Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಒಮ್ಮ ತೆಳ್ಚಿ ಬುಡಿ” ಪುಸ್ತಕ ಬಿಡುಗಡೆ : ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ : ಪಂದ್ಯಂಡ ರೇಣುಕಾ ಸೋಮಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಒಮ್ಮ ತೆಳ್ಚಿ ಬುಡಿ” ಪುಸ್ತಕ ಬಿಡುಗಡೆ : ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ : ಪಂದ್ಯಂಡ ರೇಣುಕಾ ಸೋಮಯ್ಯ*

ಫೆಬ್ರವರಿ 10, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.10 NEWS DESK : ಕಲಿಕೆ ಎನ್ನುವುದು ನಿರಂತರವಾದದ್ದು, ಇದಕ್ಕೆ ಅಂತ್ಯವಿಲ್ಲ. ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಛಲ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಸಾಹಿತಿ ಪಂದ್ಯಂಡ ರೇಣುಕಾ ಸೋಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದ ಪತ್ರಿಕಾಭವನದಲ್ಲಿ ಕೊಡವ ಮಕ್ಕಡ ಕೂಟದ 83ನೇ ಪುಸ್ತಕ ಹಾಗೂ ಪಂದ್ಯಂಡ ರೇಣುಕಾ ಸೋಮಯ್ಯ ಅವರ “ಒಮ್ಮ ತೆಳ್ಚಿ ಬುಡಿ” 2ನೇ ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕುಲಿಯುತ್ತ ಇರುತ್ತಾನೆ. ಯಾರಲ್ಲಿ ಕಲಿಯುವ ಪ್ರಯತ್ನ, ಶ್ರಮ ಇರುತ್ತದೆಯೋ ಅವರು ಸಾಧನೆಯ ಹಾದಿ ಹಿಡಿಯುತ್ತಾರೆ. ಗುರಿ ಸಾಧಿಸಲು ಮುಖ್ಯವಾಗಿ ಬೇಕಾಗಿರುವುದು ಆತ್ಮವಿಶ್ವಾಸ ಎಂದು ಸಲಹೆ ನೀಡಿದರು.
ಸಾಹಿತ್ಯ ಲೋಕದ ಅನೇಕ ಪ್ರಕಾರಗಳಲ್ಲಿ ಹಾಸ್ಯವೂ ಒಂದು. ಇಂದಿನ ಆಧುನಿಕ ಸಮಾಜದಲ್ಲಿ ಒತ್ತಡದ ಕಾರ್ಯನಿರ್ವಹಣೆ ಮತ್ತು ಜಂಜಾಟದ ಬದುಕಿನಿಂದ ಮುಕ್ತಿ ದೊರೆಯಲಿ ಎಂಬ ಕಾರಣಕ್ಕೆ ದಿನನಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಕೆಲವು ವಿಚಾರಗಳನ್ನು ಸಂಗ್ರಹಿಸಿ ನನ್ನದೇ ಆದ ರೀತಿಯಲ್ಲಿ ವಿವರಿಸಿರುವ “ಒಮ್ಮ ತೆಳ್ಚಿ ಬುಡಿ” ಪುಸ್ತಕದ ಮೂಲಕ ನಗಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಪುಸ್ತಕದಲ್ಲಿ ದೈನಂದಿನ ವಿಚಾರಗಳ ಕುರಿತು ಬರೆಯಲಾಗಿದ್ದು, ಚೋಮ-ಚೋಂದ್ ಹೆಸರಿನ ದಂಪತಿ ನಡುವೆ ಇರುವ ತಮಾಷೆ, ಪ್ರೀತಿ, ಒಬ್ಬರಿಗೊಬ್ಬರಿಗೆ ನೀಡುವ ಬೆಂಬಲ, ಜಗಳ, ಬೈಗುಳ ಎಲ್ಲಾ ಕೂಡಿದೆ. ಇದು ತಮಾಷೆಯ ವಿಷಯವಾಗಿದ್ದರೂ, ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಕೃತಿಯಾಗಿದೆ ಎಂದ ರೇಣುಕಾ ಸೋಮಯ್ಯ ಅವರು, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಪುಸ್ತಕ ದಾನಿಗಳು ಹಾಗೂ ಪುಸ್ತಕ ಬಿಡುಗಡೆಗಡೆಗೆ ಸಹಕರಿಸಿದವರಿಗೆ ಇದೇ ಸಂದರ್ಭ ಧನ್ಯವಾದ ಸಲ್ಲಿಸಿದರು.
