ಮಡಿಕೇರಿ ಫೆ.10 NEWS DESK : ಬಸ್ ಡಿಕ್ಕಿಯಾಗಿ ಹಾನಿಗೊಳಗಾಗಿದ್ದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ. ಘಟನೆ ನಡೆದು ಆರು ತಿಂಗಳು ಕಳೆದರೂ ಕಾಮಗಾರಿ ಚುರುಕು ಪಡೆಯದ ಕಾರಣ ಸಾರ್ವಜನಿಕ ವಲಯದಲ್ಲಿ ಟೀಕೆಗಳು ಕೇಳಿ ಬಂದಿತ್ತು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಜನರಲ್ ತಿಮ್ಮಯ್ಯ ವೃತ್ತದ ಅಭಿವೃದ್ಧಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿತ್ತು. ಇದೀಗ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅವರು ಇಂದು ಗುಣಮಟ್ಟ ಪರಿಶಿಲಿಸಿದರು. ಈ ಸಂದರ್ಭ ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತಿತರರು ಹಾಜರಿದ್ದರು.








