Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಬೆಸಿಲ್ ಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ : ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಡಾ ಜೆ.ಸೋಮಣ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಬೆಸಿಲ್ ಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ : ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಡಾ ಜೆ.ಸೋಮಣ್ಣ ಕರೆ*

ಫೆಬ್ರವರಿ 25, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಫೆ.25 NEWS DESK :  ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ – ಇವುಗಳ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಭಾಂಗಣದಲ್ಲಿ ಭಾನುವಾರ ( ಫೆ.25 ರಂದು ) ಸುವರ್ಣ ಕರ್ನಾಟಕ- 50 ರ ಸಂಭ್ರಮದ ಅಂಗವಾಗಿ ಪ್ರಾಥಮಿಕ ಶಾಲಾ ಕನ್ನಡ ಮಾಧ್ಯಮ ಶಿಕ್ಷಕರಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.  ಇದೇ ವೇಳೆಯಲ್ಲಿ ಲೇಖಕರ ಮತ್ತು ಕಲಾವಿದರ ಬಳಗದ ವತಿಯಿಂದ ನಡೆದ ವಾರ್ಷಿಕ ಕಾರ್ಯಕ್ರಮದಲ್ಲಿ  2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಐಗೂರು ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೆಸಿಲ್ ಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.    ಸಮಾರಂಭದಲ್ಲಿ ಕಲೆ ಮತ್ತು ಸಾಹಿತ್ಯ ಬೆಳವಣಿಗೆ ಕುರಿತು ಮುಖ್ಯ ಭಾಷಣ ಮಾಡಿದ ಸಾಹಿತಿ ಡಾ ಜೆ.ಸೋಮಣ್ಣ, ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸಾಹಿತಿ ಭಾರತೀಸುತ ಅವರು ತಮ್ಮ ಕಥೆ, ಕವನ, ಕಾದಂಬರಿ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ.  ಮಕ್ಕಳಲ್ಲಿ ಪ್ರಾಥಮಿಕ ಶಾಲೆಯಿಂದಲೇ ಕಲೆ, ಸಂಸ್ಕೃತಿ ಹಾಗೂ ಸಾಹಿತ್ಯದ ಅಭಿರುಚಿ ಬೆಳೆಸುವ ಮೂಲಕ ಅವರನ್ನು ಭವಿಷ್ಯದಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗಿಸಲು ಶಿಕ್ಷಕರು ಪ್ರೇರೇಪಿಸಬೇಕು ಎಂದರು.    ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ಉತ್ತಮ ಕೊಡುಗೆ ನೀಡುತ್ತಾ ಬಂದಿರುವ ಜಿಲ್ಲಾ ಕ.ಸಾ.ಪ. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್,  ಉದಯೋನ್ಮುಖ ಬರಹಗಾರರು, ಕವಿಗಳು ಹಾಗೂ ಸಾಹಿತಿಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಇಂದು ಸಾಹಿತ್ಯ ಚಟುವಟಿಕೆಗಳು ಹಾಗೂ ಬರಹಗಾರರ ಸಂಖ್ಯೆ ಕೂಡ ವೃದ್ಧಿಸಿದೆ ಎಂದರು.     ಕನ್ನಡ ಮಾಧ್ಯಮದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ  ತಮ್ಮ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸಿರುವ  ಟಿ.ಪಿ.ರಮೇಶ್, ಕಲೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾದುದು ಎಂದು ಡಾ ಸೋಮಣ್ಣ ಹೇಳಿದರು.     2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಐಗೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಿ.ಬಿ.ಬೆಸಿಲ್ ಗೆ ದತ್ತಿ ದಾನಿ ಜಿಲ್ಲಾ ಕ.ಸಾ.ಪ.ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ತಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಇಂದಿನ ಜಾಗತಿಕ ಯುಗದಲ್ಲಿ  ಆಂಗ್ಲ ಮಾಧ್ಯಮದ ಪೈಪೋಟಿ ನಡುವೆ ಕನ್ನಡ ಶಾಲೆಯ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ಈ ದತ್ತಿ ಸ್ಥಾಪಿಸಲಾಗಿದೆ. ವಿದ್ಯಾರ್ಥಿ ಬೆಸಿಲ್ ನಂತಹ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಇಂತಹ ಮಕ್ಕಳು ಕೂಡ ಭವಿಷ್ಯತ್ತಿನಲ್ಲಿ ಉತ್ತಮ ಸಾಧನೆ ಮಾಡಲು ಅವಕಾಶ ಕಲ್ಪಿಸಲು ಸಾಧ್ಯ ಎಂದು ರಮೇಶ್ ಹೇಳಿದರು. ಲೇಖಕರ ಬಳಗದ ವತಿಯಿಂದ ಮುಂದಿನ ದಿನಗಳಲ್ಲಿ ಯುವ ಬರಹಗಾರರಿಗೆ ಲೇಖನ ಬರೆಯುವ ಕಮ್ಮಟ ಸಂಘಟಿಸುವ ಮೂಲಕ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹ್ಮದ್ ಮಾತನಾಡಿ, ಲೇಖಕರ ಬಳಗ ಮತ್ತು ಕ.ಸಾ.ಪ.ವತಿಯಿಂದ ಸಾಹಿತ್ಯ ಚಟುವಟಿಕೆಗಳಿಗೆ ಪೂರಕ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ. ಶಿಕ್ಷಕರ ಭಾಷಣ ಸ್ಪರ್ಧೆಯು ಒಬ್ಬ ಸೃಜನಾತ್ಮಕ ಶಿಕ್ಷಕನಿಂದ  ಸೃಜನಶೀಲ ವಿದ್ಯಾರ್ಥಿಯನ್ನು ಬೆಳೆಸಲು ಸಾಧ್ಯ. ಹಾಗಾಗಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.      ಅಧ್ಯಕ್ಷತೆ ವಹಿಸಿದ್ದ ಬಳಗದ ಅಧ್ಯಕ್ಷ ಲೋಕನಾಥ್ ಅಮೆಚೂರ್ ಮಾತನಾಡಿ, ಲೇಖಕರ ಬಳಗದ ವತಿಯಿಂದ ಯುವ ಸಮುದಾಯದಲ್ಲಿ ಕಲೆ ಮತ್ತು ಸಾಹಿತ್ಯ ಅಭಿರುಚಿ ಬೆಳೆಸುವ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಕೂಡ ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ  ವಾರ್ಷಿಕ ಪರೀಕ್ಷೆಯಲ್ಲಿ  ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಐಗೂರು ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೆಸಿಲ್ ಗೆ ದತ್ತಿ ದಾನಿ ಟಿ.ಪಿ.ರಮೇಶ್ ತಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ದತ್ತಿ ಪ್ರಶಸ್ತಿ ಪ್ರದಾನ ಮಾಡಿದರು.  ಲೇಖಕರ ಬಳಗದ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್,  ಪ್ರಧಾನ ಕೋಶಾಧಿಕಾರಿ ಭಾರತಿ ರಮೇಶ್, ಕೋಶಾಧಿಕಾರಿ ಕಡ್ಲೇರ ತುಳಸಿ, ಸಹ ಕಾರ್ಯದರ್ಶಿ ಜಯಪ್ಪ ಹಾನಗಲ್, ಪದಾಧಿಕಾರಿ ಶ್ವೇತ ರವೀಂದ್ರ , ವಿದ್ಯಾರ್ಥಿ ಬೆಸಿಲ್ ನ ತಾಯಿ ಸಿ.ಬಿ. ಪ್ರೇಮ  ಇತರರು ಇದ್ದರು.   ರೇವತಿ ರಮೇಶ್ ಸ್ವಾಗತಿಸಿದರು.  ಟಿ.ಜಿ.ಪ್ರೇಮಕುಮಾರ್ ವಂದಿಸಿದರು. ಶ್ವೇತ ರವೀಂದ್ರ ನಿರ್ವಹಿಸಿದರು.  ಕ.ಸಾ.ಪ. ಬಳಗದ ಸದಸ್ಯರು ಪ್ರಾರ್ಥಿಸಿದರು.

*ಬಹುಮಾನ ವಿಜೇತರು*: ಕಾರ್ಯಕ್ರಮದ ಅಂಗವಾಗಿ ” ಕಲೆ ಮತ್ತು ಸಾಹಿತ್ಯ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ” ಕುರಿತು ಪ್ರಾಥಮಿಕ ಶಾಲಾ ಕನ್ನಡ ಮಾಧ್ಯಮದ ಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಕೊಡ್ಲಿಪೇಟೆಯ ಕೂಡ್ಲೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸ್ನೇಹ ಬಸಮ್ಮ,  ಪೊನ್ನಂಪೇಟೆ ಬಳಿಯ ನಡಿಕೇರಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕೊಪುಡ ಸೌಮ್ಯ ಚಿಣ್ಣಪ್ಪ, ನಾಪೋಕ್ಲು ಬಳಿಯ ಚರಿಯಪರಂಬು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಟಿ.ಎಚ್.ಸುಕುಮಾರ್ ತೊರೆನೂರು ಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿ ಬಹುಮಾನ ಪಡೆದರು.  ಉಪನ್ಯಾಸಕಿ ಕೆ.ಜಯಲಕ್ಷ್ಮಿ,  ಶ್ವೇತ ರವೀಂದ್ರ, ಸಾಹಿತಿ ಈರವಂಡ ಹರಿಣಿ ವಿಜಯ್ ತೀರ್ಪುಗಾರರಾಗಿ ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.