ಕಡಂಗ ಫೆ.22 NEWS DESK : ಕಡ0ಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತುಂಬಾಕುವಿನಿಂದಾಗುವ ದುಷ್ಪರಿಣಾಮದ ಕುರಿತು ಚಿತ್ರಕಲಾ ಸ್ಪರ್ಧೆ ನಡೆಯಿತು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ತುಂಬಾಕು ನಿಯಂತ್ರಣ ಘಟಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬಹುಮಾನ ವಿತರಿಸಲಾಯಿತು.
ಪ್ರಥಮ ಸ್ಥಾನ ಅಂಕಿತ ಮಂಡಲ್, ದ್ವಿತೀಯ ಸ್ಥಾನವನ್ನು ರಿಫಾ ಶೇರಿನ್, ಶಿಹಾನ ತೃತೀಯ ಸ್ಥಾನವನ್ನು ಪಡೆದುಕೊಂಡರು.
ಈ ಸಂದರ್ಭ ಶಾಲೆಯ ಶಿಕ್ಷಕ ವೃಂದ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸದಸ್ಯರುಗಳು ಹಾಜರಿದ್ದರು. ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ : ನೌಫಲ್







