Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಸುಭಿಕ್ಷವಾದರೆ ಮಾತ್ರ ಕರ್ನಾಟಕ ಸುಭಿಕ್ಷ : ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಸುಭಿಕ್ಷವಾದರೆ ಮಾತ್ರ ಕರ್ನಾಟಕ ಸುಭಿಕ್ಷ : ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್

ಫೆಬ್ರವರಿ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಫೆ.23 NEWS DESK :  ಕರ್ನಾಟಕ ರಾಜ್ಯ ಸುಭಿಕ್ಷವಾಗಬೇಕು ಎಂದರೆ ಕೊಡಗು ಸುಭಿಕ್ಷವಾಗಿರಬೇಕು ಎಂದು ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಪಿ.ರವಿಶಂಕರ್ ಅಭಿಪ್ರಾಯಪಟ್ಟರು.
ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಾಲಯದ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ದೇವಿಗೆ ಸ್ವರ್ಣ ಮುಖ ಕವಚ ಸಮರ್ಪಣಾ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನಲ್ಲಿ ಹುಟ್ಟಿ ರಾಜ್ಯದ ಲಕ್ಷಾಂತರ ಜನರ ಬಾಯಾರಿಕೆ ನೀಗಿಸುವ, ಲಕ್ಷಾಂತರ ಎಕರೆಯಲ್ಲಿ ಬೆಳೆ ಬೆಳೆಯಲು ಕಾವೇರಿ ಮಾತೆಯ ಕೊಡುಗೆ ಅನನ್ಯವಾದದ್ದು. ಅಂತಹ ಶ್ರೇಷ್ಠ ಸ್ಥಳದಲ್ಲಿ ವಾಸವಿ ಮಾತೆಯ ವಿಗ್ರಹದ ಮುಖಕ್ಕೆ ಸ್ವರ್ಣದ ಮುಖವಾಡ ಅರ್ಪಿಸಿದ್ದು ನಮ್ಮೆಲ್ಲರ ಭಾಗ್ಯ. ವಿಶ್ವದಲ್ಲಿ ಭಾರತದ ಘನತೆ ಹೆಚ್ಚಾಗುತ್ತಿರುವ ಹಾಗೆಯೇ ದೇಶದ ಹಿಂದೂ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆಯೂ ವಿಶ್ವ ತಿಳಿಯಲು ಪ್ರೇರೇಪಣೆ ಆಗುತ್ತಿದೆ ಎಂದರು.
ನಿರಾಡಂಭರ ಮೂರ್ತಿಗೆ ಆಡಂಭರದ ಪೂಜೆ ಎಂದು ನಾಸ್ತಿಕರು ಹೇಳುತ್ತಾರೆ. ನಾವು ದೇವಸ್ಥಾನಗಳನ್ನು ಅತ್ಯಂತ ಉನ್ನತ ಮಟ್ಟದಲ್ಲಿ ನೋಡುತ್ತೇವೆ. ನಾವು ಇವರುವುದಕ್ಕಿಂತ ಹೆಚ್ಚಿನ ಉನ್ನತ ಮಟ್ಟದಲ್ಲಿ ದೇವರನ್ನು ನೋಡಲು ಬಯಸುವವರು ನಾವುಗಳು. ಅದರಿಂದ ದೇವರುಗಳಿಗೆ ಅಲಂಕಾರ ಮಾಡಿ ಕಣ್ಣು ತುಂಬಿಕೊಳ್ಳುತ್ತೇವೆ ಎಂದರು.
ರಾಜ್ಯದಲ್ಲಿ ನಮ್ಮ ಜನಾಂಗದವರ ಜನಸಂಖ್ಯೆ 4.5 ಲಕ್ಷ. ರಾಜ್ಯದಲ್ಲಿ ಕನ್ನಿಕಾಪರಮೇಶ್ವರಿ ದೇವಸ್ಥಾನವಿರುವುದು 300. ಇನ್ನು 30 ರಿಂದ 35 ದೇವಸ್ಥಾನ ನಿರ್ಮಾಣ ಆಗುವ ಹಂತದಲ್ಲಿ ಇವೆ. ನಮ್ಮ ಸಮಾಜದಿಂದ ಧರ್ಮ ಜಾಗೃತಿಗಾಗಿ 25 ಕೋಟಿಗೂ ಹೆಚ್ಚು  ಖರ್ಚು ಮಾಡುತ್ತಿದ್ದೇವೆ. ರಾಜ್ಯದಲ್ಲಿ ಶ್ರೀಮಂತರು ಹಲವರು ಇದ್ದರು, ಹೃದಯ ಶ್ರೀಮಂತರು ಕೆಲವರಷ್ಟೇ. ಆ ಕೆಲವರಲ್ಲಿ ನಮ್ಮ ಸಮಾಜವು ಒಂದು. ಅಂದರೆ ನಮ್ಮ ಜನಾಂಗದವರು ಧರ್ಮ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಅಪಾರವಾದ ಕೊಡುಗೆ ನೀಡುತ್ತಿದ್ದಾರೆ ಎನ್ನುವುದು ಸ್ಪಷ್ಟ ಎಂದರು.

