Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಫೆಬ್ರವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ದಾವಣಗೆರೆ ಫೆ.9 NEWS DESK : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು’ ಇವನಾರವ, ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು.

ಆರ್ಥಿಕ, ಸಮಾಜಿಕ ಅಸಮಾನತೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ :  ಉಪ್ಪಾರರು ಆರ್ಥಿಕವಾಗಿ , ಸಮಾಜಿಕವಾಗಿ ಹಿಂದುಳಿದಿರುವ ಸಮಾಜ. ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಶಿಕ್ಷಣ, ಆರ್ಥಿಕ ಶಕ್ತಿಯಿಂದ ವಂಚಿತರಾಗಿ ಉದ್ಯೋಗವಿಲ್ಲದೇ ಕೂಲಿ ಮಾಡುವ ಸ್ಥಿತಿ ಉಂಟಾಯಿತು. ಆದರೆ ಉಪ್ಪಾರ ಸಮಾಜ ಮಹಾತ್ಮಾ ಗಾಂಧಿಜಿಯವರು ಬ್ರಿಟಿಷರ ವಿರುದ್ಧ ಹೋರಾಡುವಾಗ ಉಪ್ಪಿನ ಸತ್ಯಾಗ್ರಹ ಮಾಡಿದರು ಅದರಲ್ಲಿ ಉಪ್ಪಾರರ ಕೊಡುಗೆಯೂ ಅಪಾರವಾಗಿತ್ತು ಎಂದರು.

ಜಾತಿ ವ್ಯವಸ್ಥೆಯ ಕಾರಣದಿಂದ ಅಕ್ಷರ ಸಂಸ್ಕೃತಿಯಿಂದ ಎಲ್ಲಾ ಶೂದ್ರರೂ ವಂಚಿತರಾಗಿದ್ದಾರೆ. ಆರ್ಥಿಕ, ಸಮಾಜಿಕ ಅಸಮಾನತೆ ಇದ್ದರೆ ಅದಕ್ಕೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ. ಸಂವಿಧಾನದಲ್ಲಿ ಸಮ ಸಮಾಜ ನಿರ್ಮಾಣವಾಗಬೇಕೆಂದು ಹೇಳಿದೆ. ಶೋಷಣೆಗೊಳಗಾದ ಜನರಿಗೆ ಆರ್ಥಿಕ, ಸಮಾಜಿಕ ಶಕ್ತಿ ತುಂಬಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣಗುರು: ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು. ಶ್ರೀಮಠವು ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಇಂಬು ನೀಡುತ್ತಿರುವುದು ಶ್ಲಾಘನೀಯ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣಗುರುಗಳು ಬೋಧಿಸಿದರು. ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು ಎಂದು ಬಸವಣ್ಣನವರು ಪ್ರತಿಪಾದಿಸಿದರು ಎಂದರು.

ಶ್ರೇಷ್ಠತೆ ಜಾತಿಯಿಂದಲ್ಲ, ಶಿಕ್ಷಣದಿಂದ ಬರುತ್ತದೆ :  ಸಮುದಾಯಗಳು ಸೂಕ್ತರೀತಿಯಲ್ಲಿ ಅಭಿವೃದ್ದಿಹೊಂದಬಾರದೆಂಬ ಉದ್ದೇಶದಿಂದ ದಾರಿ ತಪ್ಪುಸುವವರು ಬಹಳಷ್ಟಿದ್ದಾರೆ. ಚರಿತ್ರೆ ತಿಳಿದಿರುವವರು ಮಾತ್ರ ಭವಿಷ್ಯ ನಿರ್ಮಿಸಲು ಸಾಧ್ಯ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ತುಂಬಿದಾಗ ಮಾತ್ರ ದೇಶಕ್ಕೆ ಬಂದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಶ್ರೇಷ್ಠತೆ ಎಂಬುದು ಜಾತಿಯಿಂದ ಬರುವುದಲ್ಲ. ಅದು ನಮ್ಮ ಶಿಕ್ಷಣ,ಪರಿಶ್ರಮದಿಂದ ಬರುತ್ತದೆ ಎಂದರು.

ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ :  ತಳಮಟ್ಟದ ಜನರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕಿಸಿದರು. ಆದರೆ ರಾಜ್ಯದ 150 ಕೋಟಿ ಮಹಿಳೆಯರು ಜೂನ್ 11 ರಿಂದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಜನಪರ ಯೋಜನೆಗಳ ಬಗ್ಗೆ ಇಚ್ಛಾಶಕ್ತಿ ತೋರದ ಪಕ್ಷಗಳು, ಮೊದಲಿಗೆ ಯೋಜನೆಗಳನ್ನು ಜಾರಿ ಮಾಡಿ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಟೀಕಿಸುತ್ತಾರೆ.ಆದರೆ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದರು. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ ಎಂದರು.

ಭರವಸೆ :  ಉಪ್ಪಾರ ಸಮಾಜಕ್ಕೆ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಬಹಳಷ್ಟು ಕೆಲಸಗಳನ್ನು ಮಾಡಿದ್ದು, ಸರ್ಕಾರದ ವತಿಯಿಂದ ಭಗೀರಥ ಜಯಂತಿ ಆಚರಣೆ ಹಾಗೂ ಭಗೀರಥ ಮಂಡಳಿ ಸ್ಥಾಪನೆಯಾಗಿದ್ದರೆ ಅದಕ್ಕೆ ಸ್ವಾಮೀಜಿಯವರು ಕಾರಣ ಎಂದರು. ಸಂಸ್ಥೆಗೆ ಸ್ವಾಮೀಜಿಗಳ ಜಮೀನು ಕೊಡಬೇಕೆಂಬ ಮನವಿಗೆ ಸ್ಪಂದಿಸಿ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿ, ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವರು ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಸಚಿವರಾ ಕೆ.ಹೆಚ್. ಮುನಿಯಪ್ಪ , ಸತೀಶ್ ಜಾರಕೀಹೊಳಿ, ಉಸ್ತುವಾರಿ ಸಚಿವ ಡಾ: ಕೆ. ಸುಧಾಕರ್ , ಶಾಸಕರಾದ ಗೋವಿಂದಪ್ಪ, ಶ್ರೀನಿವಾಸ್, ಪುಟ್ಟಸ್ವಾಮಿ ಗೌಡ, ಮಾಜಿ ಸಂಸದ ಚಂದ್ರಪ್ಪ, ಉಪ್ಪಾರ ಸಮಾಜದ ಮುಖಂಡರು, ಸಾಲುಮರದ ತಿಮ್ಮಕ್ಕ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.