ಮಡಿಕೇರಿ ಫೆ.29 NEWS DESK : ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಚೌಡೇನಹಳ್ಳಿಯ ಕುಮಾರ್ ಎಂ.ಎಸ್ ಆಯ್ಕೆಯಾಗಿದ್ದಾರೆ.
ವೇದಿಕೆಯ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ ಅವರು ಕುಮಾರ್ ಅವರನ್ನು ನೇಮಕ ಮಾಡಿ ಸಾಮಾಜಿಕ ಕಳಕಳಿಯೊಂದಿಗೆ ಸಂಘಟನೆಯನ್ನು ಬಲಗೊಳಿಸುವಂತೆ ಆದೇಶಿಸಿದ್ದಾರೆ.









