Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗು : ವನ್ಯ ಜೀವಿಗಳ ಉಪಟಳ ತಡೆಯಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು

*ಕೊಡಗು : ವನ್ಯ ಜೀವಿಗಳ ಉಪಟಳ ತಡೆಯಲು ಅಗತ್ಯ ಕ್ರಮ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

February 13, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.13 NEWS DESK : ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಯುವ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಂಬಂಧಪಟ್ಟವರ ಉಪಸ್ಥಿತಿಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕರ್ನಲ್(ನಿವೃತ್ತ) ಸಿ.ಪಿ.ಮುತ್ತಣ್ಣ ಅವರು ಕೊಡಗು ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಹೇಳಿದರು.
ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ನಾಗರಿಕರು ಭಯದಿಂದ ಬದುಕುವಂತಾಗಿದೆ. ಆ ನಿಟ್ಟಿನಲ್ಲಿ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷವನ್ನು ನಿಯಂತ್ರಿಸುವಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕಿದೆ. ಪದೇ ಪದೇ ಗ್ರಾಮಗಳಿಗೆ ಬರುವ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಸಲಹೆ ನೀಡಿದರು.
ಟ್ರಂಚ್‍ಗಳ ನಿರ್ಮಾಣ, ಆನೆ ಓಡಾಡುವ ಮಾರ್ಗ ಸಂಬಂಧಿಸಿದಂತೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡುವುದು. ಎಲಿಪೆಂಟ್ ಟಾಸ್ಕ್‍ಪೋರ್ಸ್ ಮತ್ತು ರ್ಯಾಪಿಡ್ ರೆಸ್ಪಾನ್ಸ್ ತಂಡಗಳು ಎಸ್‍ಒಪಿ ಮಾದರಿಯಲ್ಲಿ ಕಾರ್ಯನಿರ್ವಹಿಸಿ ಕಾಡಾನೆಯನ್ನು ನಿಯಂತ್ರಿಸಲು ಮುಂದಾಗಬೇಕಿದೆ ಎಂದು ಮನವಿ ಮಾಡಿದರು.
ರೈಲ್ವೆ ಬ್ಯಾರಿಕೇಡ್‍ಗಳ ನಿರ್ಮಾಣ ಮಾಡಿದರೂ ಸಹ ಆನೆಗಳು ಅದನ್ನು ದಾಟಿ ಬರುತ್ತವೆ. ಈ ಸಂಬಂಧ ಇದಕ್ಕಿಂತ ಹೆಚ್ಚಿನ ಉತ್ತಮ ಮಟ್ಟದ ಕ್ರಮ ಕೈಗೊಳ್ಳುವುದು ಈ ಸಂಬಂಧ ಕ್ರಿಯಾಯೋಜನೆಯನ್ನು ತಯಾರಿಸಿ ವನ್ಯಪ್ರಾಣಿಗಳ ಹಾವಳಿ ನಿಯಂತ್ರಣ ಸಂಬಂಧ ಅಗತ್ಯ ಮುನ್ನೆಚ್ಚರ ಕ್ರಮವಹಿಸಬೇಕಿದೆ ಎಂದರು.
ಅಗತ್ಯವಿರುವ ಕಡೆ ಸೋಲಾರ್ ಲೈಟ್‍ಗಳನ್ನು ಅಳವಡಿಸುವುದು. ಹಾಡಿಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವುದು, ಸೈನ್‍ಬೋರ್ಡ್ ಮೂಲಕ ಅಗತ್ಯ ಮಾಹಿತಿಯನ್ನು ನೀಡುವುದು ಮತ್ತಿತರ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಸಿ.ಪಿ.ಮುತ್ತಣ್ಣ ಮನವಿ ಮಾಡಿದರು.
ಮೋಹನ್ ರಾಜ್ ಮಾತನಾಡಿ ಕಾಡಾನೆಗಳು ದಿನದಲ್ಲಿ ನೂರಾರು ಕಿ.ಮೀ. ಸಂಚರಿಸುತ್ತಿವೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದರು.
ಮತ್ತೊಬ್ಬ ಪ್ರಮುಖರಾದ ಬೋಪಣ್ಣ ಮಾತನಾಡಿ ವನ್ಯಪ್ರಾಣಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಬ್ಯಾರಿಕೇಡ್‍ಗಳ ನಿರ್ಮಾಣ ಮಾಡುವುದು ಅತ್ಯಗತ್ಯವಾಗಿದೆ ಎಂದು ಸಲಹೆ ನೀಡಿದರು.
ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಸಿ.ಜಿ.ಕುಶಾಲಪ್ಪ ಮಾತನಾಡಿ, ಕಾಡಾನೆ ಹಾವಳಿ ತಡೆಯುವಲ್ಲಿ ವಿಶೇಷ ನಿಗಾವಹಿಸಬೇಕಿದೆ ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾತನಾಡಿ, ಪೆಂಚಿಂಗ್ ಹಾಗೂ ಬ್ಯಾರಿಕೇಡ್‍ಗಳನ್ನು ಸರಿಯಾಗಿ ನಿರ್ವಹಣೆ ಮಾಡಿದಲ್ಲಿ ಕಾಡಾನೆ ಹಾವಳಿ ತಡೆಯಬಹುದಾಗಿದೆ. ಜೊತೆಗೆ ಸೋಲಾರ್ ತಂತಿ ಬೇಲಿ ಅಳವಡಿಸಬಹುದಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಿಯಾಯೋಜನೆ ತಯಾರಿಸಲಾಗುವುದು ಎಂದರು.
