Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ : ನಿರಂತರ ಕಲಿಕೆಯಿಂದ ಸಾಧನೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ : ನಿರಂತರ ಕಲಿಕೆಯಿಂದ ಸಾಧನೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

ಫೆಬ್ರವರಿ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಫೆ.3 NEWS DESK : ನಿರಂತರ ಕಲಿಕೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಬಹುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು.
ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
ಪ್ರತಿಯೊಬ್ಬರಲ್ಲೂ ನಾನಾ ತರಹದ ಪ್ರತಿಭೆಯಿರುತ್ತದೆ. ತಮ್ಮ ಪ್ರತಿಭೆಯನ್ನು ತೋರಿಸಲು ವಿವಿಧ ವಿಭಾಗಗಳಲ್ಲಿ ನಡೆಯುವ ಸ್ಪರ್ಧಾ ಕಾರ್ಯಕ್ರಮಗಳನ್ನು ಉಪಯೋಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮಲ್ಲೇ ಕೀಳರಿಮೆ ಬೆಳೆಸಿಕೊಂಡರೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಷ್ಟವಾಗುತ್ತದೆ ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಧೂಮಪಾನ, ಡ್ರಗ್ಸ್ ಸೇವನೆಯಂತಹ ದುಶ್ಚಟಗಳಿಗೆ ವಿದ್ಯಾರ್ಥಿಗಳು ಬಲಿಯಾಗಬಾರದು. ಪೋಷಕರು ನಿಮ್ಮ ಮೇಲೆ ಕನಸು ಕಟ್ಟಿಕೊಂಡಿರುತ್ತಾರೆ. ಅವರ ಕನಸು ನನಸ್ಸು ಮಾಡುವ ಕರ್ತವ್ಯ ವಿದ್ಯಾರ್ಥಿಗಳದ್ದು ಎಂದು ಹೇಳಿದರು.
ಪೋಷಕರು ಮತ್ತು ಶಿಕ್ಷಕರು ಸಮಾನವಾಗಿ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಬುದ್ದಿಹೇಳುವುದರಿಂದ ಎಷ್ಟೋ ಮಕ್ಕಳನ್ನು ಸರಿ ದಾರಿಗೆ ತರಬಹುದು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಭವನ ನಿರ್ಮಾಣದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು, ಮುಂದುವರಿದ ಕಾಮಗಾರಿಗೆ ಅನುದಾನಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರೊಂದಿಗೆ ಮಾತುಕತೆ ನಡೆಸಲಾಗಿತ್ತು. ಮುಂದಿನ ಆರ್ಥಿಕ ಸಾಲಿನಲ್ಲಿ ಅನುದಾನ ನೀಡಲು ಭರವಸೆ ಸಿಕ್ಕಿದೆ ಎಂದು ಇದೇ ಸಂದರ್ಭ ಹೇಳಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಸ್ಥಾಪನೆ ಮಾಡಿರುವ ‘ಆಸರೆ’ ಹೆಸರಿನ ದತ್ತಿ ನಿಧಿಗೆ ಶಾಸಕ ಡಾ.ಮಂತರ್‍ಗೌಡ ವಾರ್ಷಿಕ 20 ಸಾವಿರ ರೂ.ಗಳನ್ನು ನೀಡುವ ಮೂಲಕ ಚಾಲನೆ ನೀಡಿದರು.
ಈಗಾಗಲೇ ದಾನಿಗಳು 1.50ಲಕ್ಷ ರೂ,ನಷ್ಟು ನೀಡಿದ್ದಾರೆ ಎಂದು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವಿ.ಎ.ಲಾರೆನ್ಸ್ ಹೇಳಿದರು. ಮುಂದಿನ ಸಾಲಿನಿಂದ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ತೆರೆಯಲು ಚರ್ಚೆ ನಡೆಯುತ್ತಿತ್ತು. ಶಾಸಕರು ಹೆಚ್ಚಿನ ಆಸಕ್ತಿ ತೋರಿದ್ದಾರೆ ಎಂದು ಹೇಳಿದರು.
ಪದವಿ ಪೂರ್ವ ಕಾಲೇಜು ಹಾಗೂ ಮಾದರಿ ಪ್ರಾಥಮಿಕ ಶಾಲೆಗೆ ಸುಮಾರು 13 ಎಕರೆ ಜಾಗವನ್ನು ದಾನ ಮಾಡಿದ ಚೌಡ್ಲು ಗ್ರಾಮದ ದಿ.ಸಿ.ಕೆ.ಕಾಳಪ್ಪ ಅವರ ಮೊಮ್ಮಗ ಸುಮೇಧಾ ರಾಘವ್ ಅವರನ್ನು ಸನ್ಮಾನಿಸಿಲಾಯಿತು.
ಕಬಡ್ಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ಮಹಮ್ಮದ್ ಫೈಜ್, ಎಸ್.ಎಂ.ದರ್ಶನ್, ಅಬ್ದುಲ್ ರಾಜಿಕ್ ಅವರನ್ನು ಗೌರವಿಸಲಾಯಿತು.
ಶೈಕ್ಷಣಿಕ ಸಾಲಿನಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಎಂ.ಬಿಂದು, ಖತೀಜತ್ ಸಿರಿನ್‍ಶಾನ, ಸಿ.ವಿ.ರಶ್ಮಿ, ಧನುಷ್, ಕೆ.ಎಚ್.ಕಿರ್ತನ್ ಅವರಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.
ವಿವಿಧ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಾದ ಅಮಿಷಿತ್, ಸ್ನೇಹ, ಶಿಫಾ, ಕಿಶೋರ್ ಕುಮಾರ್, ನವನೀತ್, ಟಿಸ್ಮಾ, ಮೊನಿಕಾ, ವಿದ್ಯಾ, ಮದನ್ ಅವರುಗಳಿಗೂ ಬಹುಮಾನ ನೀಡಲಾಯಿತು.
ವೇದಿಕೆಯಲ್ಲಿ ಬಿಇಒ ಎಸ್.ಭಾಗ್ಯಮ್ಮ, ಕಾಲೇಜು ಪ್ರಾಂಶುಪಾಲ ಬಿ.ಎಂ.ಬೆಳಿಯಪ್ಪ, ಪ್ರಭಾರ ಉಪ ಪ್ರಾಂಶುಪಾಲರಾದ ಹೇಮಲತಾ, ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಸೇಖರ್, ನಿವೃತ್ತ ಶಿಕ್ಷಕರಾದ ಎಚ್.ಎಂ.ರಮೇಶ್, ಜೆ.ಸಿ.ಶೇಖರ್, ವಕೀಲರಾದ ಎಚ್.ಸಿ.ನಾಗೇಶ್, ಬಿ.ಇ.ಜಯೇಂದ್ರ, ಪ್ರಮುಖರಾದ ಎಚ್.ಆರ್.ಸುರೇಶ್, ಉಪನ್ಯಾಸಕರುಗಳಾದ ಎಂ.ಬಿ.ತಿಲೋತ್ತಮೆ, ಬಿ.ಬಿ.ಲಲಿತ, ಎಚ್.ಪಿ.ಸರಿತಾ, ಸುನಿತಾ ಕುಮಾರಿ, ಆರ್.ಎ.ಅಕ್ಷತಾ, ಎಚ್.ಡಿ.ಸಮಂತ್, ಆರ್.ಆರ್.ಪ್ರದೀಪ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.