Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಸಾರ್ವಜನಿಕರಿಂದ ರಾಜ್ಯ ಮಾನವ ಹಕ್ಕು ಆಯೋಗದಿಂದ ಅಹವಾಲು ಸ್ವೀಕಾರ : ಹಾಡಿ ಜನರಿಗೆ ಕನಿಷ್ಠ ಸೌಲಭ್ಯ ತಲುಪಿಸಲು ನಾರಾಯಣ ಸ್ವಾಮಿ ತಾಕೀತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಸಾರ್ವಜನಿಕರಿಂದ ರಾಜ್ಯ ಮಾನವ ಹಕ್ಕು ಆಯೋಗದಿಂದ ಅಹವಾಲು ಸ್ವೀಕಾರ : ಹಾಡಿ ಜನರಿಗೆ ಕನಿಷ್ಠ ಸೌಲಭ್ಯ ತಲುಪಿಸಲು ನಾರಾಯಣ ಸ್ವಾಮಿ ತಾಕೀತು*

ಜನವರಿ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ವಿರಾಜಪೇಟೆ ಪಟ್ಟಣದ ತಹಶೀಲ್ದಾರರ ಕಚೇರಿಯಲ್ಲಿ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಅಹವಾಲು ಸ್ವೀಕರಿಸುವುದಕ್ಕೂ ಮೊದಲು ಮಾತನಾಡಿದ ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಎಲ್.ನಾರಾಯಣಸ್ವಾಮಿ, ಬಾಳುಗೋಡು ಯರವ ಕುಟುಂಬದವರು ವಾಸ ಮಾಡುತ್ತಿರುವುದನ್ನು ಗಮನಿಸಿ ಒಂದು ರೀತಿ ವಿಚಲಿತನಾದೆ ಎಂದು ಬೇಸರ ವ್ಯಕ್ತಪಡಿಸಿದರು.
ಭಾರತ ದೇಶ ಚಂದ್ರಯಾನ ಉಡಾವಣೆ ಮಾಡಿ ಯಶಸ್ಸುಗಳಿಸಿದೆ. ವಿಶ್ವದ ಜಿಡಿಪಿಯಲ್ಲಿ 10 ರೊಳಗಿನ ಸ್ಥಾನವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆದರೆ ವಾಸಕ್ಕೆ ಯೋಗ್ಯವಾದ ನಿವೇಶನ, ಮನೆ, ವಿದ್ಯುತ್ ಹಾಗೂ ಸಾರಿಗೆ ಸಂಪರ್ಕ ಹೊಂದದೆ ಇರುವ ಎಷ್ಟೋ ಕಡುಬಡ ಕುಟುಂಬಗಳಿದ್ದು, ಭಾರತ ವಿಕಾಸ ಹೊಂದಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಅವಲೋಕನ ಮಾಡಬೇಕಿದೆ ಎಂದರು.
ಆದಿವಾಸಿ ಜನರಿಗೆ ಬೇಕಿರುವ ನಿವೇಶನ, ಮನೆ, ದೀಪ, ಹತ್ತಿರದಲ್ಲಿ ಅಂಗನವಾಡಿ, ಶಾಲೆ, ಇಂತಹ ಕನಿಷ್ಠ ಮೂಲ ಸೌಲಭ್ಯ ಇಲ್ಲದಿರುವುದು ನಮ್ಮ ವ್ಯವಸ್ಥೆ ಯಾವ ಮಟ್ಟಕ್ಕೆ ಇದೆ ಎಂಬುದನ್ನು ಪ್ರತಿಯೊಬ್ಬರೂ ಆತ್ಮವಲೋಕನ ಮಾಡಬೇಕಿದೆ ಎಂದು ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಎಲ್.ನಾರಾಯಣಸ್ವಾಮಿ ಅವರು ನೋವಿನಿಂದ ನುಡಿದರು.
ಬಾಳುಗೋಡು ಯರವ ಹಾಡಿಯ ಜನರಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಕಲ್ಪಿಸಬೇಕು. ಸರ್ಕಾರದ ವ್ಯವಸ್ಥೆಯಲ್ಲಿರುವವರಿಗೆ ಎಲ್ಲಾ ರೀತಿಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ಆದರೆ ಇಂತಹ ವಸತಿರಹಿತ ನಿರ್ಗತಿಕ ಕುಟುಂಬಗಳಿಗೆ ಸೌಲಭ್ಯ ಇಲ್ಲದಿರುವುದು ಬೇಸರ ತರಿಸುತ್ತದೆ. ಒಂದು ಪೈಸೆಯೂ ಸಹ ಅವರ ಜೋಬಲ್ಲಿ ಇರುವುದಿಲ್ಲ. ಇಂತಹ ನಿರ್ಗತಿಕರಿಗೆ ಸೌಲಭ್ಯ ಕಲ್ಪಿಸುವುದು ಪ್ರಥಮ ಆದ್ಯತೆ ಆಗಬೇಕು ಎಂದರು.
