Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಕಾಲೇಜು ವಿದ್ಯಾರ್ಥಿಗಳ ನ್ಯಾಯ ಸಮ್ಮತ ಬೇಡಿಕೆ ಈಡೇರಿಕೆಗೆ ಸರ್ಕಾರದೊಂದಿಗೆ ಸಮಾಲೋಚನೆ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಣ್ಯ ಕಾಲೇಜು ವಿದ್ಯಾರ್ಥಿಗಳ ನ್ಯಾಯ ಸಮ್ಮತ ಬೇಡಿಕೆ ಈಡೇರಿಕೆಗೆ ಸರ್ಕಾರದೊಂದಿಗೆ ಸಮಾಲೋಚನೆ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಫೆಬ್ರವರಿ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.25 NEWS DESK : ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಕೆಲವು ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ.
ಪೊನ್ನಂಪೇಟೆ ಅರಣ್ಯ ಕಾಲೇಜಿಗೆ ಭೇಟಿ ನೀಡಿದ ಅವರು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು.
ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ, ಆಡಳಿತ ಮತ್ತು ಬದಲಾವಣೆ ಸಮಿತಿ ಅಧ್ಯಕ್ಷರಾಗಿದ್ದ ವಿಜಯ್ ಭಾಸ್ಕರ್ ಅವರು ಅರಣ್ಯ ಇಲಾಖೆ ನೇಮಕಾತಿಗೆ ಸಂಬAಧಿಸಿದAತೆ ಕೆಲವು ತಿದ್ದುಪಡಿಗಳನ್ನು ಸೂಚಿಸಿ ವರದಿ ನೀಡಿದ್ದಾರೆ. ಈ ವರದಿಯನ್ನು ಸರಕಾರ ಅಂಗೀಕರಿಸದAತೆ ಅರಣ್ಯ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದರಿಂದ ಅವರ ಸೇವಾ ಸೌಲಭ್ಯ ಹಾಗೂ ಅವಕಾಶಗಳಿಂದ ವಂಚಿತರಾಗುತ್ತಾರೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರವನ್ನು ಅಧ್ಯಯನ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ಹೇಳಿದರು.
::: ಕಾನೂನಾತ್ಮಕ ಪರಿಹಾರ :::
ಕಳೆದ 25 ವರ್ಷಕ್ಕೂ ಹೆಚ್ಚು ಕಾಲ ನಾನು ವಕೀಲನಾಗಿ ಸೇವೆ ಸಲ್ಲಿಸಿದ್ದೇನೆ. 2 ಸರಕಾರಗಳ ಅವಧಿಯಲ್ಲಿ 6 ವರ್ಷಗಳವರೆಗೆ ಸರಕಾರದ ಅಡ್ವಕೇಟ್ ಜನರಲ್ ಆಗಿಯೂ ಕಾನೂನಾತ್ಮಕ ಆಡಳಿತ ನಡೆಸಿದ ಸುದೀರ್ಘ ಅನುಭವ ಇದೆ. ಕೆಲವು ವಿಚಾರಗಳನ್ನು ಪರಿಹರಿಸಲು ಸಮಯವೂ ಹಿಡಿಯಲಿದೆ ಎಂದು ಎ.ಎಸ್.ಪೊನ್ನಣ್ಣ ಹೇಳಿದರು.
ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಎಲ್ಲಾ ಬೇಡಿಕೆಗಳನ್ನು ಅರಣ್ಯ ಸಚಿವರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಾಲೋಚನೆ ನಡೆಸಿ ಸಮಸ್ಯೆಗೆ ಪರಿಹಾರ ಸೂಚಿಸಲಾಗುವುದು ಎಂದರು.
::: ನಿಯೋಗ ಭೇಟಿಗೆ ಅವಕಾಶ :::
ರಾಜ್ಯದ 3 ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆ ಸಂದರ್ಭ ವಿದ್ಯಾರ್ಥಿಗಳ ನಿಯೋಗವನ್ನು ಅರಣ್ಯ ಸಚಿವರ ಬಳಿಗೆ ಕರೆದೊಯ್ದು ಅವರ ಬೇಡಿಕೆ ಮತ್ತು ಸಮಸ್ಯೆ ಪರಿಹಾರದ ಕುರಿತು ಚರ್ಚಿಸಲು ಅವಕಾಶ ಮಾಡಿ ಕೊಡುವುದಾಗಿ ಭರವಸೆ ನೀಡಿದರು.
ಕಳೆದ 17 ದಿನಗಳಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗದೇ ಪ್ರತಿಭಟನೆ ನಡೆಸುತ್ತಿರುವುದು ಚಿಂತಿಸಬೇಕಾದ ವಿಚಾರವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಪ್ರತಿಭಟನೆ ಕೈ ಬಿಡುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು. ಬಳಿಕ ವಿದ್ಯಾರ್ಥಿಗಳು ಮನವಿ ಪತ್ರವನ್ನು ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಸಲ್ಲಿಸಿದರು.
ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ, ನಿವೃತ್ತ ಡೀನ್ ಡಾ.ಸಿ.ಜೆ.ಕುಶಾಲಪ್ಪ, ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸುಹಾಸ್, ವಿದ್ಯಾರ್ಥಿನಿ ಗೀತಾ ಹೇಮಂತ್ ಕುಮಾರ್ ಸೇರಿದಂತೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.22 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.