Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾಡಳಿತದಿಂದ `ಕರ್ನಾಟಕ ಸಾಂಸ್ಕೃತಿಕ ನಾಯಕ’ ಬಸವೇಶ್ವರರ ಭಾವಚಿತ್ರ ಅನಾವರಣ : ವಿಶ್ವಗುರು ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ : ಗಣ್ಯರ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾಡಳಿತದಿಂದ `ಕರ್ನಾಟಕ ಸಾಂಸ್ಕೃತಿಕ ನಾಯಕ’ ಬಸವೇಶ್ವರರ ಭಾವಚಿತ್ರ ಅನಾವರಣ : ವಿಶ್ವಗುರು ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ : ಗಣ್ಯರ ಅಭಿಮತ*

ಫೆಬ್ರವರಿ 17, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.17 NEWS DESK : `ಕರ್ನಾಟಕ ಸಾಂಸ್ಕೃತಿಕ ನಾಯಕ’ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಗರದ ಗಾಂಧಿ ಭವನದಲ್ಲಿ ಅನಾವರಣ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸ0ಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಗೌತಮ ಬುದ್ಧ ನಂತರ ಬಸವೇಶ್ವರರು ರಾಷ್ಟ್ರದಲ್ಲಿ ಸಾಮಾಜಿಕ ಕ್ರಾಂತಿ ಉಂಟು ಮಾಡಿದರು ಎಂದರು.
12ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳುವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ ವಚನಗಳ ಮೂಲಕ ಜಾಗೃತಿ ಮೂಡಿಸಿದ ಬಸವೇಶ್ವರರನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿರುವುದು ವಿಶೇಷವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಗೌತಮ ಬುದ್ಧ, ಬಸವಣ್ಣ ನಂತರ ಮಹಾತ್ಮ ಗಾಂಧೀಜಿ ಅವರು ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಜಾಗೃತಿ ಮೂಡಿಸಿದರು. ಬಸವೇಶ್ವರರು ವಚನಗಳ ಮೂಲಕ ನಾಡಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರ ವಿಶ್ವಗುರು ಬಸವೇಶ್ವರರನ್ನು `ನಾಡಿನ ಸಾಂಸ್ಕøತಿಕ ನಾಯಕ’ ಎಂದು ಸಾರಿದೆ ಎಂದರು.
12ನೇ ಶತಮಾನದ ಬಸವೇಶ್ವರರ ನಂತರ ಹಲವು ವಚನಕಾರರು ಸಮಾಜ ಸುಧಾರಣೆಗೆ ಶ್ರಮಿಸಿದ್ದು, ಬಸವಾದಿ ಶರಣರು ಸೇರಿದಂತೆ ವಚನಕಾರರ ಬಗ್ಗೆ ಅಧ್ಯಯನ ಮಾಡಬೇಕು. ಬಸವಣ್ಣ ಅವರನ್ನು ಸದಾ ಸ್ಮರಿಸಬೇಕು ಎಂದರು.
ಬಸವಣ್ಣನವರ ಸಾಮಾಜಿಕ ಸುಧಾರಣೆಗಳು ಸಾರ್ವಕಾಲಿಕವಾಗಿದ್ದು, ಅವರ ಸಂದೇಶಗಳು, ಚಿಂತನೆಗಳು ವಿಶ್ವಕ್ಕೆ ಮಾದರಿಯಾಗಿದೆ. ಭಾರತ ಸಂಸತ್ತಿನಲ್ಲಿ ಹಾಗೂ ಲಂಡನ್‍ನಲ್ಲಿ ಬಸವೇಶ್ವರ ಪ್ರತಿಮೆಯನ್ನು ಸ್ಥಾಪಿಸಿರುವುದೇ ಸಾಕ್ಷಿ ಎಂದರು.
ಬಸವೇಶ್ವರರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಬಸವೇಶ್ವರರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಕೊಪ್ಪ ಭಾರತ ಮಾತಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜ್ಞಾನೇಶ್ ಮಾತನಾಡಿ, ಬಸವ ಪಥಕ್ಕೆ ಅಗ್ರಸ್ಥಾನ ನೀಡಲು ಸರ್ಕಾರ ತೀರ್ಮಾನಿಸಿರುವುದು ವಿಶೇಷವಾಗಿದೆ.
ಬಸವೇಶ್ವರರು ಕನ್ನಡ ನಾಡಿನ ಸಂಸ್ಕøತಿ ಪ್ರತಿಪಾದಿಸಿದ ಮೌಲ್ಯಗಳ ರೂಪಕ. ಬಸವಣ್ಣನವರ ಕತೃತ್ವ ಶಕ್ತಿಯಿಂದ ರೂಪುಗೊಂಡ ವಚನಕಾರರ ಅನುಭವ ಮಂಟಪ ಇಂದಿನ ಪ್ರಜಾಪ್ರಭುತ್ವದ ಅಡಿಗಲ್ಲೇ ಆಗಿದೆ. ನಾಡಿನ ಸಾಂಸ್ಕøತಿಕ, ಸಾಹಿತ್ಯಕ, ಪರಂಪರೆ ವಿಶ್ವಕ್ಕೆ ಕೊಡುಗೆ ನೀಡಿರುವ ವಿಶ್ವ ಮಾನವ ಪರಂಪರೆಯ ಬಹುಮುಖ್ಯವಾದ ಕೊಂಡಿಯಾಗಿದ್ದಾರೆ ಎಂದು ನುಡಿದರು.