ಈ ಜನರಿಗೆ ಶೇ.5 ರಷ್ಟು ಸರ್ಕಾರದ ಸೌಲಭ್ಯಗಳು ತಲುಪಿಲ್ಲ. ಹೀಗಾದರೆ ಸಮಾಜ ಅಭಿವೃದ್ಧಿ ಆಗುತ್ತದೆ ಹೇಗೆ ಎಂದು ಪ್ರಶ್ನಿಸಿದರು.
ದೇಶ, ರಾಜ್ಯ, ಸಮಾಜ ಬೆಳೆಯುತ್ತಿದೆ ಎಂದು ಹೇಳುತ್ತೇವೆ. ಆದರೆ ಇಂತಹ ಜನರನ್ನು ಯಾರೂ ಸಹ ಗುರುತಿಸುವುದಿಲ್ಲ. ಇಂತಹ ನಿರ್ಗತಿಕರನ್ನು ಗುರುತಿಸಿ ಮೂಲ ಸೌಲಭ್ಯ ಕಲ್ಪಿಸಬೇಕು ಎಂಬ ಮನೋಭಾವ ಯಾರಿಗೂ ಇಲ್ಲದಿರುವುದು ಸಮಾಜದ ಕನ್ನಡಿಯಾಗಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನವ ಹಕ್ಕು ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಇಲ್ಲಿನ ಬಾಳುಗೋಡು ಯರವ ಹಾಡಿಯ ಜನರ ಸ್ಥಿತಿಗತಿಯನ್ನು ಗಮನಿಸಲಾಗಿದೆ. ಮಾನವ ಹಕ್ಕು ಉಲ್ಲಂಘನೆಯಾಗಿರುವುದು ಕಂಡು ಬಂದಿದೆ. ಮಾನವ ಹಕ್ಕು ಉಲ್ಲಂಘನೆಯಾಗದಂತೆ ಗಮನಹರಿಸಬೇಕಿತ್ತು. ಆದರೆ ಈ ಕಾರ್ಯ ಆಗಿಲ್ಲ ಎಂದು ಹೇಳಿದರು.
ಯಾರೂ ಯಾರನ್ನು ಸಹ ಶೋಷಣೆ ಮಾಡಬಾರದು. ಆದರೆ ಇಂತಹ ಹಾಡಿಗಳನ್ನು ಗಮನಿಸಿದಾಗ ಶೋಷಣೆ ಯಾವ ರೀತಿ ಆಗಿದೆ ಎಂಬುದು ತಿಳಿಯುತ್ತದೆ ಎಂದರು.
ಮತ್ತೊಬ್ಬ ಸದಸ್ಯರಾದ ಶ್ಯಾಮ್ ಭಟ್ ಮಾತನಾಡಿ, ಮಾನವ ಹಕ್ಕು ಸಂಬಂಧಿಸಿದಂತೆ ನಾಗರಿಕರಲ್ಲಿ ಅರಿವು ಇರಬೇಕು. ಬಾಳುಗೋಡು ಯರವ ಕುಟುಂಬದವರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ತಲುಪಿಲ್ಲ. ಅಧಿಕಾರಿಗಳು ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು. ಆರ್ಜಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅವ್ಯವಸ್ಥೆಯ ಆಗಾರವಾಗಿದ್ದು, ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸಾರ್ವಜನಿಕರೊಬ್ಬರು ದೂರು ನೀಡಿದರು. ಮತ್ತೊಬ್ಬರು ಅಪಘಾತದಲ್ಲಿ ಕುಟುಂಬದವರು ಮೃತಪಟ್ಟಿದ್ದು, ಯಾವುದೇ ಪರಿಹಾರ ದೊರಕಿಲ್ಲ ಎಂದು ಅವಲತ್ತುಕೊಂಡರು. ಈ ಸಂಬಂಧ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಸೂಚಿಸಿದರು.
ಬಳಿಕ ಮಾನವ ಹಕ್ಕು ಉಲ್ಲಂಘನೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳನ್ನು ವಿಚಾರಣೆ ನಡೆಸಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಮಾನವ ಹಕ್ಕು ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅರುಣ್ ಪೂಜಾರ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಅಹವಾಲು ಸ್ವೀಕರಿಸುವುದಕ್ಕೂ ಮೊದಲು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಜೊತೆ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಬಾಳುಗೋಡು ಯರವ ಹಾಡಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.