ಮಡಿಕೇರಿ ಫೆ.28 NEWS DESK : ಬಹು ವರ್ಷದ ಬೇಡಿಕೆಯಾಗಿದ್ದ ಗೋಣಿಕೊಪ್ಪ ಬಸ್ ನಿಲ್ದಾಣ ಕಾಮಗಾರಿಗೆ ಫೆ.29 ರಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಭೂಮಿ ಪೂಜೆ ನೆರವೇರಲಿದೆ.
ಬೆಳಿಗ್ಗೆ 11 ಗಂಟೆಗೆ ಗೋಣಿಕೊಪ್ಪ ಬಸ್ ನಿಲ್ದಾಣ ನಡೆಯಲಿರುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಸದಸ್ಯರು, ಡಿಸಿಸಿ ಸದಸ್ಯರು, ಎಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಹಾಗೂ ಬೂತ್ ಅಧ್ಯಕ್ಷರುಗಳು, ಪಕ್ಷದ ಜವಾಬ್ದಾರಿ ವಹಿಸಿರುವ ನಾಯಕರುಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸುವಂತೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಮನವಿ ಮಾಡಿದ್ದಾರೆ.





































