Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಮೃತ ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್ : ಟೀಮ್ ಕಾರ್ಣಿಕ ಕೊಡಗು ಚಾಂಪಿಯನ್, ಫ್ರೆಂಡ್ಸ್ ಇಲೆವೆನ್ ಅಮ್ಮತಿ ರನ್ನರ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಮೃತ ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್ : ಟೀಮ್ ಕಾರ್ಣಿಕ ಕೊಡಗು ಚಾಂಪಿಯನ್, ಫ್ರೆಂಡ್ಸ್ ಇಲೆವೆನ್ ಅಮ್ಮತಿ ರನ್ನರ್ಸ್*

ಫೆಬ್ರವರಿ 28, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28  NEWS DESK : ಅಮ್ಮತಿಯಲ್ಲಿ ನಡೆದ ಅಮೃತ ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್ ನ ಸೀಸನ್-2 ರಲ್ಲಿ ಟೀಮ್ ಕಾರ್ಣಿಕ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಫ್ರೆಂಡ್ಸ್ ಇಲೆವೆನ್ ಅಮ್ಮತಿ ತಂಡವು ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ತೃತೀಯ ಸ್ಥಾನವನ್ನು ಮರ್ಸಿಲೆಸ್ ಪಡೆದು ಕೊಂಡರೆ, ಉತ್ತಮ ತಂಡವಾಗಿ ಕ್ಯಾಪ್ಟನ್ ಕ್ರಿಕೆಟರ್ಸ್ ಸುಂಟಿಕೊಪ್ಪ ಪಡೆದುಕೊಂಡಿತು.

ಅಮ್ಮತಿ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ಅಮೃತ ಯುವ ಮೊಗೇರ ಸೇವಾ ಸಮಾಜ ಸಿದ್ದಾಪುರ ಹಾಗೂ ಅಮ್ಮತಿ ಹೋಬಳಿ ನೇತೃತ್ವದಲ್ಲಿ ಮೂರು ದಿನಗಳ ಕಾಲ ಒಟ್ಟು ಹತ್ತು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು.

ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಫ್ರೆಂಡ್ಸ್ ಇಲೆವೆನ್ ಅಮ್ಮತಿ ತಂಡವು ಟೀಮ್ ಕಾರ್ಣಿಕ ಕೊಡಗು ತಂಡದ ವಿರುದ್ಧ 9 ವಿಕೆಟ್ ಗಳ ಜಯ ಸಾಧಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು.

ಎಲಿಮಿನೇಟರ್ ಪಂದ್ಯವು ಕ್ಯಾಪ್ಟನ್ ಕ್ರಿಕೆಟರ್ಸ್ ಸುಂಟಿಕೊಪ್ಪ ಹಾಗೂ ಮರ್ಸಿಲೆಸ್ ತಂಡದ ನಡುವೆ ನಡೆದ ಪಂದ್ಯದಲ್ಲಿ ಮರ್ಸಿಲೆಸ್ ತಂಡವು 7 ವಿಕೆಟ್ ಗಳ ಜಯ ಪಡೆದು ಕೊಂಡು ಕ್ವಾಲಿಫಯರ್ ಗೆ ಲಗ್ಗೆ ಇಟ್ಟಿತು.
ದ್ವಿತೀಯ ಕ್ವಾಲಿಫಯರ್ ಪಂದ್ಯವು ಟೀಮ್ ಕಾರ್ಣಿಕ ಕೊಡಗು ಹಾಗೂ ಮರ್ಸಿಲೆಸ್ ತಂಡದ ನಡುವೆ ನಡೆದ ಪಂದ್ಯದಲ್ಲಿ ಟೀಮ್ ಕಾರ್ಣಿಕ ಕೊಡಗು ತಂಡವು 36 ರನ್ ಗಳ ಅಂತರದಲ್ಲಿ ಗೆದ್ದು ಫೈನಲ್ ಗೆ ದ್ವಿತೀಯ ಅರ್ಹತೆ ಪಡೆದುಕೊಂಡಿತು.

ಫೈನಲ್ ಪಂದ್ಯವು ಟೀಮ್ ಕಾರ್ಣಿಕ ಕೊಡಗು ಹಾಗೂ ಫ್ರೆಂಡ್ಸ್ ಇಲೆವೆನ್ ಅಮ್ಮತಿ ತಂಡದ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಮ್ ಕಾರ್ಣಿಕ ಕೊಡಗು ತಂಡವು 2 ವಿಕೆಟ್ ಗಳ ರೋಚಕ ಜಯ ಸಾದಿಸಿ ಅಮೃತ ಮೊಗೇರ ಕ್ರಿಕೆಟ್ ಪ್ರೀಮಿಯರ್ ಲೀಗ್ ನ ಸೀಸನ್-2 ರ ಚಾಂಪಿಯನ್ ಪಟ್ಟ ಅಲಂಕರಿಸಿತು.

ಕ್ರೀಡಾಕೂಟದಲ್ಲಿ ಉತ್ತಮ ಬೌಲರ್ ಆಗಿ ಮರ್ಸಿಲೆಸ್ ತಂಡದ ಅಭಿ ಪಡೆದು ಕೊಂಡರೆ ಉತ್ತಮ ಬಾಟ್ಸ್ ಮೆನ್ ಆಗಿ ಟೀಮ್ ಕಾರ್ಣಿಕ ಕೊಡಗು ತಂಡದ ಸಂಜು ಪಡೆದು ಕೊಂಡರು, ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಟೀಮ್ ಕಾರ್ಣಿಕ ಕೊಡಗು ತಂಡದ ನಾಯಕ ಬಿಪಿನ್ ಪಡೆದು ಕೊಂಡರು.