“ಒಮ್ಮ ತೆಳ್ಚಿ ಬುಡಿ” ಕೃತಿ ಬಿಡುಗಡೆಗೊಳಿಸಿ ಮಾತನಾಡಿದ, ಮಾಜಿ ಸೈನಿಕ, ನಟ, ನಿರ್ದೇಶಕ, ನಿರ್ಮಾಪಕ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ಪ್ರಸ್ತುತ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಳದಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ ಎಂದರು.
ಪುಸ್ತಕವನ್ನು ಎಲ್ಲರೂ ಬರೆಯುತ್ತಾರೆ, ಆದರೆ ಅದು ಓದುವವರಿಗೆ ತಲುಪಬೇಕಾಗಿದೆ. ಪುಸ್ತಕ ಬಿಡುಗಡೆ ಜೊತೆಗೆ ಪ್ರಚಾರವು ಹೆಚ್ಚಾಗಬೇಕು, ಆ ಮೂಲಕ ಪುಸ್ತಕ ಬರೆಯುವವರಿಗೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದರು.
ಈಗಾಗಲೇ ಕೊಡವ ಮಕ್ಕಡ ಕೂಟದ ಮೂಲಕ ಹಲವು ಬರಹಗಾರರಿಗೆ ಪ್ರೋತ್ಸಾಹ ನೀಡಲಾಗಿದ್ದು, ಕೊಡಗಿನ ಸಾಹಿತ್ಯ ಕ್ಷೇತ್ರದ ಪ್ರತಿಭಾವಂತರನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಶೀಘ್ರದಲ್ಲೇ 100ನೇ ಪುಸ್ತಕವನ್ನು ಹೊರತರುವ ಮೂಲಕ ಹೊಸ ದಾಖಲೆ ಬರೆಯುವಂತಾಗಲಿ ಎಂದು ಶುಭ ಹಾರೈಸಿದರು.
ಮತ್ತೊಬ್ಬ ಮಾಜಿ ಯೋಧ ಹಾಗೂ ಸಮಾಜ ಸೇವಕ ನಂದಿನೆರವಂಡ ಸಜನ್ ಪೂವಣ್ಣ ಮಾತನಾಡಿ, ಎಲ್ಲರನ್ನು ನಗಿಸುವ ಕಾರ್ಯ ಸುಲಭದ ಮಾತಲ್ಲ, ಅದೊಂದು ಅದ್ಭುತ ಕಲೆ. ಇದೇ ಕಾರಣಕ್ಕೆ ತನ್ನ ತಾಯಿಯ ಹೆಸರಿನಲ್ಲಿ ಪುಸ್ತಕ ಬಿಡುಗಡೆಗೆ ಸಹಕಾರ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಕೊಡವ ಪುಸ್ತಕಗಳಿಗೆ ಹೆಚ್ಚು ಪ್ರೋತ್ಸಾಹ ದೊರಕುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು, ಮಾರ್ಚ್ ಅಂತ್ಯದೊಳಗೆ ಕೂಟದ ವತಿಯಿಂದ ಇನ್ನೂ 17 ಪುಸ್ತಕಗಳು ಬಿಡುಗಡೆಯಾಗಲಿದ್ದು, ಆ ಮೂಲಕ ಒಟ್ಟು 100 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಕೂಟ ಈಗಾಗಲೇ ಪ್ರಕಟಿಸಿರುವ 82 ಪುಸ್ತಕಗಳಲ್ಲಿ ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಚಿಗುರೆಲೆಗಳು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ, ಅಗ್ನಿಯಾತ್ರೆ ಪುಸ್ತಕಕ್ಕೆ “ಗೌರಮ್ಮ ದತ್ತಿ ನಿಧಿ “ಪ್ರಶಸ್ತಿ ಲಭಿಸಿದೆ. ನಾಲ್ಕು ಪುಸ್ತಕಗಳು ಕೊಡವ ಸಿನಿಮಾವಾಗಿದೆ. 1965ರ ಯುದ್ಧ ಹಾಗೂ ಕೊಡಗಿನ ಮಹಾವೀರ ಸ್ಕ್ವಾ.ಲೀ ಅಜ್ಜಮಾಡ ದೇವಯ್ಯ ಅವರ ಬಗ್ಗೆ ಜೀವನಾಧರಿತ ಬಾಲಿವುಡ್ ಸಿನಿಮಾ ಚಿತ್ರೀಕರಣಕ್ಕೆ ತಯಾರಿ ಹಂತದಲ್ಲಿದೆ ಎಂದರು.
ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು 82 ಕೃತಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇದೀಗ 83ನೇ ಪುಸ್ತಕ ಹಾಗೂ ಲೇಖಕಿ ಪಂದ್ಯಂಡ ರೇಣುಕಾ ಸೋಮಯ್ಯ ಅವರ ಎರಡನೇ ಪುಸ್ತಕ “ಒಮ್ಮ ತೆಳ್ಚಿ ಬುಡಿ” ಕೊಡವ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಗಿದೆ.
2013ನೇ ಫೆಬ್ರವರಿ 18 ರಂದು ರಚನೆಗೊಂಡ ಕೊಡವ ಮಕ್ಕಡ ಕೂಟ ಇದೀಗ 12ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕೊಡವ ಸಾಹಿತ್ಯ, ಸಂಸ್ಕೃತಿ , ಪದ್ಧತಿ, ಕೊಡವ ಮಹಾನ್ ವ್ಯಕ್ತಿಗಳ ಸ್ಮರಣೆಯನ್ನು ನಡೆಸುತ್ತಾ ಬರುತ್ತಿದೆ.
ಕೊಡವ ಸಾಂಸ್ಕೃತಿಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಹಾಗೂ ಆಸಕ್ತಿಯನ್ನು ನಿರಂತರವಾಗಿ ಮೂಡಿಸಲಾಗುತ್ತಿದೆ. ಮಕ್ಕಳು ಕೊಡವ ಸಂಸ್ಕೃತಿ ಯಿಂದ ದೂರವಾಗುತ್ತಿದ್ದಾರೆ ಎನ್ನುವ ಹಿರಿಯರ ಟೀಕೆಯನ್ನು ದೂರ ಮಾಡಿ ಹಿರಿಯರೇ ಅಚ್ಚರಿ ಪಡುವಂತ ಕಾರ್ಯಕ್ರಮಗಳನ್ನು ಕೂಟದ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಎಲ್ಲಾ ಕಾರ್ಯಕ್ರಮಗಳಲ್ಲಿ ದಕ್ಷಿಣ ಭಾರತದ ಮೊದಲ ಜಾನಪದ ಕೃತಿಯಾಗಿರುವ “ಪಟ್ಟೋಲೆ ಪಳಮೆ”ಯನ್ನು ಹಂಚುತ್ತಿದೆ. ಆ ಮೂಲಕ ಕೊಡವ ಸಂಸ್ಕೃತಿಯ ಬೆಳವಣಿಗೆಗೂ ಕಾರಣವಾಗಿದೆ.
ಮರೆತು ಹೋಗಿದ್ದ ಹಿರಿಯರನ್ನು ನೆನಪು ಮಾಡಿಕೊಡುವುದು, ಅವರ ಜನ್ಮದಿನ ಆಚರಿಸುವುದು, ಅವರ ಪ್ರತಿಮೆಗಳನ್ನು ಅನಾವರಣಗೊಳಿಸುವುದು ಸೇರಿದಂತೆ ಹಲವು ಕಾರ್ಯವನ್ನು ಹಮ್ಮಿಕೊಂಡು ಪ್ರಶಂಸೆಗೆ ಪಾತ್ರವಾಗಿದೆ.
ಕೊಂಗಂಡ ಗಣಪತಿ, ಹರಿದಾಸ ಅಪ್ಪನೆರವಂಡ ಅಪ್ಪಚ್ಚಕವಿ, ಕೊರವಂಡ ನಂಜಪ್ಪ, ಪಂದ್ಯಂಡ ಬೆಳ್ಯಪ್ಪ ಅವರ ಹೆಸರುಗಳನ್ನು ರಸ್ತೆಗಳಿಗೆ ಮರು ನಾಮಕರಣ ಮಾಡಲಾಗಿದೆ. 4ಸಾವಿರ ಆಟ್‍ಪಾಟ್ ಪಡಿಪು ಪುಸ್ತಕವನ್ನು ಮುದ್ರಿಸಿ ಉಚಿತವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವು ಮಕ್ಕಳಿಗೆ ನೀಡಲಾಗಿದೆ ಎಂದು ಅಯ್ಯಪ್ಪ ಹೇಳಿದರು.
