Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಮಾ.17 ರಿಂದ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜಾತ್ರೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಮಾ.17 ರಿಂದ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜಾತ್ರೋತ್ಸವ*

ಫೆಬ್ರವರಿ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಫೆ.17 NEWS DESK :  ಪಟ್ಟಣದ ಪ್ರಮುಖ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ರಾಜಗೋಪುರ ನಿರ್ಮಿಸಲು ನೀಲಿ ನಕಾಶೆ ಸಿದ್ಧಪಡಿಸಲಾಗಿದ್ದು, ರೂ.42.50 ಲಕ್ಷ ವೆಚ್ಚದ ಅಂದಾಜು ಪಟ್ಟಿ ತಯಾರಿಸಲಾಗಿದೆ. ಕಾಮಗಾರಿಗೆ ಮಾರ್ಚ್ 17ರಂದು ಆರಂಭವಾಗಲಿರುವ ಪ್ರಸಕ್ತ ಸಾಲಿನ ಜಾತ್ರಾಮಹೋತ್ಸವದಲ್ಲಿ ಶಾಸಕ ಮಂತರ್ ಗೌಡ ಚಾಲನೆ ನೀಡಲಿರುವರು ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್ಕುಮಾರ್ ತಿಳಿಸಿದ್ದಾರೆ.
2023ರಲ್ಲಿ ಸಂಸದರು, ಶಾಸಕರು ಮತ್ತು ದಾನಿಗಳ ಸಹಕಾರದಿಂದ ಅನ್ನದಾನ ಮಂಟಪವನ್ನು ಲೋಕಾರ್ಪಣೆ ಮಾಡಲಾಗಿದೆ. ದೇವಾಲಯದ ಪುನರ್ ಪ್ರತಿಷ್ಠಾಪನೆಯ ಅಂಗವಾಗಿ ನಡೆಸಿದ ಬ್ರಹ್ಮ ಕಲಶೋತ್ಸವದ ನೆನಪಿಗಾಗಿ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗದಲ್ಲಿ ರಾಜಗೋಪುರ ನಿರ್ಮಿಸಲು 2024ರಲ್ಲಿ ಆಡಳಿತ ಮಂಡಳಿ ತೀರ್ಮಾನಿಸಿದೆ. 2022ರಲ್ಲಿ ಮುತ್ತಪ್ಪಸ್ವಾಮಿ ದೇವಾಲಯದ ಮುಂಭಾಗ ರೂ.11.50ಲಕ್ಷ ವೆಚ್ಚದಲ್ಲಿ ಮುಖಮಂಟಪವನ್ನು ನಿರ್ಮಿಸಲಾಗಿದೆ. ಅಲ್ಲದೇ ತ್ರಿಶಕ್ತಿಸ್ವರೂಪಿಣಿ ಭುವನೇಶ್ವರಿ ದೇವಾಲಯದ ಮುಂಭಾಗ ರೂ.11.50 ಲಕ್ಷ ವೆಚ್ಚದಲ್ಲಿ ಮುಖಮಂಟಪದ ಕಾಮಗಾರಿ ಪೂರ್ಣಗೊಳಿಸಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ ದೇವಾಲಯದಲ್ಲಿ ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದು, ಪ್ರಸಕ್ತ ಸಾಲಿನಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗ ರಾಜಗೋಪುರ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದ ಗರ್ಭಗುಡಿಗೆ ಕಂಚಿನ ಹೊದಿಕೆ ಮತ್ತು ಹದಿನೆಂಟು ಮೆಟ್ಟಿಲಿಗೆ ಕೂಡ ಕಂಚಿನ ಹೊದಿಕೆ ಅಳವಡಿಸಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ದೇವಾಲಯದ ವಿವಿಧ ಕಾಮಗಾರಿಗಳಿಗೆ ಅಗತ್ಯವಿರುವ ಆರ್ಥಿಕ ಸಹಕಾರಕ್ಕಾಗಿ ದಾನಿಗಳು ಮತ್ತು ಭಕ್ತಾದಿಗಳು ಸಹಕಾರ ನೀಡುವ ಮೂಲಕ ದೇವಾಲಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ.
ಮಾ.17, 18 ಮತ್ತು 19 ರಂದು ಜಾತ್ರೋತ್ಸವ
ಈ ಸಾಲಿನ ಜಾತ್ರೋತ್ಸವವು ಮಾ.17ರಂದು ಬೆಳಗ್ಗೆ 5.30ಕ್ಕೆ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ತಾಂತ್ರಿಕತ್ವದಲ್ಲಿ ಗಣಪತಿಹೋಮ ಪೂರೈಸುವುದರೊಂದಿಗೆ ಆರಂಭಿಸಲಾಗುವುದು. ಅಂದು ಸಂಜೆ 6.30ಕ್ಕೆ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಶ್ರೀಕೃಷ್ಣಕುಮಾರ್‍ಅವರು ವಿಶೇಷ ಆಶ್ಲೇಷ ಪೂಜೆ ನೆರವೇರಿಸುವರು. ಮಾರ್ಚ್18ರಂದು ಸೋಮವಾರ ಉತ್ಸವ ಕಾರ್ಯಕ್ರಮಗಳು ಆರಂಭವಾಗಲಿವೆ. ಅಂದು ಸಂಜೆ ಕೇರಳದ ಖ್ಯಾತ ಸಿಂಗಾರಿ ಮೇಳದೊಂದಿಗೆ ಕಳಸದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುವುದು. ನಂತರ ವೆಳ್ಳಾಟಂ ಮತ್ತು ಮಾರ್ಚ್19ರಂದು ಮಂಗಳವಾರ ಬೆಳಗಿನ ಜಾವದಿಂದ ಕೋಲಗಳು ನಡೆಯಲಿರುವುದು ಎಂದು ಪ್ರಧಾನ ಕಾರ್ಯದರ್ಶಿ ಪ್ರಸನ್ನ ನಾಯರ್‍ತಿಳಿಸಿದ್ದಾರೆ.

