Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಳುಗೋಡು ಯರವ ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಭೇಟಿ : ಹಾಡಿ ಜನರೊಂದಿಗೆ ಸಂವಾದ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಳುಗೋಡು ಯರವ ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ಭೇಟಿ : ಹಾಡಿ ಜನರೊಂದಿಗೆ ಸಂವಾದ*

ಜನವರಿ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK :  ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಯರವ ಸಮುದಾಯ ವಸತಿ ರಹಿತ ಕುಟುಂಬದವರ ಹಾಡಿಗೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ, ಸದಸ್ಯರಾದ ಎಸ್.ಕೆ.ವಂಟಿಗೋಡಿ ಮತ್ತು ಟಿ.ಶ್ಯಾಮ್ ಭಟ್ ಭೇಟಿ ನೀಡಿ ಕುಟುಂಬದವರ ಜೊತೆ ಸಂವಾದ ನಡೆಸಿದರು.
ನಿವೇಶನ, ಮನೆ ಇಲ್ಲದಿರುವುದು, ಕುಡಿಯುವ ನೀರು, ವಿದ್ಯುತ್, ಸಾರಿಗೆ ಸಂಪರ್ಕ ಇಲ್ಲದಿರುವುದು, ಟಾರ್ಪಲ್ ಕಟ್ಟಿಕೊಂಡು ಜೀವನ ದೂಡುತ್ತಿರುವುದನ್ನು ಗಮನಿಸಿ ಬೇಸರ ವ್ಯಕ್ತಪಡಿಸಿದರು.
ಹಾಡಿ ಜನರ ಜೊತೆ ಸಂವಾದ ನಡೆಸಿದ ಮಾನವ ಹಕ್ಕು ಆಯೋಗದ ಅಧ್ಯಕ್ಷ ಎಲ್.ನಾರಾಯಣಸ್ವಾಮಿ ಮಕ್ಕಳನ್ನು ಕಡ್ಡಾಯವಾಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿಸುವಂತೆ ಸಲಹೆ ನೀಡಿದರು.
ಹತ್ತಿರದಲ್ಲಿಯೇ ಏಕಲವ್ಯ ಮಾದರಿ ವಸತಿ ಶಾಲೆ ಇದ್ದು, ಅಲ್ಲಿಗೆ ಸೇರ್ಪಡೆ ಮಾಡಬೇಕು. ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತೆ ಅಧ್ಯಕ್ಷರು ಸಲಹೆ ಮಾಡಿದರು.
`ಅಲ್ಲಿನ ಯರವ ಸಮುದಾಯದ ಶೋಭಾ ಅವರು ಜಿಲ್ಲೆಯ ವಿವಿಧ ಭಾಗದ ಲೈನ್‍ಮನೆಗಳಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದೆವು. ಸದ್ಯ ಕಳೆದ 6 ವರ್ಷಗಳಿಂದ ಬಾಳುಗೋಡು ಪೈಸಾರಿ ಜಾಗದಲ್ಲಿ ಟಾರ್ಪಲ್ ಹೊದಿಕೆ ನಿರ್ಮಾಣ ಮಾಡಿ ಚಳಿ, ಮಳೆ, ಗಾಳಿಯನ್ನು ಎದುರಿಸಿ ವಾಸ ಮಾಡುತ್ತಿದ್ದೇವೆ. ನಮಗೆ ನಿವೇಶನ ಹಕ್ಕು ಪತ್ರ ನೀಡಿಲ್ಲ, ಮನೆ ಇಲ್ಲ, ರಾತ್ರಿ ವೇಳೆಯಲ್ಲಿ ಹಾವುಗಳ ಭಯದಿಂದ ಎಚ್ಚರವಾಗಿ ನಿದ್ರೆಯಿಲ್ಲದೆ ಪ್ರತಿನಿತ್ಯ ದಿನ ಕಳೆಯುತ್ತಿದ್ದು, ಬದುಕು ಸಂಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.’
ಆಹಾರ ಇಲಾಖೆಯಿಂದ 5 ಕೆ.ಜಿ.ಅಕ್ಕಿ ಸಾಲುತ್ತಿಲ್ಲ, ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡಿದರೆ ಮಾತ್ರ ಊಟ. ಇಲ್ಲದಿದ್ದಲ್ಲಿ ಉಪವಾಸದಿಂದ ಮಲಗಬೇಕಾದ ಪರಿಸ್ಥಿತಿ ಇದೆ ಎಂದು ನೋವು ತೋಡಿಕೊಂಡರು.