ಸದಾ ಲೋಕ ಕಲ್ಯಾಣಕ್ಕಾಗಿ ಪ್ರತಿನಿತ್ಯ ದೇವರುಗಳಿಗೆ ಅಭಿಷೇಕ ಪೂಜೆ ಸಲ್ಲಿಸುವರು ಆರ್ಯವೈಶ್ಯ ಸಮಾಜದವರು ಎಂದು ಶ್ಲಾಘಿಸಿದರು.
10ನೇ ವರ್ಷದ ಪ್ರತಿಷ್ಠಾ ವರ್ಧಂತಿ ಅಂಗವಾಗಿ ದೇವಸ್ಥಾನದಲ್ಲಿ ಚಂಡಿಕಾ ಹೋಮ ನಡೆಯಿತು.
ಕುಶಾಲನಗರ ಆರ್ಯವೈಶ್ಯ ಸಮಾಜದ ಅಧ್ಯಕ್ಷ ಬಿ.ಎಲ್.ಉದಯಕುಮಾರ್ ಮಾತನಾಡಿ, ದಾನಿಗಳ ಸಹಕಾರದಿಂದ ದೇವಿಗೆ ಮುಖ ಸ್ವರ್ಣ ಕವಚ ಅರ್ಪಿಸಲಾಗಿದೆ. ದೇವರ ಇಚ್ಛೆಯಂತೆ ಎಲ್ಲ ನಡೆಯುವುದರಿಂದ ಮಾತೆಯ ಆಜ್ಞೆಯಂತೆ ನಡೆಯೋಣ ಎಂದು ಕರೆ ನೀಡಿದರು.

ದೇಶದಲ್ಲಿ ಯಾರು ಹಸಿವಿನಿಂದ ತೊಂದರೆಗೆ ಒಳಗಾಗಬಾರದೆಂದು ವಾಸವಿ ಮಹಲ್ ನಲ್ಲಿ ಅನ್ನದ ರಾಶಿಯನ್ನು ಇಟ್ಟು ಅನ್ನ ಪೂಜೆ ಮಾಡಲಾಯಿತ್ತು ಎಂದು ತಿಳಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಗಿರೀಶ್ ಭಟ್ ನೇತೃತ್ವದಲ್ಲಿ ಪ್ರಮೋದ್ ಭಟ್, ರಾಘವೇಂದ್ರ ಭಟ್ ಇತರರು ಪೂಜಾ ಕೈಂಕರ್ಯ ನಡೆಸಿದರು.
ಮಹಾಸಭಾದ ಕೊಡಗು ಜಿಲ್ಲಾ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್, ಆರ್ಯವೈಶ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ಯುವತಿಯರ ಸಂಘದ ಅಧ್ಯಕ್ಷೆ ಕವಿತಾ, ಯುವಜನ ಸಂಘದ ಅಧ್ಯಕ್ಷ ಪ್ರವೀಣ್, ಸಮಾಜದ ಹಿರಿಯರಾದ ವಿ.ಎನ್.ಪ್ರಭಾಕರ್, ಕೆ.ಜೆ.ನಾಗೇಂದ್ರ ಗುಪ್ತ, ವಿ.ಪಿ.ರಾಜಗೋಪಾಲ್ ಮತ್ತು ಆರ್ಯವೈಶ್ಯ ಕುಲಾಭಾಂಧವರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.