ರಾಜಗೋಪುರ ನಿರ್ಮಾಣ ಮತ್ತು ಜಾತ್ರೋತ್ಸವಕ್ಕೆ ಸಹಕಾರಕ್ಕೆ ಮನವಿ :: ದೇವಾಲಯದ ಜಾತ್ರೋತ್ಸವ ಮತ್ತು ರಾಜಗೋಪುರಕ್ಕೆ ಧನ ಸಹಾಯ ಮಾಡುವ ಭಕ್ತಾದಿಗಳು ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಸ್ಥಾನ(ರಿ), ಬ್ಯಾಂಕ್‍ಖಾತೆ ಸಂಖ್ಯೆ 13825001001183401, ಐಎಫ್‍ಎಸ್‍ಸಿ ಕೋಡ್‍ಕೆಎಆರ್‍ಬಿ0000138 ಕ್ಕೆ ಆನ್‍ಲೈನ್‍ಮೂಲಕ ಹಣ ಸಂದಾಯ ಮಾಡಬಹುದು.
ಹೆಚ್ಚಿನ ಮಾಹಿತಿಗೆ ಅಧ್ಯಕ್ಷರು, ಎನ್.ಡಿ.ವಿನೋದ್‍ಕುಮಾರ್‍ಮೊ: 9964996895, ಪ್ರಧಾನ ಕಾರ್ಯದರ್ಶಿ ಪ್ರಸನ್ನ ನಾಯರ್ ಮೊ: 9448585509 ಸಂಪರ್ಕಿಸಲು ಕೋರಲಾಗಿದೆ.
ಅಭಿಪ್ರಾಯ :
ದೇವಾಲಯದಲ್ಲಿ ಕೋವಿಡ್ ನ ನಂತರ ಅನ್ನದಾನ ಮಂಟಪ, ಭುವನೇಶ್ವರಿ ದೇವಿಯ ಗರ್ಭಗುಡಿಗೆ ಮುಖಮಂಟಪ, ಶ್ರೀಮುತ್ತಪ್ಪಸ್ವಾಮಿ ದೇವಾಲಯದ ಗರ್ಭಗುಡಿ ಮುಂಭಾಗ ಮುಖಮಂಟಪ, ಬ್ರಹ್ಮಕಲಶೋತ್ಸವದ ಅಂಗವಾಗಿ ಈ ಸಾಲಿನಲ್ಲಿ ಶ್ರೀಅಯ್ಯಪ್ಪಸ್ವಾಮಿ ದೇವಾಲಯದ ಮುಂಭಾಗ ರಾಜಗೋಪುರ ನಿರ್ಮಾಣ ಮತ್ತು ಗರ್ಭಗುಡಿಗೆ ಕಂಚಿನ ಹೊದಿಕೆ ಹಾಗೂ ಹದಿನೆಂಟು ಮೆಟ್ಟಿಲಿಗೆ ಕಂಚಿನ ಹೊದಿಕೆ ನಿರ್ಮಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕ್ಷೇತ್ರದಲ್ಲಿ ಕೈಗೊಂಡ ಎಲ್ಲಾ ಕಾರ್ಯಗಳಿಗೆ ಭಕ್ತಾದಿಗಳು, ದಾನಿಗಳು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಮತ್ತು ಸದಸ್ಯರುಗಳ ಸಹಕಾರವನ್ನು ಸ್ಮರಿಸುತ್ತೇನೆ. ಮುಂದಿನ ದಿನಗಳಲ್ಲಿ ದೇವಾಲಯದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಎನ್.ಡಿ.ವಿನೋದ್‍ಕುಮಾರ್, ಅಧ್ಯಕ್ಷರು, ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯ, ಸೋಮವಾರಪೇಟೆ.

ವರದಿ: ಮುರಳೀಧರ್ ಶಾಂತಳ್ಳಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.