12ನೇ ಶತಮಾನದಲ್ಲಿಯೇ ಬಸವಣ್ಣ ಅಂತರಜಾತಿ ವಿವಾಹವನ್ನು ಪ್ರೋತ್ಸಾಹಿಸಿದ್ದರು. ಸಂಪ್ರದಾಯಗಳನ್ನು ಬದಿಗೊತ್ತಿ ಎಲ್ಲರೂ ಸಮಾನರು ಎಂಬುದನ್ನು ಸಾರಿದರು. ಕಾಯಕವೇ ಕೈಲಾಸವೆಂದು ಒತ್ತಿ ಹೇಳಿದ್ದಾರೆ. ಅನುಭವ ಮಂಟಪದ ಮೂಲಕ ಎಲ್ಲರನ್ನು ಒಳಗೊಂಡ ಕಲ್ಯಾಣ ಕ್ರಾಂತಿ ಉಂಟು ಮಾಡಿದರು ಎಂದು ಹೇಳಿದರು.
ಹನ್ನೆರಡನೇ ಶತಮಾನದಲ್ಲಿ ಬಸವೇಶ್ವರರು ಸಾಮಾಜಿಕ ಪರಿವರ್ತನೆ ಮಾಡಿ, ಸಮಾಜದಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿದರು. ಆ ದಿಸೆಯಲ್ಲಿ ವಿಶ್ವಜ್ಞಾನಿ, ಜಗದ ಜ್ಯೋತಿ ಬಸವೇಶ್ವರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ವರ್ಣಿಸಿದರು.
ಬಸವೇಶ್ವರರು ನಾಡಿನ ಭಾಷೆಯಾದ ಕನ್ನಡದಲ್ಲಿ ವಚನಗಳನ್ನು ರಚಿಸುವ ಮೂಲಕ ಎಲ್ಲರಿಗೂ ಅರ್ಥವಾಗುವಂತೆ ಮತ್ತು ಹತ್ತಿರವಾಗುವಂತೆ ಸಾಮಾಜಿಕ ಸಂದೇಶಗಳನ್ನು ನೀಡಿದ್ದರು ಎಂದು ಜ್ಞಾನೇಶ್ ವಿವರಿಸಿದರು.
`ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ, ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ, ಇದೇ ನಮ್ಮ ಕೂಡಲ ಸಂಗಮನೊಲಿಸುವ ಪರಿ’ ಎಂದು ಬಸವಣ್ಣ ತಿಳಿಸಿದ್ದಾರೆ ಎಂದರು.
ಬಸವೇಶ್ವರರು ಅನೇಕ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದರು, ಜಾತಿ-ಮತ-ಪಂಥ ಪದ್ಧತಿಯ ನಿರ್ಮೂಲನೆಗೆ ಶ್ರಮಿಸಿದರು. ಆ ನಿಟ್ಟಿನಲ್ಲಿ ಬಸವೇಶ್ವರರ ಆದರ್ಶಗಳು ಇಂದಿಗೂ ದಾರಿದೀಪವಾಗಿವೆ ಎಂದರು.
ಅಜ್ಞಾನದ ಕಾಲದಲ್ಲಿ ಜ್ಯೋತಿ ಆಗಿ ಕಾಣಿಸಿಕೊಂಡ ಬಸವೇಶ್ವರರು, ಸ್ತ್ರೀಯರಿಗೆ ಸ್ವಾತಂತ್ರ್ಯ, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೆಚ್ಚಿನ ಒತ್ತು ನೀಡಿದರು ಎಂದು ನುಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಸೆಸ್ಕ್ ಇಇ ಅನಿತಾ ಬಾಯಿ, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಲೋಕೋಪಯೋಗಿ ಇಲಾಖೆಯ ಇಇ ಸಿದ್ದೇಗೌಡ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಹ್ಮಣ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ಪೌರಾಯುಕ್ತರಾದ ವಿಜಯ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಎಂ.ಎಂ.ಯತ್ನಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು, ಜಿ.ಪಂ.ಇಇ ಮುತ್ತುರಾಜ್, ಸುರೇಶ್ ಕುಮಾರ್, ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಕೃಷ್ಣಪ್ಪ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಇತರರು ಇದ್ದರು.
ಕನ್ನಡ ಮತ್ತು ಸ0ಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಸ್ವಾಗತಿಸಿದರು. ಮೈಸೂರಿನ ರಾಘವೇಂದ್ರ ತಂಡದವರು ವಚನ ಗಾಯನ ನಡೆಸಿಕೊಟ್ಟರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.