Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಲ್ಲುಬಾಯ್ಸ್ ಯುವಕ ಸಂಘದಿಂದ ಆರ್.ಕೆ.ಅಬ್ದುಲ್ ಸಲಾಂ ಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಲ್ಲುಬಾಯ್ಸ್ ಯುವಕ ಸಂಘದಿಂದ ಆರ್.ಕೆ.ಅಬ್ದುಲ್ ಸಲಾಂ ಗೆ ಸನ್ಮಾನ*

ಫೆಬ್ರವರಿ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಫೆ.16 NEWS DESK :  ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ಯುವಕ ಸಂಘದ ವತಿಯಿಂದ ಬಗರ್ ಹುಕುಂ ಅಕ್ರಮ ಸಕ್ರಮ ಸಮಿತಿಯ ನೂತನ ತಾಲೂಕು ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭ ಪುರಸಭೆ ಸದಸ್ಯ ಮಹಮ್ಮದ್ ರಾಫಿ ಮಾತನಾಡಿ, ಜವಬ್ದಾರಿ ಸ್ಥಾನ ಸಿಕ್ಕಿರುವುದು ತುಂಬಾ ಸಂತೋಷದ ವಿಷಯ ಮತ್ತು ಕಲ್ಲುಬಾಯ್ಸ್ ತಂಡದ ವತಿಯಿಂದ ತಾವು ಹುಟ್ಟಿದ ಪ್ರದೇಶದಲ್ಲಿ ಸನ್ಮಾನ ಮಾಡಿ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಒಬ್ಬ ನಾಯಕನಿಗೆ ಏನೇ ಪದವಿ ಬಂದರೂ ತಮ್ಮ ಹುಟ್ಟೂರಿನಲ್ಲಿ ಸಿಗುವ ಗೌರವ, ಸನ್ಮಾನಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸಲಾಂ ಅವರ ಪಕ್ಷ ನಿಷ್ಠೆ, ಪ್ರಾಮಾಣಿಕತೆ, ಅವರ ಬದ್ಧತೆ ಇಂದು ಅವರಿಗೆ ಅಧ್ಯಕ್ಷ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗಿದೆ. ಕಡು ಬಡವರು ಸರಕಾರಿ ಜಾಗದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿದಾರೆ. ಆದರೆ ಅವರಿಗೆ ಇಂದಿಗೂ ಅದನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಸಾದ್ಯವಾಗಿಲ್ಲ. ಈ ಸಮಿತಿ ಮೂಲಕ ಅಕ್ರಮವಾಗಿರುವುದನ್ನು ಸಕ್ರಮಗೊಳಿಸಲು ಈ ಸಮಿತಿ ಇದೆ. ಇದನ್ನು ಕಡುಬಡವರು ಸದುಪಯೋಗ ಪಡಿಸಿಕೊಳ್ಳುವಂತಾಗಲಿ ಎಂದರು.
ವಿರಾಜಪೇಟೆ ತಾಲೂಕು ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ, ಸಾಹಿತಿಗಳಾದ ರಜಿತ ಕಾರ್ಯಪ್ಪ ಮಾತನಾಡಿ ರಾಜ್ಯ ಸರ್ಕಾರದ ಕಂದಾಯ ಸಚಿವರ ಸೂಚನೆಯಂತೆ ಅಕ್ರಮ ಸಕ್ರಮ ಸಮಿತಿ ರಚನೆ ಮಾಡಿರುವುದು ಶ್ಲಾಘನೀಯ. ಸರಕಾರಿ ಜಾಗದಲ್ಲಿ ವಾಸಿಸುತ್ತಿರುವ ಅನೇಕ ಕಡುಬಡವರು ತುಂಡು ಭೂಮಿಯ ಹಕ್ಕನ್ನು ಹೊಂದಿಲ್ಲದೆ ಇರುವುದು ವಿಷಾದನೀಯ ಎಂದರು.
ಅವರಿಗೆ ನೂತನ ಅಧ್ಯಕ್ಷರ ಮೂಲಕ ಭೂಮಿ ಹಕ್ಕನ್ನು ಪಡೆದುಕೊಳ್ಳುವಂತಾಗಲಿ, ಇದೀಗ ನೂತನ ಅಧ್ಯಕ್ಷರ ಕಚೇರಿಯನ್ನು ಕೂಡ ಆರಂಭಿಸಲಾಗಿದ್ದು, ಇದನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳುವಂತಾಗಲಿ ಎಂದರಲ್ಲದೆ ನಮ್ಮ ಗ್ರಾಮದವರೇ ಆದ ಸಲಾಂ ಅವರಿಗೆ ಅಧ್ಯಕ್ಷ ಗಿರಿ ದೊರಕಿರುವುದು ಅಭಿನಂದನಾರ್ಹ ಎಂದರು.
