Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ನಿರ್ದೇಶನ : ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದಾರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ನಿರ್ದೇಶನ : ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದಾರೆ*

ಫೆಬ್ರವರಿ 27, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.27 NEWS DESK : ಇದೇ ಮಾ.3 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವಂತೆ ನಿರ್ದೇಶನ ನೀಡಿದರು.
5 ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ, ಶಾಲೆಗಳು, ಪ್ರವಾಸಿ ಸ್ಥಳಗಳು, ಗಡಿ ಪ್ರದೇಶಗಳು ಇತರೆ ಎಲ್ಲೆಡೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಿರ್ದೇಶನ ನೀಡಿದರು.
ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪೋಲಿಯೋ ಹನಿ ಹಾಕುವ ನಿಟ್ಟಿನಲ್ಲಿ 464 ಬೂತ್‍ಗಳನ್ನು ಸ್ಥಾಪಿಸಲಾಗಿದೆ. 31 ಸಂಚಾರಿ ಬೂತ್‍ಗಳು, 01 ಮೊಬೈಲ್ ತಂಡಗಳನ್ನು ನಿಯೋಜಿಸಲಾಗುತ್ತದೆ. ಜೊತೆಗೆ 1920 ಲಸಿಕಾದಾರರು, 86 ಮಂದಿ ಮೇಲ್ವಿಚಾರಕರು, ಹಾಗೆಯೇ 928 ಮಂದಿ ಮನೆ ಮನೆಗೆ ಭೇಟಿ ನೀಡುವ ತಂಡವನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾರ್ಚ್, 03 ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಮಾರ್ಚ್, 04, 5 ಮತ್ತು 6 ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ ಮಾರ್ಚ್, 04 ಮತ್ತು 05 ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಪಲ್ಸ್ ಪೋಲಿಯೋ ಹನಿ ಹಾಕುವ ದಿನಗಳಂದು ಪಂಚಾಯತ್ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕೋರಿದರು.
ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಡಾ.ಯತಿರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ನಗರಸಭೆ ಎಂಜಿನಿಯರ್ ಸೌಮ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಇತರರು ಇದ್ದರು.
ಮತ್ತಷ್ಟು ಮಾಹಿತಿ: ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವು ಮಾರ್ಚ್, 03 ರಂದು ನಡೆಯಲಿದ್ದು, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಪಲ್ಸ್ ಪೋಲಿಯೋ ಕಾರ್ಯಕ್ರಮ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಪಂಚಾಯತ್ ರಾಜ್, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ ದಿನದಂದು ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್, ರೆಡ್‍ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
ಪ್ರವಾಸಿ ಸ್ಥಳಗಳು, ಬಸ್ ನಿಲ್ದಾಣಗಳಲ್ಲಿ ಪೋಲಿಯೋ ಬೂತ್ ತೆರೆಯಲು ಅವಕಾಶ ಮಾಡಬೇಕು. ಕಾರ್ಮಿಕರ ಮಕ್ಕಳು, ಕೊಳಗೇರಿ ಪ್ರದೇಶದಲ್ಲಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕರಿಸುವಂತೆ ಕೋರಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ನಗರಾಭಿವೃದ್ಧಿ, ಕಾರ್ಮಿಕ, ಪೊಲೀಸ್, ವೈದ್ಯಕೀಯ ಶಿಕ್ಷಣ, ಸೆಸ್ಕ್, ಕೆಎಸ್‍ ಆರ್ ಟಿಸಿ, ಪ್ರವಾಸೋದ್ಯಮ ಹೀಗೆ ಎಲ್ಲಾ ಇಲಾಖೆಗಳು ಸಹಕಾರ ನೀಡುವಂತೆ ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.