Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಅಗತ್ಯ : ಅನಿತಾ ಪೂವಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಅಗತ್ಯ : ಅನಿತಾ ಪೂವಯ್ಯ*

ಫೆಬ್ರವರಿ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.28 NEWS DESK :  ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಇದ್ದು, ಇದನ್ನು ಶೇ.50 ರಷ್ಟು ಹೆಚ್ಚಿಸಬೇಕು ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಖಾಸಗಿ ಹೋಟೆಲ್‍ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ‘ಮೈಸೂರು ವಿಭಾಗದ ಆಯ್ದ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ’ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಕ್ರೀಡೆ, ಸಿನಿಮಾ, ವಿಜ್ಞಾನ ಮತ್ತು ತಂತ್ರಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಇದ್ದು, ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಮಾಜದಲ್ಲಿ ಸ್ತ್ರೀ ಮತ್ತು ಪುರುಷರು ಸಮಾನವಾಗಿದ್ದಾಗ ಮಾತ್ರ ಉತ್ತಮ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಿಳೆಯರು ಸಹ ರಾಜಕೀಯ, ಆರ್ಥಿಕ, ಶೈಕ್ಷಣಿಕ, ಕ್ರೀಡೆ, ಸಿನಿಮಾ, ವಿಜ್ಞಾನ ಮತ್ತು ತಂತ್ರಜ್ಞಾನ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವುದು ನೋಡುತ್ತೇವೆ ಎಂದರು.
ಇತ್ತೀಚೆಗೆ ಮಹಿಳೆಯರು ಸಹ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದನ್ನು ಕಾಣುತ್ತೇವೆ. ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಈ ಹಿಂದೆ ಮಹಿಳೆಯರಿಗೆ ಮುಂದುವರಿದ ರಾಷ್ಟ್ರಗಳಲ್ಲಿಯೇ ಮತದಾನ ಹಕ್ಕು ಇರಲಿಲ್ಲ. ಆದರೆ ನಮ್ಮ ದೇಶದಲ್ಲಿ ಚುನಾವಣೆ ಆರಂಭದಿಂದಲೂ ಮಹಿಳೆಯರಿಗೆ ಮತದಾನ ಹಕ್ಕು ಇರುವುದನ್ನು ಕಾಣುತ್ತೇವೆ. ಆ ನಿಟ್ಟಿನಲ್ಲಿ ರಾಷ್ಟ್ರದಲ್ಲಿ ಮಹಿಳೆಯರಿಗೆ ಸಮಾಜ ಗೌರವದಿಂದ ಕಂಡಿದೆ ಎಂದರು.
ಸ್ತ್ರೀಶಕ್ತಿ ಗುಂಪುಗಳು, ಮಹಿಳಾ ಸಂಘಟನೆಗಳು ಸಹಕಾರ ಸಂಘದ ಮೂಲಕ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಹಲವರಿಗೆ ಉದ್ಯೋಗ ಕಲ್ಪಿಸುವಲ್ಲಿ ಸಹಕಾರಿಯಾಗಿದೆ. ಇದರಿಂದ ಸ್ವಾವಲಂಬಿ ಬದುಕಿಗೆ ಅನುಕೂಲ ಆಗಿದೆ ಎಂದು ಅನಿತಾ ಪೂವಯ್ಯ ಅವರು ಹೇಳಿದರು.
ಕುಟುಂಬ ನಿರ್ವಹಣೆಗೆ ಪುರುಷ ಮತ್ತು ಸ್ತ್ರೀ ಇಬ್ಬರಲ್ಲಿ ಹೊಂದಾಣಿಕೆ ಅತ್ಯಗತ್ಯ. ಪ್ರತಿಯೊಬ್ಬರೂ ಸಮಾಜ ಮುಖಿಯಾಗಿ ಯೋಚಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಮಹಿಳೆಯರು ಮುಂದಾಗಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಅಸೋಷಿಯೇಟ್ ಪ್ರೊಫೆಸರ್ ಡಾ.ಆರ್.ಎಚ್.ಪವಿತ್ರ ಅವರು ಮಾತನಾಡಿ ಮಹಿಳೆಯರು ತಾವು ದುಡಿದ ಹಣವನ್ನು ಸ್ವಲ್ಪವನ್ನಾದರೂ ಉಳಿತಾಯ ಮಾಡಿ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಉಳಿತಾಯದಿಂದ ಆದಾಯ ಹೆಚ್ಚಳ. ಇದರಿಂದ ಜೀವನಮಟ್ಟ ಸುಧಾರಿಸುತ್ತದೆ. ಜೊತೆಗೆ ಕೌಶಲ್ಯಾಭಿವೃದ್ಧಿ ಪಡೆದು, ಸ್ವ ಉದ್ಯೋಗ ಕೈಗೊಂಡು ಸ್ವಾವಲಂಭಿ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದರು.
ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಮುಖ್ಯವಾಹಿನಿಗೆ ಬರುವುದರ ಜೊತೆಗೆ ಸುಸ್ಥಿರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಸಮಾಜದಲ್ಲಿ ಮಹಿಳೆಯರು ಹಲವು ಸವಾಲು, ಸಮಸ್ಯೆಗಳನ್ನು ಎದುರಿಸಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಇದರಿಂದ ಸಮಾಜದಲ್ಲಿ ಸುಧಾರಣೆ ಮತ್ತು ಬದಲಾವಣೆ ಕಾಣಬಹುದು ಎಂದರು.
ಸಹಕಾರ ಸಂಘಗಳ ಅಪರ ನಿಬಂಧಕರಾದ(ನಿವೃತ್ತ) ಎಚ್.ಎಸ್.ನಾಗರಾಜಯ್ಯ ಅವರು ಮಹಿಳಾ ಸಹಕಾರ ಸಂಘಗಳ ಸಮಗ್ರ ಅಭಿವೃದ್ಧಿಗೆ ಪೋಷಕವಾಗುವ ಸಹಕಾರ ಸಂಘಗಳ ಕಾಯ್ದೆಯ ಅಂಶಗಳ ಕುರಿತು ಮಾತನಾಡಿದರು.
ನಬಾರ್ಡ್ ಮತ್ತು ತರಬೇತಿದಾರರಾದ ನಿವೃತ್ತ ಅಧಿಕಾರಿ ವೈ.ವಿ.ಗುಂಡುರಾವ್ ಅವರು ಸಹಕಾರ ಸಂಘಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಸಮಯ ಮತ್ತು ಒತ್ತಡ ನಿರ್ವಹಣೆ ಕುರಿತು ಮಾತನಾಡಿದರು.
ಸಹಕಾರ ಇಲಾಖೆಯ ತರಬೇತಿ ವಿಭಾಗದ ಪ್ರಾಂಶುಪಾಲರಾದ ಆರ್.ಎಸ್.ರೇಣುಕಾ ಅವರು ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮ ಸಂಚಾಲಕರಾದ ಎಸ್.ಸುಕನ್ಯಾ, ಜಿಲ್ಲಾ ಸಹಕಾರ ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಮಂಜುಳ, ಎಚ್.ಪಿ.ಭಾನುಮತಿ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.