ಆರ್ಜಿ ಗ್ರಾ.ಪಂ ಸದಸ್ಯರಾದ ಕೆ.ಟಿ.ಬಷೀರ್ ಮಾತನಾಡಿ, ಈ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮತ್ತು ಆರೋಗ್ಯ ಕೇಂದ್ರದ ಅವಶ್ಯಕತೆ ಇದೆ, ಶಾಸಕರ ಗಮನಕ್ಕೆ ತಂದು ಆದಷ್ಟು ಬೇಗನೇ ಈ ಕೆಲಸವನ್ನು ಮಾಡಿಸಿಕೊಡುವಂತೆ ನಾಗರಿಕರ ಪರವಾಗಿ ಸಲಾಂ ಅವರಲ್ಲಿ ಮನವಿ ಮಾಡಿದರು.
ಪುರಸಭೆ ಸದಸ್ಯ ಮತೀನ್ ಮಾತನಾಡಿ, ಸಲಾಂ ಒಬ್ಬ ಉತ್ತಮ ಕಾರ್ಯಕರ್ತ ಅವರು ಎಲ್ಲರ ಜೊತೆಯಲ್ಲಿ ಬೆರೆತು ಬಾಳುವ ವ್ಯಕ್ತಿ. ಅದನ್ನು ಗುರುತಿಸಿ ಶಾಸಕರು ಅವರಿಗೆ ಈ ಜವಾಬ್ದಾರಿ ನೀಡಿದ್ದಾರೆ ಅವರು ಈ ಸ್ಥಾನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಾರೆ ಎಂಬ ಸಂಪೂರ್ಣ ಭರವಸೆ ಇದೆ ಎಂದು ತಿಳಿಸಿದರು.
ವಿರಾಜಪೇಟೆ ನಗರ ಕಾಂಗ್ರೇಸ್ ಮಾಜಿ ಅಧ್ಯಕ್ಷ ಜಿ.ಜಿ.ಮೋಹನ್ ಮಾತನಾಡಿ, ಸಲಾಂ ಅವರು ನಿಷ್ಠಾವಂತ ಕಾರ್ಯಕರ್ತ. ಅವರಿಗೆ ದೊರಕಿರುವ ಅದ್ಯಕ್ಷ ಸ್ಥಾನದಿಂದ ಬಡವರಿಗೆ ದೀನ ದಲಿತರಿಗೆ ಉಪಯೋಗ ಆಗುವಂತಾಗಲಿ ಎಂದು ಆಶಿಸಿದರು.
ಆರ್ಜಿ ಗ್ರಾ.ಪಂ ಅದ್ಯಕ್ಷೆ ಫಾತಿಮಾ ಸಲಾಂ ಅವರಿಗೆ ಶುಭಾಶಯ ಸಲ್ಲಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್.ಕೆ. ಸಲಾಂ ಅವರು ನಾನು ಭಾಗದಲ್ಲಿ ಹುಟ್ಟಿ ಬೆಳೆದು ರಾಜಕೀಯ ಜೀವನ ಪ್ರಾರಂಭಿಸಿದೆ. ನಾನು ಮೊದಲ ಬಾರಿಗೆ ಕಲ್ಲುಬಾಣೆಯಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೆ. ಅದಕ್ಕೆ ಕಾರಣ ನನ್ನ ಗ್ರಾಮದ ನಿವಾಸಿ ಗಳು, ನನಗೆ ಆ ಸಂದರ್ಭಗಳಲ್ಲಿ ನನ್ನ ಜೊತೆಗೆ ಇದ್ದು, ಸಹಕಾರಿ ನೀಡಿ ಮರಣ ಹೊಂದಿದ ಹಲವಾರು ವ್ಯಕ್ತಿಗಳನ್ನು ಈ ಸಂದರ್ಭದಲ್ಲಿ ನೆನಪಿಸಿ ಕೊಂಡರು.
ಎ.ಕೆ ಸುಬ್ಬಯ್ಯ ಅವರ ಶಿಷ್ಯರಲ್ಲಿ ನಾನು ಕೂಡ ಒಬ್ಬ, ವಿರಾಜಪೇಟೆ ಶಾಸಕ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೆÇನ್ನಣ್ಣ ಅವರು ನನಗೆ ಈ ಜವಾಬ್ದಾರಿಯ ಸ್ಥಾನ ನೀಡಿದ್ದಾರೆ, ಅವರ ಹೆಸರಿಗೆ ಯಾವುದೇ ಕಪ್ಪು ಚುಕ್ಕೆ ಬಾರದ ರೀತಿಯಲ್ಲಿ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸಲಾಂ ಅವರನ್ನು ಸಮಿತಿ ವತಿಯಿಂದ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.
ವೇದಿಕೆಯಲ್ಲಿ ಕಲ್ಲುಬಾಯ್ಸ್ ತಂಡದ ಅಧ್ಯಕ್ಷ ರಹೀಂ, ಮಾಜಿ ಗ್ರಾ.ಪಂ ಸದಸ್ಯ ಜಾಫರ್, ಕಲ್ಲಬಾಣೆಯ ಹಿರಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಲ್ಲುಬಾಣೆಯ ನಾಗರೀಕರು, ಕಲುಬಾಯ್ಸ್ ತಂಡದ ಸದಸ್ಯರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.