Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜನೆ ಸಂಪೂರ್ಣ ನಿಷೇಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜನೆ ಸಂಪೂರ್ಣ ನಿಷೇಧ*

ಫೆಬ್ರವರಿ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK : ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ/ ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14 ರಿಂದ 18 ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ತಪ್ಪಿತಸ್ಥ ಮಾಲೀಕರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ, ರೂ.20 ಸಾವಿರದಿಂದ 50 ಸಾವಿರದವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ.
ಬಾಲ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರ ಕರ್ನಾಟಕ ನಿಯಮಗಳು ‘2ಸಿ’ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು ನಿಬಂಧನೆಗಳನ್ವಯ ಪರಿಸ್ಥಿತಿಗಳಿಗೆ/ ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಲು ಅನುಮತಿಸಬಹುದಾಗಿದೆ. ಅವುಗಳು ಇಂತಿವೆ.
ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.
ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಈ ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ ‘ಸಿ’ ಯಲ್ಲಿ ಜಿಲ್ಲಾ ದಂಡಾಧಿಕಾರಿಗೆ ಮುಚ್ಚಳಿಕೆ ಪತ್ರ ಸಲ್ಲಿಸುವುದು ಮತ್ತು ಭಾಗವಹಿಸುವ ಮಕ್ಕಳ ಪಟ್ಟಿ ಪೋಷಕರ ಅಥವಾ ಪಾಲಕರ ಒಪ್ಪಿಗೆ ಪತ್ರ ಸಲ್ಲಿಸುವುದು.
ಮಗುವಿನ ಸಂರಕ್ಷತೆಗೆ ಸಂಬಂಧಿಸಿದಂತೆ, ನಿರ್ಮಾಪಕರ ಅಥವಾ ಸಮಾರಂಭದ ಆಯೋಜಕರ ಹೆಸರುಗಳನ್ನು ಒದಗಿಸುವುದು. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿರಬೇಕೆಂದು ಚಲನಚಿತ್ರಗಳ ಅಥವಾ ದೂರದರ್ಶನದ ಪ್ರದರ್ಶನದ ಹಕ್ಕು ನಿರಾಕರಣೆಗೆ ಒಳಪಟ್ಟಿದೆ ಎಂಬುದನ್ನು ನಿರ್ಮಾಪಕರಿಗೆ ಖಚಿತ ಪಡಿಸುವುದು.
ಮುಚ್ಚಳಿಕೆಯು 6 ತಿಂಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಗಳು ಮತ್ತು ಇಂತಹ ಉದ್ದೇಶಗಳಿಗಾಗಿ ಸೂಕ್ತ ಸರ್ಕಾರವು ನಿಗಧಿತವಾಗಿ ಹೊರಡಿಸಿರುವ ಸುರಕ್ಷತಾ ನೀತಿಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸುವುದು.
ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸುವುದು. ಮಗುವಿಗೆ ಸಕಾಲಿಕ ಪೌಷ್ಠಿಕ ಆಹಾರ ಒದಗಿಸುವುದು, ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಛ ಮತ್ತು ಸುರಕ್ಷಿತವಾದ ಆಶ್ರಯ ಒದಗಿಸುವುದು, ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತು ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಪಾಲನೆ ಮಾಡುವುದು.
ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದನ್ನು ಖಾತರಿಪಡಿಸುವುದು ಮತ್ತು ಯಾವುದೇ ಮಗು ನಿರಂತರವಾಗಿ 27 ದಿನಗಳಿಂದ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡಬಾರದು.
ಮಗುವಿನ ರಕ್ಷಣೆ, ಪೋಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಅಥವಾ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಾಬ್ದಾರಿ ವ್ಯಕ್ತಿಯನ್ನು ನೇಮಿಸುವುದು. ನಿರ್ಮಾಣ ಅಥವಾ ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಶೇ.20 ನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡಬೇಕು. ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸುವುದು.
ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಛೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆ ಅನೌಪಚಾರಿಕ ಮನರಂಜನಾ ಚಟುವಟಿಕೆ ಒಳಗೊಂಡಂತೆ ಅವುಗಳಲ್ಲಿ ಭಾಗವಹಿಸುವಂತೆ ಮಾಡಬಾರದು ಎಂದು ಕಾರ್ಮಿಕ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.