ಕೊಡವ ಮಕ್ಕಡ ಕೂಟದ ನಿರಂತರ ಪ್ರಯತ್ನದಿಂದ ಮಡಿಕೇರಿಯ ಹಳೆಯ ಖಾಸಗಿ ಬಸ್ ನಿಲ್ದಾಣದ ಸಮೀಪ “ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ” ಅವರ ವೃತ್ತವನ್ನ ನಿರ್ಮಿಸಿ, ಅದೇ ಜಾಗದಲ್ಲಿ ಅಜ್ಜಮಾಡ ಕುಟುಂಬಸ್ಥರ ಸಹಕಾರದೊಂದಿಗೆ ಅಜ್ಜಮಾಡ ದೇವಯ್ಯ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಆ ಮೂಲಕ ವೀರ ಸೇನಾನಿಯ ನೆನಪನ್ನು ಚಿರಾಯುವಾಗಿಸಿರುವ ಹೆಗ್ಗಳಿಕೆ ಕೊಡವ ಮಕ್ಕಡ ಕೂಟದ್ದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ತೆನ್ನಿರ ಪೊನ್ನಮ್ಮ ಉತ್ತಪ್ಪ ಹಾಗೂ ಪೊನ್ನಚೆಟ್ಟೀರ ಪ್ರದೀಪ್ ಉಪಸ್ಥಿತರಿದ್ದರು.

::: ಪಂದ್ಯಂಡ ರೇಣುಕಾ ಸೋಮಯ್ಯ ಪರಿಚಯ ::
ಓಡಿಯಂಡ ಜಿ.ಭೀಮಯ್ಯ ಮತ್ತು ಸರಸು ಭೀಮಯ್ಯ ದಂಪತಿಯ ಎರಡನೇ ಪುತ್ರಿಯಾಗಿರುವ ಪಂದ್ಯಂಡ ರೇಣುಕಾ ಸೋಮಯ್ಯ, ಶ್ರೀಮತಿ ಡಿ.ಚೆನ್ನಮ್ಮ ಜೂನಿಯರ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡಿದ್ದು, ಪದವಿಯನ್ನು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮುಗಿಸಿದ್ದಾರೆ.
ವಿರಾಜಪೇಟೆ ತಾಲೂಕಿನ ಹೊಸೂರು ಗ್ರಾಮದ ಪಂದ್ಯಂಡ ಸುರೇಶ್ ಸೋಮಯ್ಯ ಅವರನ್ನು ವಿವಾಹವಾಗಿದ್ದು, ಈ ದಂಪತಿಗೆ ವಿಕಾಸ್ ಕಾವೇರಪ್ಪ ಪುತ್ರ ಇದ್ದಾನೆ.
ಪಂದ್ಯಂಡ ರೇಣುಕಾ ಸೋಮಯ್ಯ ಅವರು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಹಲವು ಬರಹಗಳನ್ನು ಬರೆದಿದ್ದು, ಕನ್ನಡದಲ್ಲಿ ಹಾಯ್ಕು, ರುಬಾಯಿ ಟಂಕ, ಕಥೆ, ಕವನ, ಹಾಸ್ಯ, ಚುಟುಕು, ಲೇಖನ, ನೀತಿ ಕಥೆ, ಜಡೆ ಕವನ, ಪಾಟ್, ಮುಕ್ತಕ ಎಲ್ಲಾ ತರದ ಷಟ್ಪದಿ ಛಂದಸ್ಸು, ತ್ರಿಪದಿ, ಅದಿ ಅಂತ್ಯ ಪ್ರಾಸ ಕವನ ಸೇರಿದಂತೆ ಎಲ್ಲಾ ತರದ ಬರಹಗಳನ್ನು ಬರೆದಿದ್ದಾರೆ.
