ಮಡಿಕೇರಿ ಫೆ.19 NEWS DESK : ವನ್ಯಜೀವಿ ಸಂರಕ್ಷಣಾ ಕಾಯ್ದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆ ನೀಡಿರುವ ಹಿನ್ನೆಲೆ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲವೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬAಧಿಸಿದAತೆ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ ವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಒಪ್ಪಿಸಲು ಅಧಿಸೂಚನೆ ಹೊರಡಿಸಿತ್ತು.
ಈ ಆದೇಶದ ವಿರುದ್ಧ ರಂಜಿ ಪೂಣಚ್ಚ ಹಾಗೂ ಕುಟ್ಟಪ್ಪ ಎಂಬುವವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆಯನ್ನು ದಾಖಲಿಸಿದ್ದರು. ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಿದೆ. ಆದ್ದರಿಂದ ಕೊಡಗಿನ ಜನ ಆತಂಕ ಪಡುವ ಅಗತ್ಯವಿಲ್ಲವೆಂದು ಪೊನ್ನಣ್ಣ ಸ್ಪಷ್ಟಪಡಿಸಿದ್ದಾರೆ.








