Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿ ಡಿಜಿಟಲೀಕರಣ : ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಸಹಕಾರ ಅಗತ್ಯ : ಸಚಿವ ಕೃಷ್ಣ ಬೈರೇಗೌಡ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟ್ರಾರ್ ಕಚೇರಿ ಡಿಜಿಟಲೀಕರಣ : ಕಂದಾಯ ಇಲಾಖೆಯ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಸಹಕಾರ ಅಗತ್ಯ : ಸಚಿವ ಕೃಷ್ಣ ಬೈರೇಗೌಡ

ಫೆಬ್ರವರಿ 5, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.5 NEWS DESK : ಕಂದಾಯ ಕಚೇರಿಗಳಲ್ಲಿ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಕಾರ್ಯ ವಿಳಂಬವಾಗುತ್ತಿದ್ದು, ಸಮಸ್ಯೆ ಜಟಿಲವಾಗುತ್ತಿದೆ. ಜನಸಾಮಾನ್ಯರು ಕಂದಾಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಲು ಅಧಿಕಾರಿಗಳು ಅಗತ್ಯ ಸಹಕಾರ ನೀಡಿ ಜನಪರವಾಗಿ ಕಾರ್ಯನಿರ್ವಹಿಸಬೇಕು. ಕರ್ನಾಟಕ ರಾಜ್ಯ ಸರ್ಕಾರ ಇಂದಿನಿಂದ ಎಲ್ಲಾ ಸರ್ವೇ, ತಾಲ್ಲೂಕು ಕಚೇರಿ ಮತ್ತು ಸಬ್ ರಿಜಿಸ್ಟಾçರ್ ಕಚೇರಿಗಳ ದಾಖಲೆಗಳನ್ನು ಡಿಜಿಟಲೀಕರಣಕ್ಕೆ ಒಳಪಡಿಸಿದೆ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಮಡಿಕೇರಿಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ಅಗತ್ಯ ಕೆಲಸ ಕಾರ್ಯಗಳು ನಿಗದಿತ ವೇಳೆಯಲ್ಲಿ ನಡೆಯದೆ ಉಂಟಾಗುತ್ತಿರುವ ಸಮಸ್ಯೆಗಳ ಬಗೆಹರಿಕೆಗೆ ರಾಜ್ಯ ಸರ್ಕಾರ ಕಳೆದ ಎಂಟು ತಿಂಗಳ ಅವಧಿಯಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಇದರ ಪರಿಣಾಮ ಅರ್ಜಿಗಳ ವಿಲೇವಾರಿ ಮತ್ತು ಪ್ರಕರಣಗಳ ಇತ್ಯರ್ಥ ಪ್ರಸ್ತುತ ಚುರುಕುಗೊಂಡಿದೆ ಎಂದರು.
ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುವ ಮನಸ್ಥಿತಿಯನ್ನು ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಹೊಂದುವುದು ಅವಶ್ಯಕ. ತಮ್ಮ ಮೈಂಡ್ ಸೆಟ್ ಅಪ್ ನ್ನು ಬದಲಾಯಿಸಿಕೊಳ್ಳುವ ಮೂಲಕ ನಾವು ಜನರಿಂದ ಜನರಿಗಾಗಿ ಬಂದವರು ಎಂದು ಅರ್ಜಿದಾರರ ಅಹವಾಲಿಗೆ ತುರ್ತಾಗಿ ಸ್ಪಂದಿಸಬೇಕು ಎಂದು ಕರೆ ನೀಡಿದರು.
