Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರವೇ ಬಳಸಲಾಗುತ್ತದೆ : ಅಪಪ್ರಚಾರ ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಮಾತ್ರವೇ ಬಳಸಲಾಗುತ್ತದೆ : ಅಪಪ್ರಚಾರ ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಫೆಬ್ರವರಿ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Cute cartoon vector illustration of a Hinduist Temple
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಫೆ.22 NEWS DESK : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಇಂದು ಮಾಡುತ್ತಿದೆ. 1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಹೀಗಿದ್ದರೂ ಸಾಮಾನ್ಯ ಸಂಗ್ರಹಣಾ ನಿಧಿಯ ನಿಯಮಾವಳಿಗಳಲ್ಲಿ ಅಡಕವಾಗಿರುವ ಅಂಶಗಳಿಗೆ ವಿರುದ್ಧವಾಗಿ ಇಂತಹ ಆಪಾದನೆಗಳನ್ನು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಪ್ರಸ್ತುತ ತಿದ್ದುಪಡಿಗೂ ಮುನ್ನ ಈ ನಿಧಿಗೆ ಹಣವು ಈ ಕೆಳಗಿನ ಮಾರ್ಗಗಳಿಂದ ಬರುತ್ತಿತ್ತು:

(1). ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10;

(2) ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5; ಹಾಗೂ

(3) ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ಅನುದಾನ.

ತಿದ್ದುಪಡಿಯ ನಂತರ ಸಾಮಾನ್ಯ ಸಂಗ್ರಹಣಾ ನಿಧಿಗೆ ಹಣವು ಇದೇ ಮೂಲದಿಂದ ಬರಲಿದೆ:

(1) ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10;

(2) ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5 ಹಾಗೂ

(3) ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.

ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ‌ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ.

ಸಮಾಜದಲ್ಲಿ ತಪ್ಪು ಮಾಹಿತಿಯನ್ನು ಹರಡಿ ಜನರನ್ನು ತಪ್ಪು ಹಾದಿಗೆ ಎಳೆಯುವ ಮೂಲಕ ಈ ದೇಶದ ಜನರ ಅದರಲ್ಲಿಯೂ ವಿಶೇಷವಾಗಿ ಈ ದೇಶದ ಯುವಕರ ವೃತ್ತಿ, ಭವಿಷ್ಯದೊಂದಿಗೆ ಬಿಜೆಪಿ ನಾಯಕರು ಚೆಲ್ಲಾಟವಾಡುತ್ತಿದ್ದಾರೆ. ಯುವಪೀಳಿಗೆ ತಮ್ಮ ಭವಿಷ್ಯವನ್ನು ಬದಿಗೆ ಸರಿಸಿ ಇಂತಹ ಅವಾಸ್ತವಿಕ, ಕಲ್ಪಿತ ಯುದ್ಧಗಳಲ್ಲಿ ತೊಡಗಿಕೊಳ್ಳಲು ಇವರು ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿರುವ ಮುಖ್ಯಮಂತ್ರಿಗಳು  ನಾಡಿನ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.