Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ಜಿಲ್ಲೆಯಲ್ಲಿ 5,251 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ : ಜಿಲ್ಲೆಯಲ್ಲಿ 5,251 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಫೆಬ್ರವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK :  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.1 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬಸ್ ಕಲ್ಪಿಸಲು ಕೆಎಸ್‌ಆರ್‌ಟಿಸಿ  ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸ್‍ಗಳಲ್ಲಿ ಜನದಟ್ಟಣೆ ಹೆಚ್ಚು ಇದೆ ಎಂದು ಬಸ್ ನಿಲ್ದಾಣದಲ್ಲಿ ಬಸ್ಸು ನಿಲ್ಲಿಸದೆ ಹೋಗಬಾರದು, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬರಬೇಕು. ಈಗಾಗಲೇ ಸರ್ಕಾರ ಪರೀಕ್ಷೆಗೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ತೋರಿಸಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು.
ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗದಲ್ಲಿ ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶ್ರುಶೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಕಲ್ಪಿಸುವುದು, ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸಲು ಸಂಬಂಧಪಟ್ಟ ಇಲಾಖೆ ಮುಖ್ಯಸ್ಥರಿಗೆ ಸಲಹೆ ನೀಡಿದರು.
ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗಮನಹರಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಪರೀಕ್ಷೆ ನಡೆಸಬೇಕು ಎಂದರು.
ಸರ್ಕಾರದ ನಿಯಮದಂತೆ ವಸ್ತ್ರ ಸಂಹಿತೆ(ಡ್ರೆಸ್‍ಕೋಡ್)ಯನ್ನು ಪಾಲಿಸುವ ಸಂಬಂಧ ವಿದ್ಯಾರ್ಥಿಗಳಿಗೆ ಮೊದಲೇ ಮಾಹಿತಿ ನೀಡುವಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮಗೆ ವಹಿಸಿರುವ ಕೆಲಸವನ್ನು ವ್ಯವಸ್ಥಿತವಾಗಿ ಮತ್ತು ಗಂಭೀರವಾಗಿ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಈ ಬಾರಿ 5,251 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತೆಗೆದುಕೊಂಡಿದ್ದು, 4,709 ಹೊಸ ವಿದ್ಯಾರ್ಥಿಗಳು, 402 ಖಾಸಗಿ ವಿದ್ಯಾರ್ಥಿಗಳು ಮತ್ತು 140 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯಲ್ಲಿ 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 5, ಸೋಮವಾರಪೇಟೆ ತಾಲ್ಲೂಕಿನಲ್ಲಿ 8 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ರಹಸ್ಯ ಬಂಡಲ್‍ಗಳನ್ನು ಸರಬರಾಜು ಮಾಡಲು ಮಡಿಕೇರಿ 2, ಸೋಮವಾರಪೇಟೆ 3 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 2 ಒಟ್ಟು 7 ಮಾರ್ಗಗಳನ್ನು ಗುರುತಿಸಲಾಗಿದ್ದು, ಈ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು ಎಂದರು.
ಜಿಲ್ಲಾ ಖಜಾನೆಯಲ್ಲಿ ತ್ರಿಸದಸ್ಯ ಸಮಿತಿ ಅಧಿಕಾರಿಗಳಿಗೆ ಮತ್ತು ಎಲ್ಲಾ ಮಾರ್ಗ ಅಧಿಕಾರಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ನಿರ್ವಹಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ,  ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೊಲೀಸ್ ಇಲಾಖೆ ಅಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇತರರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.22 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.