ಕೆಲಸ ಮಾಡಿಕೊಡುವುದು ಬೇಡ ಎನ್ನುವುದಕ್ಕೆ ನೂರು ಕಾರಣಗಳು ದೊರಕುತ್ತದೆ, ಅದೇ ಕೆಲಸ ಮಾಡಿಕೊಡಲೇಬೇಕೆನ್ನುವ ಭಾವನೆ ಇದ್ದಲ್ಲಿ ಅದಕ್ಕೆ ಹತ್ತಾರು ಹಾದಿಗಳು ತೆರೆದುಕೊಳ್ಳುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ತಹಶೀಲ್ದಾರ್ ಅವರ ನ್ಯಾಯಾಲಯದಲ್ಲಿ ದಾಖಲಾಗುವ ಯಾವುದೇ ಪ್ರಕರಣಗಳು 3 ತಿಂಗಳ ಒಳಗಾಗಿ ಇತ್ಯರ್ಥಗೊಳ್ಳಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಹಂತದಲ್ಲಿ ನಿಗದಿತ ಅವಧಿ ಕಳೆದರು ಇತ್ಯರ್ಥವಾಗದೆ ಉಳಿದಿದ್ದ 2515 ಪ್ರಕರಣಗಳಲ್ಲಿ ಪ್ರಸ್ತುತ 107 ಪ್ರಕರಣಗಳಷ್ಟೆ ಬಾಕಿಯಾಗಿದೆ. ಶೇ.95 ರಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅದೇ ರೀತಿ ಎಸಿ ನ್ಯಾಯಾಲಯದಲ್ಲಿ ಪ್ರಕರಣಗಳ ಇತ್ಯರ್ಥಕ್ಕೆೆ 6 ತಿಂಗಳ ಕಾಲಾವಕಾಶವಷ್ಟೆ ಇದೆ. ಹೀಗಿದ್ದು, ಅಲ್ಲಿ ಇತ್ಯರ್ಥವಾಗದ, ಐದು ವರ್ಷಕ್ಕೂ ಮೇಲ್ಪಟ್ಟ 32,787 ಪ್ರಕರಣಗಳಿವೆ, ಸುಮಾರು 26 ರಿಂದ 27 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅಂದು ಪ್ರಕರಣಗಳನ್ನು ಬಾಕಿ ಉಳಿಸಿಕೊಂಡವರು ನೀವೆ, ಇಂದು ಇತ್ಯರ್ಥಪಡಿಸಿದವರು ನೀವೆ ಎಂದು ಕೃಷ್ಣ ಬೈರೇಗೌಡ ಅಧಿಕಾರಿಗಳ ಸಹಕಾರವನ್ನು ಶ್ಲಾಘಿಸಿದರು.
::: ಪರಿಹಾರ ಬಿಡುಗಡೆ :::
ರಾಜ್ಯದಾದ್ಯಂತ ‘ಫ್ರೂಟ್ ಆಪ್’ ಮೂಲಕ ನೋಂದಣಿ ಮಾಡಿಕೊಂಡ 31 ಲಕ್ಷ ಬೆಳೆಗಾರರಿಗೆ 650 ಕೋಟಿ ರೂ. ಪರಿಹಾರವನ್ನು ಈಗಾಗಲೆ ಒದಗಿಸಲಾಗಿದೆ. ಇದರ ನಡುವೆಯೂ ಪರಿಹಾರ ದೊರಕದಿರುವ ಪ್ರಕರಣಗಳಿದ್ದಲ್ಲಿ, ಅದನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಈ ಸಂದರ್ಭ ಮಾಹಿತಿ ನೀಡಿ, ಕೊಡಗು ಜಿಲ್ಲೆಯಲ್ಲಿ 11,303 ಕೃಷಿಕ ಫಲಾಬನುಭವಿಗಳಿಗೆ ಈಗಾಗಲೆ 1.81 ಕೋಡಿ ರೂ.ಗಳನ್ನು ಪಾವತಿಸಲಾಗಿದೆಯೆಂದು ತಿಳಿಸಿದರು.
::: ಬಾಡಿಗೆಗೆ ಕೊಳವೆಬಾಯಿ :::
ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು. ಬರದ ಪರಿಸ್ಥಿತಿ ನಿರ್ವಹಿಸುವ ಸಲುವಾಗಿ ರಾಜ್ಯದಾದ್ಯಂತ ಈಗಾಗಲೆ ಸರ್ಕಾರ ಸುಮಾರು 3 ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದುಕೊಂಡಿದೆ. ಜಿಲ್ಲೆಗೆ ಸಂಬಂಧಿಸಿದಂತೆ ತಾಲ್ಲೂಕುವಾರು ಕುಡಿಯವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು, ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಧ ಟೆಂಡರ್ ಕರೆದು ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊನೆಯ ಕ್ಷಣದಲ್ಲಿ ನೀರಿನ ಪೂರೈಕೆಯಲ್ಲಿ ಲೋಪಗಳಾಗಬಾರದೆಂದು ಸಚಿವರು ಹೇಳಿದರು.
