತ್ತಿಲ್ಲ. ಬಿಲ್ ಪಾವತಿ ಮಾಡುವವರಿಗೆ ಈ ಹಿಂದಿಗಿಂತ 3 ಪಟ್ಟು ಶುಲ್ಕ ಹೆಚ್ಚಿಸಲಾಗಿದೆ. ಯುವ ನಿಧಿ ಯೋಜನೆ ಎಲ್ಲಿ ಹೋಯಿತು ಎಷ್ಟು ನಿರುದ್ಯೋಗಿಗಳಿಗೆ ನೀವು ಹಣವನ್ನು ನೀಡಿದ್ದೀರಿ ಎಂದು ಪ್ರಶ್ನಿಸಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದ ರೈತಪರ ಮತ್ತು ವಿದ್ಯಾರ್ಥಿಗಳ ಪರವಾಗಿದ್ದ ಯೋಜನೆಗಳನ್ನು ಸ್ಥಗಿತಗೊಳಿಸಿರುವುದು ಯಾಕೆ ಎಂದು ಪ್ರಶ್ನಿಸಿದರು.
ಭಾರತವು ವಿಶ್ವದ 5ನೇ ಅಭಿವೃದ್ಧಿ ಹೊಂದಿರುವ ದೇಶವಾಗಿದ್ದು, ಇತರ ಎಲ್ಲಾ ದೇಶಗಳಿಗೆ ಹೋಲಿಸಿದರೆ ಅತ್ಯಂತ ವೇಗವಾಗಿ ಅಭಿವೃದ್ಧಿಯತ್ತ ಸಾಗುತ್ತಿದೆ. ಕೇಂದ್ರ ಸಚಿವರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪವು ಇಲ್ಲ. ದೇಶದ ಎಲ್ಲಾ ಭಾಗಗಳಿಗೂ ಸಂವಿಧಾನದಲ್ಲಿ ಸಮಾನತೆ ಎಂಬಂತೆ ಕಾಶ್ಮೀರಕ್ಕೆ ಮಾತ್ರ ನೀಡಿದ್ದ ವಿಶೆಷ ಆರ್ಟಿಕಲ್ 370ನ್ನು ರದ್ದು ಪಡಿಸಿ ಅಲ್ಲಿ ನಡೆಯುತ್ತಿದ್ದ ಭಯೋತ್ಪಾನೆಯನ್ನು ಮಟ್ಟ ಹಾಕಿರುವುದು ಬಿ.ಜೆ.ಪಿ ಸರ್ಕಾರದ ಸಾಧನೆಯಾಗಿದೆ. ದೇಶದಲ್ಲಿ ಕೋಮು ಸಂಘರ್ಷ ಕಡಿಮೆಯಾಗಿ ಎಲ್ಲರೂ ಸೌಹಾರ್ದತೆಯಿಂದ ಜೀವನ ಸಾಗಿಸುತ್ತಿದ್ದಾರೆ, ಆಂತರಿಕ ಭಯೋತ್ಪಾದನೆಗೂ ಕಡಿವಾಣ ಹಾಕಲಾಗಿದೆ ಎಂದರು.
ನಮ್ಮ ದೇಶದ ಸಂಸ್ಕೃತಿಯ ಪ್ರತೀಕವಾಗಿರುವ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿಮಾರ್ಣ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಮಂಡ್ಯದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಹನುಮಧ್ವಜವನ್ನು ಕೆಳಗಿಳಿಸುವ ಮೂಲಕ ಸರ್ಕಾರ ಹಿಂದೂಗಳ ಭಾವನೆಗೆ ದಕ್ಕೆ ತಂದಿದೆ. ಕಾಂಗ್ರೆಸ್ ನ ಈ ಧೋರಣೆಗಳು ಬಿಜೆಪಿಗೆ ವರವಾಗಲಿದೆ ಎಂದು ರವಿ ಕಾಳಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸುನೀಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಭೀಮಯ್ಯ, ಕುಲ್ಲೊರಿಕೊಪ್ಪ ಮಾದಪ್ಪ, ವಕ್ತಾರ ಮಹೇಶ್ ಜೈನಿ ಹಾಗೂ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.