ಸಮಾಜದ ಮಹಿಳೆಯರಿಗಾಗಿ ನಡೆಸಿದ್ದ ಥ್ರೋ ಬಾಲ್ ಪಂದ್ಯದಲ್ಲಿ ರಕ್ಷಿತಾ ನಾಯಕತ್ವದ ಟೀಮ್ ಕಾರ್ಣಿಕ ಕೊಡಗು ಚಾಂಪಿಯನ್, ಆದ್ರೆ ದಿವ್ಯ ನಾಯಕತ್ವದ ಸಿದ್ದಾಪುರ ತಂಡವು ರನ್ನರ್ಸ್ ಗೆ ತೃಪ್ತಿ ಪಟ್ಟು ಕೊಂಡಿತು.

ಮಹಿಳೆಯರ ಥ್ರೋ ಬಾಲ್ ತೀರ್ಪು ಗಾರಿಕೆಯನ್ನು ರಮೇಶ್ ಹೆಬ್ಬಟ್ಟಗೇರಿ ನಡೆಸಿ ಕೊಟ್ಟರು, ಸ್ಕೋರರ್ ಆಗಿ ದಿನೇಶ್ ಕಾರ್ಯ ನಿರ್ವಹಿಸಿದರು.

ಸಮಾರೋಪ ಸಮಾರಂಭ :: ಅಮೃತ ಮೊಗೇರ ಸೇವಾ ಸಮಾಜ ಸಿದ್ದಾಪುರದ ಅಧ್ಯಕ್ಷ ಪಿ.ಕೆ.ಮಂಜು ಸಮ್ಮುಖದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಸ್ಥಾಪಕ ಸದಾನಂದ ಮಾಸ್ಟರ್, ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದರು.

ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಅಧ್ಯಕ್ಷ ಪಿ.ಬಿ.ಜನಾರ್ಧನ್ ಮಾತನಾಡಿ ಕ್ರೀಡಾಕೂಟವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ. ಸಂಘಟನಾ ಮನೋಭಾವನೆ ಮತ್ತು ಆರ್ಥಿಕ ಸ್ಥಿತಿಗತಿ ಸದೃಢವಾಗಿರಬೇಕು. ದ್ವಿತೀಯ ವರ್ಷದ ಕ್ರೀಡಾಕೂಟವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.

ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಗೌರವ ಸಲಹೆಗಾರ ಹಾಗೂ ಬಿಜೆಪಿ ಎಸ್.ಸಿ.ಮೋರ್ಚಾ ಘಟಕದ ಅಧ್ಯಕ್ಷ ಪಿ.ಎಂ.ರವಿ ಮಾತನಾಡಿ ಯುವಕ, ಯುವತಿಯರು ದುಶ್ಚಟಗಳಿಗೆ ಬಲಿಯಾಗಿ, ಕಾಲಹರಣ ಮಾಡುವುದನ್ನು ಬಿಟ್ಟು ಬಿಡುವಿನ ಸಮಯದಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕ್ರೀಡಾ ಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಿ.ಕೆ.ಮಂಜು ನಾನು ಅಧ್ಯಕ್ಷ ನಾಗಿ ಇರಬಹುದು. ಆದರೆ ಈ ಕ್ರೀಡಾ ಕೂಟ ಯಶಸ್ವಿಯಾಗಲು ರಾಮು ಹಾಗೂ ವಿಶ್ವ  ಹೆಚ್ಚು ಶ್ರಮ ವಹಿಸಿದ್ದಾರೆ ಎಂದರು..
ಅಮೃತ ಮೊಗೇರ ಸೇವಾ ಸಮಾಜದ ಕ್ರೀಡಾ ಅಧ್ಯಕ್ಷ ಪಿ.ಸಿ.ರಮೇಶ್, ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಕ್ರೀಡಾ ಅಧ್ಯಕ್ಷ ಎಂ.ಜಿ.ಚಂದ್ರು, ಗೌತಮ್ ಶಿವಪ್ಪ, ಪಿ.ಬಿ.ಶಿವಪ್ಪ, ಪಿ.ಎನ್.ರಾಮು,  ನಾರಾಯಣ, ಎಂ.ಬಿ.ವಿಶ್ವ, ವಸಂತ, ಪಿ.ಕೆ.ಚಂದ್ರು, ಮಾಚಿಮಂಡ ಸುವಿನ್ ಗಣಪತಿ, ರಘು, ಮಂಜು ಚಂದು, ಗಣೇಶ್, ಸುರೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಕ್ರೀಡಾ ಕೂಟಕ್ಕೆ ತೀರ್ಪುಗಾರಿಕಯಾಗಿ ನಿತೇಶ್, ಯೋಗೇಶ್,ಮಣಿ, ಸ್ಯಾಮ್ ಕಾರ್ಯನಿರ್ವಹಿಸಿದರೆ, ವೀಕ್ಷಕ ವಿವರಣೆಯನ್ನು, ರಮೇಶ್ ಹೆಬ್ಬಟ್ಟಗೇರಿ,ಮಂಜು ಬಬ್ಳಿ ಹಾಗೂ ಮಹೇಶ್ ನಡೆಸಿಕೊಟ್ಟರು.

ಲೈವ್ ಸ್ಕೋರರ್ ಆಗಿ, ಅಶೋಕ್ ಮಡಿಕೇರಿ, ವಿಶ್ವ, ಚೇತನ್ ಹಾಗೂ ವಿವೇಕ್ ಮೊಗೇರ ನಡೆಸಿಕೊಟ್ಟರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.