ಮಡಿಕೇರಿ ಫೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಡಗು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಫೆಬ್ರವರಿ, 24 ಮತ್ತು 25 ರಂದು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ.
ಆಸಕ್ತ ಸರ್ಕಾರಿ ನೌಕರ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ.ಸಂ. 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಹಾಗೂ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ನೋಂದಣಿ https://forms.gle/3arj7sBogh2kieAKA ನೋಂದಣಿ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.







