Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅಕ್ರಮ : ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅಕ್ರಮ : ತನಿಖೆ ವರದಿ ನಿರೀಕ್ಷಿಸಿ ಗುತ್ತಿಗೆದಾರರ ಬಿಲ್ ಪಾವತಿಗೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಫೆಬ್ರವರಿ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಹಾವೇರಿ, ಫೆ.18 NEWS DESK : ವೈದ್ಯಕೀಯ ಕಾಲೇಜುಗಳು ಪ್ರಾರಂಭ ಆಗಿರುವುದರಿಂದ, ತನಿಖೆಯು ಮುಂದುವರಿಯಲಿದ್ದರೂ, ಕೆಲಸ ಮಾಡಿರುವ ಗುತ್ತಿಗೆದಾರರ ಬಾಕಿ ಬಿಲ್ ಗಳನ್ನು ಷರತ್ತುಬದ್ಧವಾಗಿ ತನಿಖೆ ವರದಿಯನ್ನು ನಿರೀಕ್ಷಿಸಿ ಪಾವತಿಸಲು ಸಚಿವಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಲೇಜುಗಳ ಕಾಮಗಾರಿ ನಿಲ್ಲಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ರಾಜ್ಯದ 4 ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಆಗಿರಬಹುದಾದ ಅಕ್ರಮದ ತನಿಖೆಗೆ ಸಂಬಂಧಿಸಿದ  ಪ್ರಶ್ನೆಗೆ ಉತ್ತರಿಸಿದರು.
*ಭ್ರಷ್ಟಾಚಾರ ನಿಗ್ರಹಕ್ಕೆ ಕ್ರಮ:*
ಈಗಿನ ಸರ್ಕಾರದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಭ್ರಷ್ಟಾಚಾರವನ್ನು ಕಡಿಮೆ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಆದ್ದರಿಂದ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಶಿಕ್ಷಿಸುವ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು.
*ಅಕ್ಕಿ ಕೊರತೆ ಇಲ್ಲ*
ಹಿಂದುಳಿದ ವರ್ಗಗಳ ವಸತಿ ನಿಲಯಗಳಿಗೆ ಅಕ್ಕಿ ಕೊರತೆ ಕಾಡುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅಕ್ಕಿ   ಹಾಸ್ಟೆಲ್ ಗಳಿಗಾಗಲಿ, ಫಲಾನುಭವಿಗಳಿಗಾಗಲಿ ನೀಡುವ  ಅಕ್ಕಿಸರಬರಾಜಿಗೆ ಕೊರತೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
*ಮಟ್ಕಾ ದಂಧೆ , ಪರಿಶೀಲಿಸಿ ಕ್ರಮ*
ಹಾವೇರಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕೋರಿದ್ದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
*ಮರಳು ದಂಧೆ ವಿರುದ್ಧ ಕ್ರಮ*
ತುಂಗಭದ್ರಾ ನದಿದಂಡೆಯಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಪ್ರಶ್ನಿಸಲಾಗಿ, ಮರಳು ದಂಧೆ ನಡೆಯುತ್ತಿದ್ದಲ್ಲಿ , ಕಾರಣಕರ್ತರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮ ಮರಳು ದಂಧೆಯನ್ನು ನಿಲ್ಲಿಸಲಾಗುವುದು ಎಂದರು.
*ಕೇಂದ್ರದಿಂದ ಬರಪರಿಹಾರ ಬಂದಿಲ್ಲ*
ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸರ್ಕಾರ 5 ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಮೂರು ಮನವಿಗಳನ್ನು ಸಲ್ಲಿಸಿದೆ. 35 ಸಾವಿರ ಕೋಟಿ ರೂ.ಗಳ ಬೆಳೆ ನಷ್ಟವಾಗಿದ್ದು, ಎನ್ ಡಿ ಆರ್ ಎಫ್ ಮಾರ್ಗಸೂಚಿಗಳ ಪ್ರಕಾರ , ರಾಜ್ಯ ಸರ್ಕಾರ 18171 ಕೋಟಿ ರೂ.ಗಳ ಬರಪರಿಹಾರವನ್ನು ಕೇಂದ್ರಕ್ಕೆ ಕೋರಿದೆ. ಆದರೆ ಇಂದಿನವರೆಗೆ ಕೇಂದ್ರದಿಂದ ಹಣಬಿಡುಗಡೆ ಸೇರಿದಂತೆ ಯಾವುದೇ ಕ್ರಮ ಆಗಿಲ್ಲ ಎಂದರು.
ಸಿಎಂ ಹಾಗೂ ಡಿಸಿಎಂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ  ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಬಗ್ಗೆ ಉತ್ತರಿಸಿ, ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ನಾಯಕರು, ಶಾಸಕರು, ಪಕ್ಷದ ಸಮಿತಿಯವರು ಸೂಚಿಸಿದ ಅಭ್ಯರ್ಥಿಯು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪ್ರಾಥಮಿಕ ಸಭೆಯಾಗಿದ್ದು, ಮೊದಲ ಪಟ್ಟಿ ಸಧ್ಯದಲ್ಲಿಯೇ ಬಿಡುಗಡೆ ಮಾಡಲಿರುವುದಾಗಿ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.29: ಕೊಡಗು ಜಿಲ್ಲೆಯಲ್ಲಿ ಅನೇಕ ಸಣ್ಣ ಭಾಷಿಕ ಸಮುದಾಯಗಳಿದ್ದು, ಅವುಗಳಲ್ಲಿ ಅರೆಭಾಷೆಯೂ ಪ್ರಮುಖ ಸ್ಥಾನ ಹೊಂದಿದೆ.…

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.