`ಶನಿವಾರಸಂತೆ, ಬೆಂಡೆಬೆಟ್ಟ, ಆನೆಕಾಡು, ದುಬಾರೆ, ಸಿದ್ದಾಪುರ, ಮಾಲ್ದಾರೆ, ನಾಗರಹೊಳೆ ಈ ವ್ಯಾಪ್ತಿಯಲ್ಲಿ ಹೆಚ್ಚು ಕಾಡಾನೆಗಳು ಸಂಚರಿಸುತ್ತವೆ ಎಂದು ಮಾಹಿತಿ ನೀಡಿದರು.’
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಕಾಡಾನೆಗಳು ಯಾವ ಯಾವ ಪ್ರದೇಶಗಳಲ್ಲಿ ಸಂಚಾರ ಮಾಡುತ್ತವೆ ಎಂಬುದು ಮೊದಲೆ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.
ಯಶವಂತ ಕಾಳಪ್ಪ ಮಾತನಾಡಿ, ಕುಟ್ಟಂದಿ ಸೇರಿದಂತೆ ಇತರೆ ಕಡೆಗಳಲ್ಲಿ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಆನೆಗಳು ಚದುರಿ ಹೋಗುತ್ತವೆ. ಇದರಿಂದ ಕಾಡಾನೆಗಳು ತೋಟಗಳಿಗೆ ಹೋಗುವುದು ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾಡಾನೆ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಸಭೆ ರಚಿಸಬೇಕು. ಆಕಾಶವಾಣಿ ಮೂಲಕ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಬೋಸ್ ಮಾದಪ್ಪ ಮಾತನಾಡಿ ಕಾಡಂಚಿನಲ್ಲಿರುವ ಗ್ರಾಮದ ಜನರಿಗೆ ಪುನರ್ ವಸತಿ ಕಲ್ಪಿಸಬೇಕು. ವನ್ಯಪ್ರಾಣಿಗಳ ಹಾವಳ ತಪ್ಪಿಸಬೇಕು ಎಂದು ಮನವಿ ಮಾಡಿದರು.
ಹಾಡಿಗಳಲ್ಲಿ ಇಂದಿಗೂ ಸಹ ಅಂಗನವಾಡಿ, ಶಾಲೆ, ಆಸ್ಪತ್ರೆ ಇಲ್ಲದೆ ಬದುಕು ದೂಡುತ್ತಿದ್ದಾರೆ. ಇವರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಮಾತನಾಡಿ, ಆರ್‍ಆರ್‍ಟಿ ಮತ್ತು ಇಟಿಎಫ್ ನ್ನು ಒಂದುಗೂಡಿಸಿ ಕಾರ್ಯನಿರ್ವಹಿಸಲು ಮುಂದಾಗಲಾಗಿದೆ ಎಂದು ಹೇಳಿದರು.
ರೈತ ಸಂಘದ ಜಿಲ್ಲಾಧ್ಯಕ್ಷರಾದ ಕುಶಾಲಪ್ಪ ಮಾತನಾಡಿ, ಕಾಡಾನೆ ಹಾವಳಿಯಿಂದಾಗಿ ಕಾಫಿ ಕೊಯ್ಯಲು ಕಾರ್ಮಿಕರು ಮುಂದೆ ಬರುತ್ತಿಲ್ಲ. ವನ್ಯಪ್ರಾಣಿಗಳ ನಿಯಂತ್ರಣ ಮಾಡಿದಾಗ ಮಾತ್ರ ಕಾರ್ಮಿಕರು ಸುರಕ್ಷಿತವಾಗಿ ಕೃಷಿ ಕೆಲಸ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದರು.
ಡಾ.ತಮ್ಮಯ್ಯ, ಕಾರ್ತಿಕ್, ಸಿ.ಪಿ.ಅಯ್ಯಪ್ಪ, ಕೆ.ಎಂ.ನಾಣಯ್ಯ, ಕೃಷ್ಣನ್, ರವಿಚಂಗಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ, ಇತರರು ಕಾಡಾನೆ ಹಾವಳಿ ತಡೆಯುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು.
ವನ್ಯಪ್ರಾಣಿಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಎಲ್ಲರ ಮಾಹಿತಿ ಪಡೆದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ವನ್ಯಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಲಾಗುವುದು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆಗೆ ಸಮಲೋಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

Share. Facebook Twitter Pinterest LinkedIn Tumblr Email WhatsApp
Previous Article*ನಿಟ್ಟೂರಿನಲ್ಲಿ ಮಣ್ಣು ಪರೀಕ್ಷೆ ಅಭಿಯಾನ ಮತ್ತು ಕಾಫಿ ಬೆಳೆಗಾರರಿಗೆ ಕಾರ್ಯಾಗಾರ*
Next Article *ಫೆ.14 ರಿಂದ ವಿದ್ಯುತ್ ಸೇವೆಗಳು ಹಾಗೂ ಸುರಕ್ಷತಾ ಅರಿವು ಸಪ್ತಾಹ ಕಾರ್ಯಕ್ರಮ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.