Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಕ್ಷ ಲಕ್ಷ ಮಕ್ಕಳಲ್ಲಿ ಪರಿಸರ ಪ್ರೀತಿ ಮತ್ತು ಸ್ಫೂರ್ತಿಯನ್ನು ತುಂಬಿದವರು ಈ ಹಿರಿಯ ವನ್ಯಜೀವಿ ತಜ್ಞರು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಲಕ್ಷ ಲಕ್ಷ ಮಕ್ಕಳಲ್ಲಿ ಪರಿಸರ ಪ್ರೀತಿ ಮತ್ತು ಸ್ಫೂರ್ತಿಯನ್ನು ತುಂಬಿದವರು ಈ ಹಿರಿಯ ವನ್ಯಜೀವಿ ತಜ್ಞರು*

ಫೆಬ್ರವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.26 NEWS DESK : ಹಿರಿಯ ಪರಿಸರ ಪ್ರೇಮಿ, ವನ್ಯಜೀವಿ ತಜ್ಞ, ನಿವೃತ್ತ ಅರಣ್ಯಾಧಿಕಾರಿ ಕೊಟ್ರಂಗಡ ಎಂ.ಚಿಣ್ಣಪ್ಪ(84) ಅವರು ಸೋಮವಾರ ನಿಧನರಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಾಕೂರು ಗ್ರಾಮದ ನಿವಾಸಿಯಾಗಿದ್ದ ಚಿಣ್ಣಪ್ಪ, 30 ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ರೇಂಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ತಮ್ಮ ಸೇವಾ ಅವಧಿಯಲ್ಲಿ ರಾಜ್ಯದ ಹಲವು ಅರಣ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆ.ಎಂ.ಚಿಣ್ಣಪ್ಪ ಅವರು ವನ್ಯ ಸಂಪತ್ತು ಲೂಟಿ, ವನ್ಯ ಜೀವಿಗಳ ಕಳ್ಳ ಬೇಟೆ, ಮರ ಕಳ್ಳತನ ಮತ್ತಿತ್ತರ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕಿದ್ದರು. ಕೆ.ಎಂ.ಚಿಣ್ಣಪ್ಪ ಅವರ ಅಮೋಘ ಸೇವೆಯನ್ನು ಪರಿಗಣಿಸಿ ಸರಕಾರ 1985ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು. 1990ರ ದಶಕದಲ್ಲಿ ನಾಗರಹೊಳೆ ಅಭಯಾರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದಾಗ ತಮ್ಮ ಜೀವದ ಹಂಗನ್ನೇ ತೊರೆದು ಬೆಂಕಿ ನಂದಿಸಲು ಹರ ಸಾಹಸ ಪಟ್ಟಿದ್ದರು. ಚಿಣ್ಣಪ್ಪ ಅವರು ಅರಣ್ಯ ಅಧಿಕಾರಿಯಾಗಿ ಸಲ್ಲಿಸಿದ ಸೇವೆಯ ಕುರಿತು ಲೇಖಕ ಗೋಪಾಲ್ ಎಂಬುವವರು ‘ಕಾಡಿನೊಳಗೊಂದು ಜೀವ’ ಎಂಬ ಪುಸ್ತಕವನ್ನು ರಚಿಸಿದ್ದು, ಈ ಕೃತಿ ಅಪಾರ ಜನ ಮೆಚ್ಚುಗೆ ಪಡೆದಿದೆ.
ಚಿಣ್ಣಪ್ಪ ಅವರು ವನ್ಯಜೀವಿ ಸಂರಕ್ಷಣಾ ರ‍್ಯಾಲಿ ಮತ್ತು ಸಂವಾದಗಳೊಂದಿಗೆ 1.50 ಲಕ್ಷಕ್ಕೂ ಹೆಚ್ಚು ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮೀಣ ಯುವಕರು ಹಾಗೂ ಗ್ರಾಮಸ್ಥರನ್ನು ತಲುಪಿದರು. ನಿವೃತ್ತಿಯ ನಂತರವೂ 2,500 ಕ್ಕೂ ಹೆಚ್ಚು ಅರಣ್ಯ ಸಂರಕ್ಷಣಾ ಸಿಬ್ಬಂದಿಗೆ ಕಳ್ಳಬೇಟೆ ತಡೆ ಕಾರ್ಯಾಚರಣೆ ಮತ್ತು ಅಗ್ನಿಶಾಮಕ ರಕ್ಷಣೆಯಲ್ಲಿ ತರಬೇತಿ ನೀಡಿದರು.
