Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ : ಪ್ರತಿಭಾನ್ವಿತರಾಗಿ ಗಮನ ಸೆಳೆದ ವಿದ್ಯಾರ್ಥಿಗಳು : ಗಣ್ಯರ ಮೆಚ್ಚುಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆ : ಪ್ರತಿಭಾನ್ವಿತರಾಗಿ ಗಮನ ಸೆಳೆದ ವಿದ್ಯಾರ್ಥಿಗಳು : ಗಣ್ಯರ ಮೆಚ್ಚುಗೆ

ಜನವರಿ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಜ.31 NEWS DESK :  ಸ್ಮಾರ್ಟ್ ಬ್ರೈನ್ಸ್ ಅಬಾಕಸ್  ಅಕಾಡೆಮಿ ವತಿಯಿಂದ 9ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್, ವೇದಿಕ್ ಮ್ಯಾಥ್ಸ್, ರೂಬಿಕ್ಸ್ ಕ್ಯೂಬ್, ಕ್ಯಾಲಿಗ್ರಫಿ ಮತ್ತು ಮಿಡ್‌ಬ್ರೇನ್ ಆಕ್ಟಿವೇಶನ್ ಸ್ಪರ್ಧೆ ಯು ರೈತ ಸಹಕಾರ ಭವನದ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್.ಪಲ್ಲೇದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚಿಕ್ಕವಯಸ್ಸಿನಲ್ಲೇ ಸ್ಪರ್ಧಾತ್ಮಕಕ ಕಾರ್ಯಕ್ರಮಗಳಲ್ಲಿ ಭಾಗಹಿಸುವುದರಿಂದ ಸ್ಪರ್ಧಾ ಯುಗಕ್ಕೆ ಹೇಗೆ ತೆರೆದುಕೊಳ್ಳಬೇಕು ಎಂಬುದು ತಿಳಿಯುತ್ತದೆ. ಸ್ಪರ್ಧೆಗಳಲ್ಲಿ ಸೋಲು ಗೆಲುವಿಗಾಗಿ ಅಲ್ಲದೆ ಒಳ್ಳೆಯ ಅನುಭವಕ್ಕಾಗಿ ಭಾಗವಹಿಸಬೇಕು. ವಿಶೇಷವಾಗಿ ಸೋತಾಗ ನಮಗೆ ಸಿಗುವ ಅನುಭವ ಮತ್ತು ಜೀವನದ ಪಾಠ ಗೆದ್ದಾಗ ಸಿಗುವುದಿಲ್ಲ. ಅಲ್ಲದೇ, ಒಮ್ಮೆ ಸೋತವರು ಮತ್ತೊಮ್ಮೆ ಗೆಲ್ಲಲೇ ಬೇಕು. ಅದಕ್ಕೆ ನಿರಂತರ ಪರಿಶ್ರಮ ಬೇಕಾಗುತ್ತದೆ ಮಕ್ಕಳ ಪ್ರತಿಭೆಯ ಅನಾವರಣಕ್ಕೆ  ಅಬಾಕಸ್ ಪೂರಕವಾಗಿದೆ
ಇದರ ಸದುಪಯೋಗಪಡಿಸಿಕೊಂಡು ಪ್ರತಿಭಾನ್ವಿತರಾಗಿ ಮುಂದೆ ಬರಬೇಕೆಂದು ಕರೆ ನೀಡಿದರು.
ಮೈಸೂರು ಸಣ್ಣ ನೀರಾವರಿ ಇಲಾಖೆಯ ಸಿವಿಲ್ ಸಹಾಯಕ ಇಂಜಿನಿಯರ್  ಶೈಜೆನ್ ಕೆ. ಪೀಟರ್ ಮಾತನಾಡಿ,  ಅತಿಯಾದ ಬಳಕೆಯ ಸಾಮಾಜಿಕ ಜಲತಾಣಗಳಿಂದ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಮೂಲಕ ಉತ್ತಮ ಭವಿಷ್ಯ  ರೂಪಿಸಿಕೊಳ್ಳಬೇಕಾದರೆ ಅಬಾಕಸ್‌ನಂತಹ ವಿಶಿಷ್ಟ ಜ್ಞಾನ ಮಾದರಿಗಳಲ್ಲಿ ತೊಡಗಿಸಿಕೊಳ್ಳುವುದು ಎಲ್ಲ ರೀತಿಯಲ್ಲಿಯೂ ಅನುಕೂಲಕರವಾಗಿದೆ.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಬಾಕಸ್ ನಲ್ಲಿ ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ.  ಭಾರತದ ಅಬಾಕಸ್ ಮೂಲಕ ಸಾಧಿಸುವ ಛಲ ದೊಂದಿಗೆ ಪ್ರತಿಭಾನ್ವಿತರಾಗಿ  ಮುಂದೆ ಬರಬೇಕೆಂದರು.
