Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲಿಬೆಟ್ಟ ಉರೂಸ್ :  ಧಾರ್ಮಿಕ ಆಚರಣೆಗಳ ಮೂಲಕ ಸೌಹಾರ್ದತೆ ಮೊಳಗಲಿ : ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲಿಬೆಟ್ಟ ಉರೂಸ್ :  ಧಾರ್ಮಿಕ ಆಚರಣೆಗಳ ಮೂಲಕ ಸೌಹಾರ್ದತೆ ಮೊಳಗಲಿ : ಗಣ್ಯರ ಕರೆ*

ಫೆಬ್ರವರಿ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಫೆ.17 : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಇತಿಹಾಸ ಪ್ರಸಿದ್ಧಿಯಾಗಿರುವ ಪಾಲಿಬೆಟ್ಥ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಸಮಾರೋಪ ಸಮಾರಂಭದ ಸರ್ವಧರ್ಮ ಸಮ್ಮೇಳನ ದರ್ಗಾ ಆವರಣದಲ್ಲಿ ನಡೆಯಿತು.

ಕನ್ನಡ ಮಠದ ಮಠಾಧಿಕಾರಿ ಚನ್ನಬಸವ ದೇಶಿಕೇಂದ್ರ ಸ್ವಾಮಿಜಿ ಮಾತನಾಡಿ, ಸರ್ವಧರ್ಮದ ಸಮನ್ವಯ ಕೇಂದ್ರಗಳಿಂದ ಶಾಂತಿ ಸಹ ಬಾಳ್ವೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಇಂತಹ ಸರ್ವಧರ್ಮ ಸಮ್ಮೇಳನಗಳ ಮೂಲಕ ಭಾವೈಕ್ಯತೆಯೊಂದಿಗೆ ಒಗ್ಗೂಡಿ ಆಚರಣೆಗಳು ಮಾಡಿದ್ದಲ್ಲಿ ಸಹೋದರತ್ವ ನಿರ್ಮಾಣವಾಗಲು ಸಾಧ್ಯವಾಗಲಿದೆ ಎಂದರು.
ನಾವು ನಡೆಯುವ ದಾರಿಗಳು ಬೇರೆ ಇರಬಹುದು ಆದರೆ ತಲುಪುವ ಗುರಿ ಮಾತ್ರ ಭಗವಂತನ ಸನ್ನಿಧಿಗೆ. ಶರಣರ ಹಿತವಚನಗಳನ್ನ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕೆಂದು ಹೇಳಿದ ಅವರು ಪ್ರತಿಯೊಬ್ಬರು ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
ಪಾಲಿಬೆಟ್ಟ ಸಿ.ಎಸ್.ಐ ಚರ್ಚ್ ನ ರೇ ಫಾ. ಶಶಿಕುಮಾರ್ ಮಾತನಾಡಿ, ದೇವರು ಮಾನವನ ರೂಪದಲ್ಲಿ ಬದುಕಲು ಅವಕಾಶ ಕಲ್ಪಿಸಿದೆ ನಾವೆಲ್ಲರೂ ಶಾಂತಿ ಸಹ ಬಾಳ್ವೆಯಾ ಸಹೋದರತ್ವದೊಂದಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಲಿದ್ದು, ಎಲ್ಲಾ ಧರ್ಮಗಳ ಬೋಧನೆಯನ್ನು ಅನುಸರಿಸಿದರೆ ನಾವು ಯಾರನ್ನು ದ್ವೇಷಿಸುವುದಿಲ್ಲ ಎಲ್ಲ ಧರ್ಮಗಳ ಸಾರಾಂಶ ಒಂದೇ ಶಾಂತಿ ಸಹ ಬಾಳ್ವೆಯ ಸಂಕೇತವಾಗಿದೆ. ಇಂತಹ
ಸರ್ವಧರ್ಮ ಸಮ್ಮೇಳನಗಳು ಹೆಚ್ಚಾಗಿ ನಡೆದಲ್ಲಿ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು.

