Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕಸಭಾ ಚುನಾವಣೆ : ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ : ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕಸಭಾ ಚುನಾವಣೆ : ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ : ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಫೆಬ್ರವರಿ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.15 NEWS DESK :  ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗ್ಗೆ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ವಿವಿಧ ತಂಡದ ಅಧಿಕಾರಿಗಳು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಈಗಿನಿಂದಲೇ ಸಿದ್ಧ್ದತೆ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.
ಲೋಕಸಭಾ ಚುನಾವಣೆ ಘೋಷಣೆಯಾದ ಕೂಡಲೇ ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಸ್ಥಳಗಳು ಸೇರಿದಂತೆ ವಿವಿಧೆಡೆ ಅಳವಡಿಸಲಾಗಿರುವ ಜಾಹೀರಾತು, ಪ್ರಕಟಣೆ, ಬ್ಯಾನರ್‍ಗಳನ್ನು ತೆರವುಗೊಳಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಚುನಾವಣಾ ಆಯೋಗದ ನಿರ್ದೇಶನವನ್ನು ಅಧಿಕಾರಿಗಳು ಪಾಲಿಸಬೇಕು. ಸಂಶಯಕ್ಕೆ ಅವಕಾಶ ಮಾಡಬಾರದು. ಮಾಹಿತಿ ತಿಳಿಯದಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅವರು ಸಲಹೆ ಮಾಡಿದರು.
ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆ ತಮಗೆ ನಿಯೋಜಿಸಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಮಾಡಬೇಕು. ಹಣ, ಮದ್ಯ ಸಿಕ್ಕಿಬಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ಜರುಗಿಸಬೇಕು. ಸಿ-ವಿಜಿಲ್ ಆ್ಯಪ್ ಮೂಲಕ ಮಾಹಿತಿ ದೊರೆಯಲಿದ್ದು, ಯಾರೂ ಸಹ ತಡ ಮಾಡದೆ ಆಯಾಯ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ವಿಭಾಗಕ್ಕೆ ಮಾಹಿತಿ ನೀಡಬೇಕು ಎಂದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಗಮನಹರಿಸಬೇಕು. ಮುಕ್ತ, ಶಾಂತಿಯುತ ಹಾಗೂ ನಿರ್ಭೀತಿಯಿಂದ ಚುನಾವಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಚುನಾವಣೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಪೊಲೀಸರು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಕೊಡಗು ಜಿಲ್ಲೆಯಲ್ಲಿ ವಿದ್ಯಾವಂತರ ಸಂಖ್ಯೆ ಹೆಚ್ಚಿದ್ದು, ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಸುಗಮವಾಗಿ ಚುನಾವಣೆ ನಡೆಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಚುನಾವಣಾ ಸಂದರ್ಭದಲ್ಲಿ ಯಾವುದೇ ರೀತಿಯ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಉಲ್ಲಂಘಿಸಿದಲ್ಲಿ ದಂಡವನ್ನು ನಿಯಮಾನುಸಾರ ವಿಧಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ರಾಜಕೀಯ ಪಕ್ಷವಾಗಲೀ, ಅಭ್ಯರ್ಥಿಗಳಾಗಲೀ ಜಾತಿ, ಸಮುದಾಯ, ಧರ್ಮ ಹಾಗೂ ಭಾಷೆಯನ್ನು ಸೇರಿದಂತೆ ಪರಸ್ಪರ ವೈಮನಸ್ಸು ಮೂಡಿಸುವಂತಹ ಚಟುವಟಿಕೆಗಳಲ್ಲಿ ತೊಡಗಬಾರದು, ಈ ಬಗ್ಗೆ ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ಗಮನಹರಿಸಬೇಕು ಎಂದರು.
ದೇವಾಲಯ, ಮಸೀದಿ, ಚರ್ಚ್‍ಗಳಂತಹ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರ ಕಾರ್ಯಕ್ಕೆ ವೇದಿಕೆಯನ್ನಾಗಿ ಬಳಸಬಾರದು, ಈ ಬಗ್ಗೆ ಅಧಿüಕಾರಿಗಳು ಎಚ್ಚರವಹಿಸಬೇಕು ಎಂದು ಬಿಎನ್.ವೀಣಾ ತಿಳಿಸಿದರು.
ಮತದಾರರಿಗೆ ಆಮಿಷ ಮಾಡಬಾರದು. ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗಡೆ ಪ್ರಚಾರ ಮಾಡಬಾರದು. ಚುನಾವಣೆ ಘೋಷಣೆಯಾಗುವುದಕ್ಕೆ ಮುಂಚಿನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಬಹುದಾಗಿದೆ. ಚುನಾವಣಾ ಪ್ರಚಾರ ಕೈಗೊಳ್ಳುವ ಬಗ್ಗೆ ಸ್ಥಳ ಮತ್ತು ಸಮಯದ ಬಗ್ಗೆ ಸ್ಥಳೀಯ ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅನುಮತಿ ಪಡೆಯಬೇಕು. ಮೆರವಣಿಗೆಗೆ ಅನುಮತಿ ಪಡೆಯಬೇಕು. ಚುನಾವಣಾ ಪ್ರಚಾರ ಕಾರ್ಯಕ್ಕಾಗಿ ಧ್ವನಿವರ್ಧಕ ಬಳಸಲು ಅನುಮತಿ ಪಡೆಯುವುದು, ಮೆರವಣಿಗೆ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಉಂಟುಮಾಡಬಾರದು. ಹೀಗೆ ಮಾದರಿ ನೀತಿ ಸಂಹಿತೆ ಪಾಲಿಸುವಂತಾಗಬೇಕು ಎಂದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಸೇರಿದಂತೆ ವಿವಿಧ ತಂಡಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.