ಉದ್ಗಮ್ ಶಾಲೆ ಪ್ರಾಂಶುಪಾಲ ಬೋಪಣ್ಣ ಮಾತನಾಡಿ,  ಸ್ಮಾರ್ಟ್ ಬ್ರೈನ್ಸ್ ಅಬಾಕಸ್   ಅಕಾಡೆಮಿ ಕಳೆದ 9 ವರ್ಷಗಳಿಂದಲೂ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಸಹಕಾರ ನೀಡಿ ಪೂರಕ ಬೆಳವಣಿಗೆಗೆ ಕೈಜೋಡಿಸುತ್ತಿರುವುದು ಮಾನವ ಮಿದುಳಿನ ಸಾಮರ್ಥ್ಯವನ್ನು ಮತ್ತು ಅದರ ಪರಿಣಾಮಕಾರಿ ಬಳಕೆಯನ್ನು ಸಕ್ರಿಯಗೊಳಿಸುವ ಕೌಶಲ್ಯ ನಿರ್ವಹಣೆ ತಂತ್ರಗಳನ್ನು ಕಲಿಸುತ್ತದೆ. ಅಬ್ಯಾಕಸ್ ವಿದ್ಯಾರ್ಥಿಗಳಿಗೆ ಹೆಚ್ಚಿನ ವೇಗ ಮತ್ತು ನಿಖರತೆಯೊಂದಿಗೆ ಮಾನಸಿಕ ಲೆಕ್ಕಾಚಾರಗಳನ್ನು ಮಾಡಲು ಸಹಾಯ ಮಾಡುತ್ತದೆ.ಇದು ಅವರ ಜೀವನದುದ್ದಕ್ಕೂ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನವನ್ನು ಅನ್ವಯಿಸುವಂತೆ ಮಾಡುತ್ತದೆ. ಇದು ಅವರ ಜೀವನದುದ್ದಕ್ಕೂ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನವನ್ನು ಅನ್ವಯಿಸುವಂತೆ ಮಾಡುವ ಅಬಾಕಸ್ ಮಕ್ಕಳಿಗೆ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಸ್ಮಾರ್ಟ್ ಬ್ರೈನ್ಸ್ ಅಬಾಕಸ್ ಅಕಾಡೆಮಿ  ನಿರ್ದೇಶಕಿ ಕುಸುಮಾ ಎಸ್. ರಾಜ್ ಮಾತನಾಡಿ,  ಕಳೆದ 13ವರ್ಷಗಳಿಂದ ಅಕಾಡೆಮಿ ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆ ಹಾಗೂ ರಾಜ್ಯಮಟ್ಟದ ಶಾಲೆಗಳಲ್ಲಿ ಮಕ್ಕಳಿಗೆ ಅಬಾಕಸ್ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಸಾವಿರಾರು ವಿದ್ಯಾರ್ಥಿಗಳು
ಅಬಾಕಸ್ ಮೂಲಕ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಕ್ಕಳ ಪ್ರತಿಭೆಯ ಆವರಣಕ್ಕೆ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು,
ಕೊಡಗು ಮೈಸೂರು ಹಾಸನ ಜಿಲ್ಲೆಯ 18 ಶಾಲೆಗಳ 365 ವಿದ್ಯಾರ್ಥಿಗಳು ಸ್ವರ್ಧೆಯಲ್ಲಿ ಭಾಗವಹಿಸಿದ್ದಾರೆ.
ಮಕ್ಕಳಿಗೆ ವಿಶೇಷ ಪ್ರತಿಭೆಗೆ ಸಹಕಾರಿಯಾಗಲಿರುವ ವೇದಿಕ್ ಮ್ಯಾಥ್ಸ್, ರೂಬಿಕ್ಸ್ ಕ್ಯೂಬ್,ಕ್ಯಾಲಿಗ್ರಫಿ ಮತ್ತು ಮಿಡ್‌ಬ್ರೇನ್ ಆಕ್ಟಿವೇಶನ್ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಕಲಿಕೆಯ ಪ್ರತಿಭೆಯೊಂದಿಗೆ ಸರ್ದೆಯಲ್ಲಿ ಪಾಲ್ಗೊಂಡು  ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಅಬಾಕಸ್ ಪೂರ್ಣ ಶಿಕ್ಷಣ ಪಡೆದ ಮೂವರು ವಿದ್ಯಾರ್ಥಿಗಳಿಗೆ ಪದವಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭ ಅಬಾಕಸ್ ಅಕಾಡೆಮಿಯ ಶಿಕ್ಷಕರುಗಳಾದ ಗೀತಾ, ಕಲ್ಪನಾ, ಕಾವ್ಯ, ಪವಿತ್ರ ಹಾಗೂ ನಿರ್ದೇಶಕ ಸುಕೇಶ್ ರಾಜ್ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.