Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಾಳತ್ತಮನೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಾಳತ್ತಮನೆಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮದಿನಾಚರಣೆ*

ಜನವರಿ 31, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 127ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 32ನೇ ವಾರ್ಷಿಕೋತ್ಸವವು ತಾಳತ್ತಮನೆಯಲ್ಲಿ ಸಂಭ್ರಮದಿಂದ ಆಚರಿಯಲಾಯಿತು.
ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಛತ್ತೀಸ್ ಗಡ್ ಸಬ್ ಇನ್‍ಸ್ಪೆಕ್ಟರ್ ಬಿ.ಐ.ಕುಮಾರ್ (ಸಿಆರ್‍ಪಿಎಫ್) ಉದ್ಘಾಟಿಸಿದರು.
ಮಹಿಳಾ ಆರೋಗ್ಯ ನಿವೃತ್ತ ಸಹಾಯಕಿ ಬೊಟ್ಟೋಳಂಡ ಕಾವೇರಮ್ಮ ನಾಣಯ್ಯ ನೇತಾಜಿ ಸುಭಾಷ್ ಚಂದ್ರ ಬೋಸ್‍ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಕಾಟಕೇರಿಯ ಪ್ರಶಾಂತಿ ರೆಸಾರ್ಟ್ ಮಾಲಿಕರಾದ ಸವಿತ ಅಡಿಕೆರ ಸಂಘದ ಧ್ವಜಾರೋಹಣವನ್ನು ನೇರವೇರಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯ ಹಾಗೂ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಪಿ.ಕೆ.ಜೀವನ್, ಯುವತಿ ಮಂಡಳಿಯ ಅಧ್ಯಕ್ಷರಾದ ಬಿ.ಹೆಚ್.ವಿಶಾಲಕ್ಷಿ ರೈ ಹಾಜರಿದ್ದರು.
ನಂತರ ಸಾರ್ವಜನಿಕ ಪುರುಷರ, ಮಹಿಳೆಯರ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಗುಡ್ಡಗಾಡು ಓಟದ ಸ್ಪರ್ಧೆ, ಸಾರ್ವಜನಿಕ ಪುರಷರ ಗ್ರಾಮೀಣ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಿತು.
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗಳನ್ನು ನಡೆಸಲಾಯಿತು. ವಾಲಿಬಾಲ್ ಪಂದ್ಯಾವಳಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಿದ್ದು, ಫೈನಲ್ ಪಂದ್ಯಾವಳಿಯನ್ನು ಮದೆನಾಡು ಗ್ರಾ.ಪಂ ನ ಅಭಿವೃದ್ಧಿ ಅಧಿಕಾರಿ ಹೇಮಂತ್ ಕುಮಾರ್ ಉದ್ಘಾಟಿಸಿದರು.
ಫೈನಲ್ ಪಂದ್ಯದಲ್ಲಿ ಬಾಣಂಗಾಲ ಸಿಗ್ನೇಚರ್ ಫ್ರೆಂಡ್ಸ್, ತಂಡವು ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಸಂಜೆ ನೆಹರು ಯುವ ಕೇಂದ್ರ ಸಂಘಟನೆಯ ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಮದೆನಾಡು ಪಂಚಾಯತ್ ಸದಸ್ಯ ಜಯರಾಜ್ ಅಗಷ್ಟಿನ್ ಮಾತನಾಡಿ ದಿನದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಎಂ.ಸಿ.ಅಕ್ಕಮ್ಮ, ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಮಹಮ್ಮದ್ ರಫೀಕ್ ಮತ್ತು ನೇತಾಜಿ ಯುವತಿ ಮಂಡಳಿಯ ಮಾಜಿ ಕಾರ್ಯದರ್ಶಿ ಬಿ.ವಿ.ದೇವಕ್ಕಿ ಹಾಗೂ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ನೆಹರು ಯುವ ಕೇಂದ್ರ ಸಂಘಟನೆಯ ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಂತರ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಜೆ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.