Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಜರುಗಿದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಜರುಗಿದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ*

ಫೆಬ್ರವರಿ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಮಾತನಾಡಿ, ಸಂತಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿ ಸಂತ ಕವಿ ಶ್ರೇಷ್ಠ ದಾರ್ಶನಿಕ ಕವಿ ಸರ್ವಜ್ಞ ಅವರು ಕನ್ನಡದಲ್ಲಿ ತ್ರಿಪದಿ ಸಾಲುಗಳ ಪದ್ಯ ಬರೆಯುವ ಮೂಲಕ ಮನೆ ಮಾತಾಗಿದ್ದಾರೆ ಎಂದು ತಿಳಿಸಿದರು.
ಛತ್ರಪತಿ ಶಿವಾಜಿ ಮಹಾರಾಜರು ಮಹಾರಾಷ್ಟ್ರದ ಪುಣೆ ಬಳಿಯ ಶಿವನೇರಿ ಗ್ರಾಮದಲ್ಲಿ ಜನಿಸಿ ಭಾರತದ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ್ದಾರೆ ಎಂದು ತಿಳಿಸಿದರು.
ಕವಿ ಸರ್ವಜ್ಞ ಮತ್ತು ಛತ್ರಪತಿ ಶಿವಾಜಿ ಮಹಾರಾಜರು ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಈ ಎಲ್ಲಾ ಮಹನೀಯರ ಜೀವನ ಸಂದೇಶಗಳನ್ನು ತಿಳಿದುಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹೇಳಿದರು.
ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ವೆಂಕಟನಾಯಕ್ ಮಾತನಾಡಿ, ಕವಿ ಸರ್ವಜ್ಞ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಅಂಬಲೂರುನಲ್ಲಿ ಜನಿಸಿದ್ದಾರೆ ಎಂದು ತಿಳಿಸಿದರು.
ಕವಿ ಸರ್ವಜ್ಞ ಅವರು ಸಾವಿರಕ್ಕೂ ಹೆಚ್ಚು ತ್ರಿಪದಿಗಳನ್ನು ಬರೆದಿದ್ದಾರೆ. ಇವರ ಬರಹಗಳು ಇಂದಿಗೂ ಸಹ ಪ್ರಸ್ತುತವಾಗಿದೆ ಎಂದು ವೆಂಕಟ್ ನಾಯಕ್ ತಿಳಿಸಿದರು.
ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಅದ್ಭುತ ತ್ರಿಪದಿಗಳನ್ನು ರಚಿಸಿದ್ದಾರೆ. ಕವಿ ಸರ್ವಜ್ಞ ಅವರ ಪದ್ಯಗಳನ್ನು ಮಕ್ಕಳಿಗೆ ತಿಳಿಸಬೇಕು. ಕವಿ ಸರ್ವಜ್ಞ ಅವರು ಕನ್ನಡ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತ್ರಿಪದಿ ಸಾಲುಗಳ ಮೂಲಕ ವೈಚಾರಿಕತೆ ಮತ್ತು ವೈಜ್ಞಾನಿಕತೆ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.
ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರದಲ್ಲಿ ತಮ್ಮದೇ ಆದ ಪ್ರಭಾವ ಬೀರಿ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು.
17ನೇ ಶತಮಾನದಲ್ಲಿ ಶಿವಾಜಿ ಪೂರ್ವ ಭಾರತದಲ್ಲಿ ರಾಜ್ಯಬಾರ ಮಾಡುತ್ತಿದ್ದರು. ಅವರ ತಾಯಿ ಜೀಜಾ ಮಾತೆಯು ಶಿವಾಜಿಗೆ ಸಣ್ಣ ವಯಸ್ಸಿನಿಂದಲೂ ನಾಮಜಪವನ್ನು ಮಾಡಿಸುತ್ತಿದ್ದರು. ಒಬ್ಬ ರಾಜನಿಗೆ ಬೇಕಾದ ಎಲ್ಲಾ ಯುದ್ಧ ಕಲೆಗಳನ್ನು ಜೀಜಾಮಾತೆಯು ಕಲಿಸುತ್ತಿದ್ದರು ಎಂದು ವೆಂಕಟ್ ನಾಯಕ್ ತಿಳಿಸಿದರು.
ಕುಲಾಲ/ಕುಂಬಾರ ಮಡಿಕೆ ತಯಾರಿಕರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಪಿ.ದಿನೇಶ್ ಮಾತನಾಡಿ, ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಅವರ ವಿಚಾರಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಕವಿ ಸರ್ವಜ್ಞರು ಜನ ಸಾಮಾನ್ಯರಿಗೆ ಒಪ್ಪಿಗೆ ಆಗುವ ರೀತಿಯಲ್ಲಿ ತ್ರಿಪದಿಗಳನ್ನು ಬರೆದು ಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.
`ಕವಿ ಸರ್ವಜ್ಞ ಅವರ ಜೀವಿತಾವದಿಯಲ್ಲಿ ಅಸ್ಪೃಷ್ಯತೆ, ಜಾತಿಯತೆ ವಿರುದ್ದ ಹೋರಾಟ ಮಾಡಿದ್ದಾರೆ. ಸಮಾಜದಲ್ಲಿ ಮೂರು ಸಾಲುಗಳ ತ್ರಿಪದಿ ಬರೆಯುವ ಮೂಲಕ ಶಾಂತಿ ದೂತರಾಗಿ ಕೆಲಸ ಮಾಡಿದ್ದಾರೆ. ಬಸವಣ್ಣ ಅವರು ನೀಡಿದ ವಚನಗಳು, ಕವಿ ಸರ್ವಜ್ಞ ಅವರು ನೀಡಿದ ತ್ರಿಪದಿ ಸಾಲುಗಳು ಕನ್ನಡ ನಾಡಿನಲ್ಲಿ ತಮ್ಮದೇ ಆದ ಹೆಸರು ಹೊಂದಿವೆ ಎಂದು ಕೆ.ಪಿ.ದಿನೇಶ್ ಹೇಳಿದರು.’
ಮರಾಠ ಸಮಾಜದ ಜಿಲ್ಲಾಧ್ಯಕ್ಷ ಎಸ್.ಆರ್.ಅರುಣ್ ರಾವ್ ಮಾತನಾಡಿ, ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರು ಸಮಾಜಕ್ಕೆ ನೀಡಿರುವ ಸಂದೇಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.
ಛತ್ರಪತಿ ಶಿವಾಜಿ ಮಹಾರಾಜರು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ರಕ್ಷಣೆಗೆ ಒತ್ತು ನೀಡಿದ್ದರು. ಶಿವಾಜಿ ಮಹಾರಾಜರು ಹಿಂದೂ ಸಾಮ್ರಜ್ಯದ ದೊರೆಯಾಗಿದ್ದಾರೆ ಎಂದು ಹೇಳಿದರು.
ಕುಂಬಾರ ಕುಲಾಲ ಸಂಘದ ಮಾಜಿ ಅಧ್ಯಕ್ಷರಾದ ನಾಣಯ್ಯ ಪ್ರಮುಖರಾದ ಕುಶಾಲಪ್ಪ, ಚಂದ್ರಶೇಖರ್, ದಾಮೋದರ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು. ನಿವೃತ್ತ ಅಧ್ಯಾಪಕ ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಕಸಾಪ ಸಂತಾಪ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯಕಾರಿ ಮಂಡಳಿಯ ಸದಸ್ಯ, ಕೊಡಗು ಜಿಲ್ಲಾ…

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.