ಕೊಟ್ರಂಗಡ ಚಿಣ್ಣಪ್ಪ ಅವರು ‘ಕೂರ್ಗ್ ವೈಲ್ಡ್ಲೈಫ್ ಫಸ್ಟ್’ ಸಂಘಟನೆ ಹುಟ್ಟುಹಾಕಿ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಸೇವೆ ಮತ್ತು ಕೊಡುಗೆ ನೀಡಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲಾ ಮಕ್ಕಳಿಂದ ಕಾಡ್ಗಿಚ್ಚು ಜಾಗೃತಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಅರಣ್ಯ ಸಂರಕ್ಷಣೆಯ ಅರಿವು ಮೂಡಿಸುತ್ತಿದ್ದರು.
1941 ರಲ್ಲಿ ಜನಿಸಿದ ಚಿಣ್ಣಪ್ಪ ಅವರು 1967 ರಲ್ಲಿ ಅರಣ್ಯ ಸೇವೆಗೆ ಸೇರಿದರು. 1992 ರಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೊಡ್ಡ ಕಾಡ್ಗಿಚ್ಚು ಸಂಭವಿಸಿದ ನಂತರ ಸ್ವಯಂಪ್ರೇರಿತರಾಗಿ ಸೇವೆಯಿಂದ ನಿವೃತ್ತರಾದರು.
ಇವರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 1985 ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ, 1988 ರಲ್ಲಿ ಡಬ್ಲ್ಯುಸಿಎಸ್ ಪ್ರಶಂಸನಾ ಪತ್ರ ಮತ್ತು 1996 ರಲ್ಲಿ ಟೈಗರ್ ಲಿಂಕ್ ಬಾಗ್ ಸೇವಕ್ ಪ್ರಶಸ್ತಿ ನೀಡಲಾಗಿದೆ.
2000 ಮತ್ತು 2006 ರಲ್ಲಿ ಕ್ರಮವಾಗಿ ಇಎಸ್‌ಎಸ್‌ಒ ಮತ್ತು ಅಭಯಾರಣ್ಯದ ಜೀವಮಾನದ ಸಾಧನೆ ಪ್ರಶಸ್ತಿಗಳನ್ನು ಪಡೆದರು. 2009 ರಲ್ಲಿ ಅವರಿಗೆ ಸಿಎನ್‌ಎನ್- ಐಬಿಎನ್ ರಿಯಲ್ ಹೀರೋಸ್ ಪ್ರಶಸ್ತಿಯನ್ನು ನೀಡಲಾಯಿತು.
ಮೃತರು ಪತ್ನಿ ರಾಧ, ಪುತ್ರ ಮನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದಲ್ಲಿ ನಡೆಯಲಿದೆ.
::: ಸಂತಾಪ :::
ವನ್ಯ ಜೀವಿ ಸಂರಕ್ಷಣಾ ಕಾಯಿದೆಯನ್ನು ಅನುಷ್ಟಾನಗೊಳಿಸಿ ಅವುಗಳ ಉಳಿವಿಗೆ ತಮ್ಮದೇ ಆದ ಕೊಡುಗೆ ನೀಡಿದ್ದ ಕೊಟ್ರಂಗಡ ಎಂ.ಚಿಣ್ಣಪ್ಪ ಅವರ ಅಗಲಿಕೆಗೆ ಪರಿಸರ ಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳು ಕೂಡ ಚಿಣ್ಣಪ್ಪ ಅವರ ಅಗಲಿಕೆಗೆ ಕಂಬನಿ ಮಿಡಿದಿವೆ. ಈ ಕುರಿತು ಪ್ರತಿಕ್ರಿಯಿಸಿದ ವೈಲ್ಡ್ಲೈಫ್ ಫಸ್ಟ್ ಸಹ ಸಂಸ್ಥಾಪಕ ಪ್ರವೀಣ್ ಭಾರ್ಗವ್, ವನ್ಯ ಜೀವಿಗಳ ಸಂರಕ್ಷಣೆ ಕುರಿತು ತಮಗೆ ಅರಿವು ಮೂಡಿಸಿದ್ದ ಕೆ.ಎಂ.ಚಿಣ್ಣಪ್ಪ ಅವರು ತನಗೆ ಗುರುಗಳಾಗಿದ್ದರು ಎಂದು ಸ್ಮರಿಸಿದರು. ವನ್ಯಜೀವಿ ಸಂರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ಕೆ.ಎಂ.ಚಿಣ್ಣಪ್ಪ ಎಂಬ ದಿಗ್ಗಜರನ್ನು ನಾವಿಂದು ಕಳೆದು ಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.