Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಫೆ.13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಫೆ.13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*

ಫೆಬ್ರವರಿ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.3 NEWS DESK : `ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ’ ಅನುಷ್ಠಾನದ ಬಗ್ಗೆ ಸಭೆಯು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಅವರ ಉಪಸ್ಥಿತಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್ ಬಿಡುಗಡೆಗೊಳಿಸಿದರು. ಕರಪತ್ರ ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಎಂ.ಕೆ ಅವರು ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಅವರು ಮಾತನಾಡಿ ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ.
ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ, ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ ಒಟ್ಟು 5 ಎಂ.ಬಿ ಪ್ರಕರಣಗಳಿದ್ದು, ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸೆಲ್ಫ್‍ಕೇರ್ ಕಿಟ್ ಹಾಗೂ ಎಂ.ಸಿ.ಆರ್ ಫೂಟ್‍ವೇರ್ ಗಳನ್ನು ಸಹ ನೀಡಿದ್ದೇವೆ ಎಂದು ಹೇಳಿದರು.
ವ್ಯಾಪಕ ಪ್ರಚಾರ ಕೈಗೊಳ್ಳಲು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನಿಡಲಾಗುತ್ತದೆ ಎಂದು ತಿಳಿಸಿದರು.
ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಡೆಸಲಾಗುತ್ತಿದೆ.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿಗಳು ಡಾ.ಆನಂದ್ ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.
ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದಲ್ಲದೇ, ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಲಾಗುವುದು ಎಂದರು.
ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ ಮಚ್ಚೆಗಳು, ತ್ವಚ್ಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ, ಮಚ್ಚೆಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಡಾ.ಆನಂದ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.