:::: ‘ಪೈಕಿ ಖಾತೆ’ :::
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಜಾಗಕ್ಕೆ ಸಂಬಂಧಪಟ್ಟ ಹಲವು ಸಮಸ್ಯೆಗಳಿದ್ದು, ಇವುಗಳನ್ನು ಇತ್ಯರ್ಥ ಪಡಿಸುವ ಬಗ್ಗೆ ಸಚಿವರು ಸಮಾಲೋಚಿಸಿದರು.
ಈ ಸಂದರ್ಭ ಕಂದಾಯ ಆಯುಕ್ತ ಮಂಜುನಾಥ್ ಅವರು, ಜಿಲ್ಲೆಯ ಜಾಗದ ಸಮಸ್ಯೆ ಬಗ್ಗೆ ಮಾಹಿತಿ ನೀಡಿ, ರಾಜ್ಯ ವ್ಯಾಪಿ ಅವಿಭಜಿತ ಕುಟುಂಬಳಿಗೆ ಸಂಬಂಧಿಸಿದ ‘ಪೈಕಿ’ ಆರ್‌ಟಿಸಿಗಳಿವೆ. ಇವುಗಳಲ್ಲಿ ಸುಮಾರು 35 ಸಾವಿರ ಆರ್‌ಟಿಸಿಗಳು ಕೊಡಗಿನಲ್ಲೆ ಇವೆ. ಇವುಗಳ ಇತ್ಯರ್ಥಕ್ಕಾಗಿ ಈಗಾಗಲೆ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಇರುವ ಒಟ್ಟು ‘ಪೈಕಿ’ ಆರ್‌ಟಿಸಿಯಲ್ಲಿ 25 ಸಾವಿರ ಪೈಕಿ ಖಾತೆಗಳು ಖಾಸಗಿಯವು. ಇವುಗಳಲ್ಲಿ ಸಮಸ್ಯೆಗಳು ಇಲ್ಲದ ಸುಮಾರು 12 ಸಾವಿರ ಖಾತೆಗಳ ‘ಪೈಕಿ’ ಯನ್ನು ತೆಗೆಯಲು ಕ್ರಮ ಕೈಗೊಳ್ಳಲಾಗಿದೆ. ಉಳಿದವುಗಳಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆಯ ಸಹಕಾರದೊಂದಿಗೆ ಸರ್ವೇ ಕಾರ್ಯಗಳು, ಆಯಾ ಜಾಗದ ಪಟ್ಟೆದಾರರ ಸಮ್ಮುಖದಲ್ಲಿ ನಡೆಸಬೇಕಾಗಿದೆಯೆಂದು ತಿಳಿಸಿದರು.
ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಪೈಕಿ ಖಾತೆಯ 38,300 ಏಕರೆ ಜಾಗದ ಸರ್ವೇ ಕಾರ್ಯ ನಡೆಯುತ್ತಿದೆ. ಈ ಸಂಬಂಧ ತಾಲ್ಲೂಕಿನ 98 ಗ್ರಾಮಗಳಲ್ಲಿ ಪೋಡಿ ಮುಕ್ತ ಗ್ರಾಮ ಕಾರ್ಯಕ್ರಮವನ್ನು ಆಯೋಜಿಸುವ ಬಗ್ಗೆ ಮಾಹಿತಿ ನೀಡಿದರು.
::: ಆಧುನಿಕ ಸರ್ವೆ ಸಲಕರಣೆ :::
ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಜಾಗದ ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಗೆ ಸರ್ವೇಯರ್‌ಗಳನ್ನು ಹಾಗೂ ಆಧುನಿಕ ಸರ್ವೆ ಸಲಕರಣೆಗಳನ್ನು ನೀಡಲು ಸಿದ್ಧ ಇರುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.