ಕುಡಿಯುವ ನೀರನ್ನು ಒಂದು ಕಿ.ಮೀ. ದೂರದಿಂದ ಹೊತ್ತುಕೊಂಡು ಬರುತ್ತಿದ್ದೇವೆ. ವಿದ್ಯುತ್ ಸಂಪರ್ಕ ಇಲ್ಲದೆ ಪರಿತಪಿಸುತ್ತಿದ್ದೇವೆ. ಕೂಡಲೇ ಕುಡಿಯುವ ನೀರು ಒದಗಿಸಬೇಕು. ಹಾಗೆಯೇ ನಿವೇಶನ ಹಕ್ಕುಪತ್ರ ದೊರೆಯಬೇಕು. ಜೊತೆಗೆ ಮನೆ ನಿರ್ಮಿಸಿಕೊಡಬೇಕು ಎಂದು ಮಾನವ ಹಕ್ಕು ಆಯೋಗದ ಅಧ್ಯಕ್ಷರಲ್ಲಿ ಯರವ ಕುಟುಂಬಸ್ಥರು ಮನವಿ ಮಾಡಿದರು.
ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮಾನವ ಹಕ್ಕು ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ, ಇಂದಿನಿಂದಲೇ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತದೆ. ಕಂದಾಯ ಇಲಾಖೆಯಿಂದ ಜಾಗವನ್ನು ತಾಲ್ಲೂಕು ಪಂಚಾಯಿತಿಗೆ ಒದಗಿಸಲಾಗಿದ್ದು, ಲೇಔಟ್(ಭೂ ನಕಾಶೆ) ತಯಾರಾದ ನಂತರ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುತ್ತದೆ. ಈ ಕೆಲಸಗಳು ಇನ್ನು 20 ದಿನದಲ್ಲಿ ಆಗಬೇಕಿದೆ. ಇಲ್ಲಿನ ಸ್ಥಿತಿಗತಿ ಹಾಗೂ ಪ್ರಗತಿ ಸಂಬಂಧ ಆಗಾಗ ಮಾಹಿತಿ ಪಡೆಯಲಾಗುತ್ತದೆ ಎಂದು ಹೇಳಿದರು.
ಐಟಿಡಿಪಿ ಇಲಾಖೆಯ ಅಧಿಕಾರಿ ಹೊನ್ನೇಗೌಡ ಅವರು ಮಕ್ಕಳ ವಿಧ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಗೆ ಸೇರ್ಪಡೆಗೆ ಕ್ರಮವಹಿಸಲಾಗುವುದು. ಯರವ ಸಮುದಾಯದವರಿಗೆ ಮನೆ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮಾನವ ಹಕ್ಕು ಆಯೋಗಕ್ಕೆ ತಿಳಿಸಿದರು.
ಈ ಸಂದರ್ಭ ಮಾತನಾಡಿದ ತಾ.ಪಂ.ಇಒ ಅಪ್ಪಣ್ಣ ಹಾಗೂ ಬಿಟ್ಟಂಗಾಲ ಗ್ರಾ.ಪಂ.ಪಿಡಿಒ ವಿಶ್ವನಾಥ್ ಗ್ರಾಮಸಭೆಯಲ್ಲಿ ನಿರ್ಧರಿಸಿ ನಿವೇಶನ ಒದಗಿಸಲು ಮುಂದಾಗಲಾಗುವುದು ಎಂದು ಹೇಳಿದರು.
ಬೆಂಗಳೂರಿನ ನೈಜ ಹೋರಾಟಗಾರರಾದ ಎಚ್.ಎಂ.ವೆಂಕಟೇಶ್ ಮಾತನಾಡಿ, ಬಾಳುಗೋಡುವಿನಲ್ಲಿ ಯರವ ಹಾಡಿಯಲ್ಲಿ 21 ಕುಟುಂಬಗಳಿದ್ದು, ಪ್ರತೀ ಕುಟುಂಬಕ್ಕೂ ಕನಿಷ್ಠ 5 ಸೆಂಟ್ ಜಾಗ ನೀಡಬೇಕು ಎಂದು ಮನವಿ ಮಾಡಿದರು.
ಕುರಿ, ಕೋಳಿ, ಹಂದಿ ಸಾಕಾಣಿಕೆಗೆ ಸಹಕಾರ ನೀಡಬೇಕು. ಆ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಕೋರಿದರು. ಇದಕ್ಕೆ ಹೋರಾಟಗಾರರಾದ ನಂಜರಾಜ ಅರಸು ಧ್ವನಿಗೂಡಿಸಿದರು.
ಪ್ರಮುಖರಾದ ಗಪ್ಪು, ಕುಣಿಗಲ್ ನರಸಿಂಹ ಮೂರ್ತಿ ಮತ್ತು ಕುಣಿಗಲ್ ನಾಗರಾಜ್ ಅವರು ಇಲ್ಲಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರ್ ರಾಮಚಂದ್ರ, ಪೊಲೀಸ್ ಅಧಿಕಾರಿಗಳು, ಯರವ, ಪಣಿಯ ಆದಿವಾಸಿ ಜನರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.