Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.23ರಂದು ಕುಶಾಲನಗರದಲ್ಲಿ ದೇವಾಲಯಗಳ ಪರಿಷತ್ತು ಸಮಾವೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.23ರಂದು ಕುಶಾಲನಗರದಲ್ಲಿ ದೇವಾಲಯಗಳ ಪರಿಷತ್ತು ಸಮಾವೇಶ*

ಫೆಬ್ರವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಫೆ.22 NEWS DESK :   ದೇವಾಲಯಗಳು ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಫೆ.23ರಂದು ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರಮುಖರಾದ ಚಂದ್ರ ಮೊಗವೀರ ತಿಳಿಸಿದ್ದಾರೆ.

ಕುಶಾಲನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳನ್ನು ಅಪವಿತ್ರಗೊಳಿಸುವುದು, ಮೂರ್ತಿಭಂಜನ ಆನೇಕ ದೇವಸ್ಥಾನಗಳನ್ನು ಅನಧಿಕೃತವೆಂದು ಧ್ವಂಸಗೊಳಿಸುವುದು, ದೇವಸ್ಥಾನಗಳ ಜಮೀನುಗಳನ್ನು ವಶಪಡಿಸಿಕೊಳ್ಳುವುದು, ದೇವನಿಧಿ ಅಪವ್ಯಯ ಈ ರೀತಿಯ ಆನೇಕ ಸಮಸ್ಯೆಗಳು ಮುಗಿಲು ಮುಟ್ಡಿದೆ ಎಂದು ಅವರು ಹೇಳಿದರು.

ಈ ಎಲ್ಲಾ ಕಾರಣಗಳಿಂದ ದೇವಸ್ಥಾನಗಳಲ್ಲಿನ ದೇವತಾ ತತ್ವನ್ನು ಕಾಪಾಡಲು, ದೇವಸ್ಥಾನಗಳಲ್ಲಿ ಧರ್ಮಪ್ರಸಾರ ಮಾಡಲು . ಭಕ್ತಾದಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು , ದೇವಸ್ಥಾನಗಳ ಸಂಘಟನೆಯನ್ನು ಮಾಡುವ ಅನಿವಾರ್ಯತೆ ಬಂದಿದೆ. ದೇವಾಲಯಗಳಿಗೆ ಆಗಮಿಸುವ ಭಕ್ತಾದಿಗಳಿಗೆ ವಸ್ತ್ರಸಂಹಿತೆಯನ್ನು ಅಳವಡಿಸಲು ಕುಶಾಲನಗರ ದೇವಸ್ಥಾನಗಳ ಒಕ್ಕೂಟ ಮತ್ತು ಹಿಂದೂ ಜನಜಾಗೃತಿ ಆಶ್ರಯದಲ್ಲಿ 23 ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು ಅಧಿವೇಶನ ನಡೆಯಲಿದೆ ಎಂದರು.

ಕುಶಾಲನಗರ ದೇವಸ್ಥಾನಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ.ದಿನೇಶ್ ಮಾತನಾಡಿ, ಕುಶಾಲನಗರದಲ್ಲಿ ನಡೆಯುವ ದೇವಸ್ಥಾನ ಪರಿಷತ್ತು ಅಧಿವೇಶನಕ್ಕೆ ಜಿಲ್ಲೆಯಿಂದ 300ಕ್ಕೂ ಹೆಚ್ಚು ಆಮಂತ್ರಿತ ದೇವಸ್ಥಾನಗಳ ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಪ್ರತಿನಿಧಿಗಳು,ದೇವಸ್ಥಾನಗಳ ರಕ್ಷಣೆಗಾಗಿ ಹೋರಾಡುವ ನ್ಯಾಯವಾದಿಗಳು ಧಾರ್ಮಿಕ ಚಿಂತಕರು ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದರು.

ಹೊಸೂರಿನ ಮಹದೇಶ್ವರ ದೇವಸ್ಥಾನದ ಪ್ರಮುಖರಾದ ಕೊಳ್ಳಿರ ಧರ್ಮಜ ಮಾತನಾಡಿ, ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಕೇವಲ 6 ತಿಂಗಳುಗಳಲ್ಲಿ ದೇಶದ್ಯಾದ್ಯಂತ 275 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತಂದಿದೆ ಮತ್ತು ಮಹಾಸಂಘದ ಅಭಿಯಾನದಿಂದ ಪ್ರೇರಿತರಾದ ಆನೇಕ ವಿಶ್ವಸ್ಥರು ತಮ್ಮ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಅಧಿವೇಶನ ವಿರಾಜಪೇಟೆ ಅರೆಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಚಾಲಕರಾದ ಮೋಹನ್ ಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳುವರು.

ಕುಶಾಲನಗರ ರೈತ ಸಹಕಾರ ಭವನದಲ್ಲಿ 23 ರಂದು ನಡೆಯಲಿರುವ ಸಮಾವೇಶ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7204082658 ಗೆ ಸಂಪರ್ಕಿಸುವಂತೆ ಕಾರ್ಯಕ್ರಮ ಸಂಯೋಜಕರಾದ ವಿಜಯಕುಮಾರ್ ತಿಳಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖರಾದ ಬಳಪಂಡ ಪವನ್ ಮತ್ತು ವಿವಿಧ ದೇವಾಲಯಗಳ ಪ್ರತಿನಿಧಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.