ರಾಜ್ಯ ವಕ್ಫ್ ಬೋರ್ಡ್  ಮಾಜಿ ಅಧ್ಯಕ್ಷ ಶಾಪಿ ಸಹದಿ ಮಾತನಾಡಿ ನಾವೆಲ್ಲರೂ ಒಂದೇ ಎಂಬ ಭಾವನೆಯೊಂದಿಗೆ ಭಾವೈಕ್ಯತೆಯಿಂದ ಬಾಳಿದಲ್ಲಿ ಯಾವುದೇ ಕಾರಣಕ್ಕೂ ನಮ್ಮನ್ನ ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ.  ಇತ್ತೀಚಿನ ದಿನಗಳಲ್ಲಿ ರಾಜಕೀಯ ಲಾಭಕ್ಕಾಗಿ ಮಂದಿರ ಮಸೀದಿಗಳನ್ನು ಬಳಸಿಕೊಂಡು ಕೋಮು ಭಾವನೆಗಳೊಂದಿಗೆ ಅಶಾಂತಿ ಸೃಷ್ಟಿಸಲು ಮುಂದಾಗುತ್ತಿರುವುದು ವಿಷಾದನೀಯ ಎಂದರು.
ಈ ಜಗತ್ತಿನಲ್ಲಿ ಸರ್ವಧರ್ಮೀಯರು ಒಂದಾಗಿ ಜೀವನ ನಡೆಸುತ್ತಿರುವ ದೇಶ ಭಾರತವಾಗಿದೆ. ಸೂಫಿ ಸಂತರ ಶರಣರ ಋಷಿಮುನಿಗಳ ಇತಿಹಾಸ ಈ ಭಾರತದಲ್ಲಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಎಲ್ಲಾ ಧರ್ಮಿಯರು ಒಗ್ಗೂಡಿ ಭವಿಷ್ಯದ ದೇಶವನ್ನು ಕಟ್ಟಿದ್ದಾರೆ.
ಸೂಫಿ ಸಂತರು ಶರಣರು ಒಟ್ಟಾಗಿ ಜೀವನ ಮಾಡುತ್ತಿದ್ದರು. ಹಾಗಾಗಿ ಎಲ್ಲಾ ಆಚರಣೆಗಳು ಸೌಹಾರ್ದತವಾಗಿಯೇ ನಡೆಯುತ್ತಿತ್ತು, ಇಂದು ಧಾರ್ಮಿಕ ಕೇಂದ್ರಗಳಲ್ಲಿ ಚಿಹ್ನೆಗಳನ್ನು ಹುಡುಕಿ ಇದು ನಮ್ಮದು ಎನ್ನುವುದಕ್ಕಿಂತ ಅದು ಭಾವೈಕ್ಯತೆಯ ಕೇಂದ್ರವಾಗಿತ್ತು ಎನ್ನುವುದು ನಾವು ಅರಿಯಬೇಕಾಗಿದೆ.
ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ನಾವೆಲ್ಲರೂ ಒಗ್ಗಟ್ಟಿನ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು ಮುಂದಾಗ ಬೇಕಾಗಿದೆ ಎಂದರು.
ಸಮಸ್ತ ಕೇಂದ್ರ ಮುಶಾವರ ಸದಸ್ಯ ಹಾಗೂ ಕೊಡಗು ಜಿಲ್ಲಾ ಖಾಝಿ ಎಂ ಎಂ ಅಬ್ದುಲ್ಲ ಫೈಜಿ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿ ಧಾರ್ಮಿಕ ಕೇಂದ್ರಗಳು ಸೌಹಾರ್ದತೆಯ ಸಂಕೇತದ ಮೂಲಕ ಭಾವೈಕ್ಯತೆಯ ಕೇಂದ್ರಗಳಿಗೆ ಎಲ್ಲರೂ ಪಾಲ್ಗೊಳ್ಳುತ್ತಿರುವುದರಿಂದಲೇ ಗ್ರಾಮಗಳಲ್ಲಿ ಸೌಹಾರ್ದ ಸಮಾಜ ನಿರ್ಮಾಣವಾಗುತ್ತಿದೆ.
ನಾವೆಲ್ಲರೂ ಪರಸ್ಪರ ಸ್ನೇಹ ಭಾವನೆಯೊಂದಿಗೆ ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ಸೌಹಾರ್ದತವಾಗಿ ಮುನ್ನಡೆಯಬೇಕಾಗಿದೆ ಎಂದರು.
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಪಿ.ಎ ಅನೀಫ್, ವಿರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎಚ್ ಮೊಹಮ್ಮದ್ ರಾಫಿ, ಅನ್ವಾರಲ್ ಉದಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಸಹನಿ, ಪಾಲಿಬೆಟ್ಟ ಜಮಾ ಮಸೀದಿ ಸಮಿತಿಯ ಅಧ್ಯಕ್ಷ ಪಿ.ಕೆ ಇಸ್ಮಾಯಿಲ್ ಹಾಜಿ, ಖತೀಬ್ ಅಲಿ ಸಖಾಫಿ, ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ನಾಸರ್, ಕಮಿಟಿ ಉಪಾಧ್ಯಕ್ಷ ಸೈನುದ್ದಿನ್, ಪ್ರಧಾನ ಕಾರ್ಯದರ್ಶಿ ಸಮೀರ್ ಮುನ್ನ, ಕಾರ್ಯದರ್ಶಿ ಸಮೀರ್,
ಖಜಾಂಜಿ ಮುಸ್ತಫ, ಪ್ರಮುಖರಾದ ಬಶೀರ್, ಫೈಝಲ್ ರಹಮಾನ್, ಮುನೀರ್, ಫೈಸಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣಾ ಕಾರ್ಯ ಮಾಡಲಾಯಿತು.
ಪೊಲೀಸ್ ಬಿಗಿ ಬಂದೋಬಸ್ತ್ ನೊಂದಿಗೆ ಸುಗಮ ಸಂಚಾರ ವ್ಯವಸ್ಥೆ ಮಾಡಲಾಗಿತ್ತು.
ಕೇರಳದ ಹಲ್ವಾ ಸೇರಿದಂತೆ ಆಕರ್ಷಕ ತಿಂಡಿ ತಿನಿಸುಗಳು ಆಟಿಕೆ ಸಾಮಗ್ರಿಗಳ ಮಾರಾಟ ಎಂದಿನಂತೆ ಇತ್ತು. ಉರೂಸ್ ನಲ್ಲಿ ಮಹಿಳೆಯರು, ಪುರುಷರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.
ಜಾತಿ ಮತ ಭೇದವಿಲ್ಲದೆ ಎಲ್ಲ ಭಕ್ತಾದಿಗಳು ತಮ್ಮ ಇಷ್ಟಾರ್ಥ ಹರಕೆ ತೀರಿಸಿದರು. ಪುರುಷ ಅಂಗವಾಗಿ ಪಾಲಿಬೆಟ್ಟ ಪಟ್ಟಣ ದರ್ಗಾ ಆವರಣ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿತ್ತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.