ಇವರಿಗೆ ಅತ್ಯುತ್ತಮ, ಉತ್ತಮ, ಪ್ರಥಮ, ದ್ವಿತೀಯ ಎಂದು 200 ಬಹುಮಾನ ಸೇರಿದಂತೆ ರಾಜ್ಯಮಟ್ಟದ ಆನ್‍ಲೈನ್ ಪ್ರಶಸ್ತಿ, ರಾಷ್ಟ್ರೀಯ ಸಾಹಿತ್ಯ ರತ್ನ ಪ್ರಶಸ್ತಿ, ರಾಜ್ಯ ಮಟ್ಟದ ಕಾವ್ಯ ಸಿರಿ ಪ್ರಶಸ್ತಿ, ಕೊಡವ ಭಾಷೆಯ ಆದಿ ಅಂತ್ಯ ಪ್ರಾಸದ ಕವಿತ್ರಿ ಎನ್ನುವ ಬಿರುದು (ಅವಾರ್ಡ್) ಮತ್ತು ಪ್ರಶಸ್ತಿ ಲಭಿಸಿದೆ.
ಪ್ರಸ್ತುತ ವಿರಾಜಪೇಟೆ ತಾಲೂಕಿನ ಸಿರಿಗನ್ನಡ ವೇದಿಕೆಯ ಮಹಿಳಾ ಅಧ್ಯಕ್ಷೆಯಾಗಿದ್ದು, ಕವಿ ಸಾಹಿತಿ ಬಳಗದ ಕೊಡಗು ಜಿಲ್ಲಾ ಅಧ್ಯಕ್ಷೆ, ಹೊಸೂರ್ ಕೊಡವ ಸಂಘದ ನಿರ್ದೇಶಕಿ, ಹೊಸೂರ್ ಮಹಿಳಾ ಸಮಾಜದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಇವರು ಬರೆದ ಕಥೆ, ಕವನ, ತಮಾಷೆ, ಐಲಾಟ ಲೇಖನ, ಚುಟುಕು, ಮುಕ್ತಕ ಸೇರಿದಂತೆ ವಿವಿಧ ಬಗೆಯ ಬರಹಗಳು ಬ್ರಹ್ಮಗಿರಿ, ಪೂಮಾಲೆ ನಾಡಿನ ಸಮಾಚಾರ, ಶಕ್ತಿ ಪ್ರತಿಕೆಯಲ್ಲಿ ಪ್ರಕಟಗೊಂಡಿದೆ. ಇವರು ವಾರೋದಿ ಕನ್ನಡ ವಾಟ್ಸಪ್ ಕೂಟ ನಡೆಸುವ ಸ್ಪರ್ಧೆ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಲ್ಲದೆ ಇವರ ಕೊಡವ ಹಾಗೂ ಕನ್ನಡ ಭಾಷೆಯಲ್ಲಿ ಬರೆದ ಐವತ್ತಕ್ಕೂ ಹೆಚ್ಚು ಹಾಡು ಜನಮನ್ನಣೆ ಪಡೆದುಕೊಂಡಿದೆ. ವಾಟ್ಸಪ್ ಕೂಟದಲ್ಲಿ ಅತ್ಯುತ್ತಮ ತೀರ್ಪುಗಾರ್ತಿ ಹಾಗೂ ವಿಮರ್ಶಕಿ ಎನ್ನುವ ಬಿರುದು ದೊರಕಿದೆ. ಇದಲ್ಲದೆ ಇವರು ತಮ್ಮ ಪಿಯುಸಿ ಮಕ್ಕಳ ವಾಟ್ಸಪ್ ಗ್ರೂಪ್ ರಚಿಸಿದ್ದು, ಸ್ನೇಹಿತರ ಸಹಾಕರದಿಂದ ಸ್ನೇಹ ಸಮ್ಮಿಲನ ಎನ್ನುವ ಕಾರ್ಯಕ್ರಮವನ್ನು ತಾನು ಓದಿದ ಕಾಲೇಜಿನಲ್ಲೇ ಮಾಡಿದ್ದಾರೆ. ಅಲ್ಲದೆ ಒಬ್ಬ ಅಂಗವಿಕರಿಗೆ ಸ್ನೇಹಿತರ ಸಹಕಾರದಿಂದ 50 ಸಾವಿರ ಸಂಗ್ರಹಿಸಿ ನೀಡಿದ್ದಾರೆ. ಇದಕ್ಕೆ ಇವರ ಕುಟುಂಬದ ಸಹಕಾರವಿದ್ದು, ಪ್ರತಿವರ್ಷ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವ ಪಂದ್ಯಂಡ ರೇಣುಕಾ ಸೋಮಯ್ಯ ಅವರ “ಒಮ್ಮ ತೆಳ್ಚಿ ಬುಡಿ” 2ನೇ ಪುಸ್ತಕವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.