ಮಡಿಕೇರಿ ಫೆ.16 NEWS DESK : ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಸಿದ್ದಾಪುರದ ಇಂಜಿಲಗೆರೆ ಗ್ರಾಮದ ವಿನೋದ್ ಪೂಜಾರಿ ಹಾಗೂ ಶನಿವಾರಸಂತೆಯ ಎಸ್.ಎನ್.ರಘು ಅವರನ್ನು ಆಯ್ಕೆ ಮಾಡಿರುವುದಾಗಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷರ ಅನುಮೋದನೆಯ ಮೇರೆಗೆ ಪಕ್ಷ ಸಂಘಟನೆಯ ದೃಷ್ಟಿಯಿಂದ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಬಿಜೆಪಿ ಪರವಾಗಿದ್ದು, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುವುದೆಂದು ಅಪ್ರು ರವೀಂದ್ರ ಹೇಳಿದ್ದಾರೆ.








