Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ಬೇರ್” (The Root) ಕೊಡವ ಸಿನಿಮಾ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ಬೇರ್” (The Root) ಕೊಡವ ಸಿನಿಮಾ ಆಯ್ಕೆ*

ಫೆಬ್ರವರಿ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28 NEWS DESK :  ಈಗಾಗಲೇ ಬಾಂಗ್ಲಾ ದೇಶದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಲ್ರ್ಡ್ ಪ್ರೀಮಿಯರ್ ಕಂಡು ಹೆಸರು ಮಾಡಿರುವ ಕೂರ್ಗ್ ಕಾಫಿ ವುಡ್ ಮೂವಿಸ್‍ನ ಬ್ಯಾನರ್ ಅಡಿಯಲ್ಲಿ ತಯಾರಾದ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ಬೇರ್” (The Root) ಕೊಡವ ಸಿನಿಮಾ ಇದೀಗ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
ಇದೇ ಫೆ.29 ರಿಂದ ಮಾರ್ಚ್ 7ರವರೆಗೆ ಬೆಂಗಳೂರಿನ ಒರಿಯಾನ್ ಮಾಲ್‍ನಲ್ಲಿ ನಡೆಯುವ ಚಲನಚಿತ್ರೋತ್ಸವದ Unsung Incredible India ವಿಭಾಗದಲ್ಲಿ ಪ್ರದರ್ಶನಗೊಳ್ಳಲಿದೆ. ಇದು ಕೊಡವ ಸಿನಿಮಾ ರಂಗದಲ್ಲಿ ಬಹುದೊಡ್ಡ ಸಾಧನೆಯಾಗಿದೆ ಎಂದು ಚಿತ್ರತಂಡ ಹರ್ಷವ್ಯಕ್ತಪಡಿಸಿದೆ.
ಇದಕ್ಕೂ ಮೊದಲು ನಡೆದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ವಿವಿಧ ವಿಭಾಗಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿಗಳನ್ನು ಪಡೆದ ಕೊಡವ ಮತ್ತು ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ “ಬೇರ್” ಕೊಡವ ಸಿನಿಮಾ ಮೂಡಿ ಬಂದಿದೆ.
ವಿದೇಶದಲ್ಲಿ ಪ್ರದರ್ಶನ ಕಂಡ ಮೊದಲ ಕೊಡವ ಸಿನಿಮಾ ಹೆಗ್ಗಳಿಗೆ ಪ್ರಕಾಶ್ ಕಾರ್ಯಪ್ಪ ಅವರಿಗೆ ಸಲ್ಲುತ್ತದೆ. ಇವರು ಮಾಡಿದ ಎಲ್ಲಾ ಸಿನಿಮಾಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿದೆ. ಕೊಡವ ಭಾಷೆ, ಆಚಾರ, ವಿಚಾರ ಹಾಗೂ ಪರಿಸರವನ್ನು ಯುವ ಪಿಳಿಗೆಗೆ ಸಿನಿಮಾದ ಮೂಲಕ ಪರಿಚಯಿಸುವುದರ ಜೊತೆಗೆ ಸಿನಿಮಾದ ಗೆಲುವಿಗೆ ಶ್ರಮಿಸುತ್ತಿದ್ದಾರೆ.
ಪ್ರಪ್ರಥಮ ಬಾರಿಗೆ ಇಂಟಲೆಕ್ಚುವಲ್ ಕೊಡವ ಸಿನಿಮಾವಾಗಿದ್ದು, ಕೆಲವೇ ಪಾತ್ರದಾರಿಗಳ ನಟನೆ ಈ ಸಿನಿಮಾದಲ್ಲಿದೆ. ತಮ್ಮದಲ್ಲದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಆಗುವ ಅನಾಹುತಗಳ ಬಗ್ಗೆ ಯುವ ಪೀಳಿಗೆಗೆ ಸಂದೇಶವನ್ನು ನೀಡುವ ವಿಭಿನ್ನ ಕಥಾಹಂದರವನ್ನು “ಬೇರ್” (The Root) ಕೊಡವ ಸಿನಿಮಾ ಹೊಂದಿದೆ.
ಚಿತ್ರದಲ್ಲಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ವಾಂಚೀರ ವಿಠಲ್ ನಾಣಯ್ಯ, ಮಂಡೀರ ಪದ್ಮ ಬೋಪಯ್ಯ, ಮೊಣ್ಣಂಡ ನೇಹ ಮೋಟಯ್ಯ, ಉಳುವಂಗಡ ಅಮಿತ್ ಬೋಪಣ್ಣ, ಗುಮ್ಮಟ್ಟಿರ ಕಿಶು ಉತ್ತಪ್ಪ ಹಾಗೂ ತೊರೇರ ಕವನ, ಬಾಲನಟರಾಗಿ ತೇಜಲ್ ಕಾರ್ಯಪ್ಪ ಹಾಗೂ ತನಮ್ ಕಾರ್ಯಪ್ಪ ನಟಿಸಿದ್ದಾರೆ.
ಈರಮಂಡ ಹರಿಣಿ ವಿಜಯ್ ಮತ್ತು ಇತಿಹಾಸ ಶಂಕರ್ ಸಹ ನಿರ್ದೇಶಕರಾಗಿ, ಶಿವಕುಮಾರ್ ಅಂಬಲಿ ಹಾಗೂ ಸಂತೋಷ ಬಪ್ಪು ಛಾಯಾಗ್ರಾಹಕರಾಗಿ, ಪ್ರದೀಪ್ ಆರ್ಯನ್ ಸಂಕಲನಕಾರರಾಗಿ ಮತ್ತು ವಿಠಲ್ ರಂಗದೊಳ್ ಸಂಗೀತ ನಿರ್ದೇಶಕರಾಗಿ, ಕಲರಿಂಗ್ ನಿಕಿಲ್ ಕಾರ್ಯಪ್ಪ, ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಈರಮಂಡ ವಿಜಯ್ ಉತ್ತಯ್ಯ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಪ್ರಥಮ ಬಾರಿಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೊಡಗಿನ ಒಂದೇ ಕುಟಂಬದ ಪತಿ ಪತ್ನಿಯರ ಕೊಡವ ಹಾಗೂ ಕನ್ನಡ ಸಿನಿಮಾ ಆಯ್ಕೆಯಾಗಿರುವುದು ಹೆಗ್ಗಳಿಗೆಯ ವಿಷಯವಾಗಿದ್ದು, ಇವರ ಸಾಧನೆಗೆ ಚಲನಚಿತ್ರದ ಅನೇಕ ನಟ ಹಾಗೂ ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.