ಮಡಿಕೇರಿ ಫೆ.24 NEWS DESK : ಒಂದು ತಿಂಗಳ ಕಾಲ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಗೆ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ಇಂದು ನಡೆದ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗು ಜಿ.ಪಂ.ಸಿಇಒ ವರ್ಣಿತ್ ನೇಗಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್ ಪ್ರಶಸ್ತಿ ಪತ್ರ ಸ್ವೀಕರಿಸಿದರು.




































