Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ : ಕೇಂದ್ರ ಸರ್ಕಾರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ : ಕೇಂದ್ರ ಸರ್ಕಾರದ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ*

ಫೆಬ್ರವರಿ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಫೆ.5 NEWS DESK : ದಕ್ಷಿಣ ಭಾರತದ ರಾಜ್ಯಗಳಿಗೆ ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ, ರಾಜ್ಯಗಳ ಶಕ್ತಿಯನ್ನು ಕುಂದಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯಗಳ ಶಕ್ತಿ ಕುಂದಿದರೆ ರಾಷ್ಟ್ರದ ಶಕ್ತಿ ಕುಂದುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರದ ಶಕ್ತಿ ವೃದ್ಧಿಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ನೆರವು ನೀಡುವ ಅಗತ್ಯವಿದೆ ಎಂದರು.
ಕರ್ನಾಟಕ ರಾಜ್ಯ ಆದಾಯ ಗಳಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ, ತೆರಿಗೆ ಪಾವತಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಸೇರಬೇಕಾದ ಆರ್ಥಿಕ ಪಾಲನ್ನು ನೀಡುತ್ತಿಲ್ಲವೆಂದು ಆರೋಪಿಸಿದರು.
2017 ರ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿಯೂ ಅಷ್ಟೇ ಮೊತ್ತವನ್ನು ನೀಡಿದೆ. ಆದರೆ ಬಜೆಟ್ ನ ಗಾತ್ರ ಎರಡು ಪಟ್ಟು ಹೆಚ್ಚಾಗಿದೆ, ಗಾತ್ರ ಹೆಚ್ಚಾದಂತೆ ನಮ್ಮ ಪಾಲಿನ ಹಣವನ್ನೂ ಹೆಚ್ಚಿಗೆ ನೀಡಬೇಕಾಗಿತ್ತು, ಆದರೆ ಕೇಂದ್ರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆ ಪರಿಹಾರ ಕೋರಿ ಮನವಿ ಸಲ್ಲಿಸಲಾಗಿತ್ತು, ರೈತರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಹಣ ನೀಡಿಲ್ಲ. ಮೇಕೆದಾಟು, ಮಹಾದಾಯಿ ಸೇರಿದಂತೆ ಬೃಹತ್ ನೀರಾವರಿ ಯೋಜನೆಗಳಿಗೆ ಕೇಂದ್ರ ಅಗತ್ಯ ಸಹಕಾರವನ್ನು ನೀಡುತ್ತಿಲ್ಲ, ನಮ್ಮ ನದಿ ನೀರನ್ನು ನಾವು ಬಳಸಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದರು.
ಕೇಂದ್ರ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ, ಅನುದಾನದ ವಿಚಾರದಲ್ಲಿ ಕಟ್ಟುಕಥೆ ಹೇಳುತ್ತಿದೆ. ಕೇಂದ್ರದ ಮಲತಾಯಿ ಧೋರಣೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ, ಅಧಿವೇಶನದಲ್ಲಿ ಎಳೆ ಎಳೆಯಾಗಿ ವಿವರಿಸುತ್ತೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.
ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಕರ್ನಾಟಕದಿಂದಲೂ ಫೆ.7 ರಂದು ದೆಹಲಿ ಚಲೋ ಹೋರಾಟ ನಡೆಸಲಾಗುತ್ತಿದೆ ಎಂದರು.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕರವೇ ಪ್ರಾನ್ಸಿಸ್ ಡಿಸೋಜ ಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ಪ್ರದಾನ*
Next Article ಮಡಿಕೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭರವಸೆ

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.