Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*
  • *ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*
  • *ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*
  • *ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*
  • *ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*
  • *ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*
  • *ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*
  • *ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*
  • *ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ, ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ : ಸಿಎಂ ಸಿದ್ದರಾಮಯ್ಯ ಕರೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ, ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ : ಸಿಎಂ ಸಿದ್ದರಾಮಯ್ಯ ಕರೆ*

ಫೆಬ್ರವರಿ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ದಾವಣಗೆರೆ ಫೆ.3 NEWS DESK : ಮೌಢ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ , ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು.

ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದು ವಿವರಿಸಿದರು.

ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯವನ್ನು ಧ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಆಶಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, KUWJ ಅಧ್ಯಕ್ಷರಾದ ಶಿವಾನಂದ ತಗಡೂರು, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ತೋಟಗಾರಿಕಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್, ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇ.ಎಂ.ಮಂಜುನಾಥ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*

ಏಪ್ರಿಲ್ 17, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.17 : ಕೊಡಗು ಗೌಡ ಯುವ ವೇದಿಕೆಯ ವತಿಯಿಂದ ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ…

*ನಾಪೋಕ್ಲು ಹಿಂದೂ ಮಲಯಾಳಿ ಸಂಘದಿಂದ ವಿಷು ಹಬ್ಬ ಸಂಭ್ರಮ*

ಏಪ್ರಿಲ್ 16, 2026

*ಮೈತಾಡಿ ಗ್ರಾಮದಲ್ಲಿ ವಿಶ್ವ ಕಲಾ ದಿನ ಆಚರಣೆ*

ಏಪ್ರಿಲ್ 16, 2026

*ಕೆದಮುಳ್ಳೂರಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಹರಿಸೇವೆ ಹಾಗೂ 101 ಕೋಲ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ಅರೆಭಾಷೆ ಗೌಡ ಕ್ರೀಡಾ ಹಬ್ಬದ ಸಂಭ್ರಮ : ವಿವಿಧ ವಿಭಾಗಗಳಲ್ಲಿ ಫುಟ್ಬಾಲ್-ಮಹಿಳೆಯರ ಹಗ್ಗಜಗ್ಗಾಟ*

ಏಪ್ರಿಲ್ 16, 2026

*ಏ.17 ರಿಂದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ಆರಂಭ*

ಏಪ್ರಿಲ್ 16, 2026

*ಶುಭ ಅಕ್ಷಯ ತೃತೀಯ : ಕುಶಾಲನಗರದ ಜಿ.ಆಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಚಿನ್ನ ಖರೀದಿಗೆ ಶುಭ ಸಮಯ : ಆಕರ್ಷಕ ಕೊಡುಗೆಗಳು ನಿಮಗಾಗಿ*

ಏಪ್ರಿಲ್ 16, 2026

*ಏ.18 ಮತ್ತು 19 ರಂದು ರೋಮನ್ ಕ್ಯಾಥೋಲಿಕ್ ಕ್ರೀಡೋತ್ಸವ : ಸಾಧಕರಿಗೆ ಸನ್ಮಾನ*

ಏಪ್ರಿಲ್ 16, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ “ಕೊಡವ ಸಂಸ್ಕೃತಿ ಅಧ್ಯಯನ ಪೀಠ”ದ ಸ್ಥಾಪನೆ : ಸಂಶೋಧನೆ ಸಂರಕ್ಷಣೆ-ಸಂವರ್ಧನೆಗೆ ವಿಶೇಷ ಕಾರ್ಯಯೋಜನೆ : ಅಶೋಕ ಸಂಗಪ್ಪ ಆಲೂರ*

ಏಪ್ರಿಲ್ 16, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.16 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.