Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
  • *ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*
  • *ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*ಜನವಿರೋಧಿ ನೀತಿಯ ವಿರುದ್ಧ ಸಿದ್ದಾಪುರದಲ್ಲಿ ಪ್ರತಿಭಟನೆ : ಬೇಡಿಕೆ ಈಡೇರಿಕೆಗೆ 50 ಸಾವಿರ ಸಹಿ ಸಂಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಸಿಐಟಿಯು*
Uncategorized

*ಜನವಿರೋಧಿ ನೀತಿಯ ವಿರುದ್ಧ ಸಿದ್ದಾಪುರದಲ್ಲಿ ಪ್ರತಿಭಟನೆ : ಬೇಡಿಕೆ ಈಡೇರಿಕೆಗೆ 50 ಸಾವಿರ ಸಹಿ ಸಂಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ಸಿಐಟಿಯು*

ಮಾರ್ಚ್ 1, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಮಾ.1 NEWS DESK : ಕಾರ್ಮಿಕ ವಿರೋಧಿ ನೀತಿ, ಬೆಲೆ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿದ್ದಾಪುರದಲ್ಲಿ ಸಿಐಟಿಯು ಸಂಘಟನೆ ಪ್ರತಿಭಟನೆ ನಡೆಸಿತು.

ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಪ್ರತಿಭಟನೆ ನಡೆಸುವುದರೊಂದಿಗೆ ಪ್ರಧಾನಿಗೆ ಪತ್ರ ಬರೆದು ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, 2024 ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದೆ. ಎನ್.ಡಿ.ಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಡಾ.ಸ್ವಾಮಿನಾಥನ್ ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ಹೇಳಿ ವರ್ಷಗಳೇ ಕಳೆದಿದೆ ಆದರೆ ‘ಸಬ್‌ಕಾ ಸಾಥ್’ ಎಂದು ಜನಸಾಮಾನ್ಯರು ಕೊಂಡುಕೊಳ್ಳುವ ಸಾಮಾರ್ಥ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ ಮತ್ತು ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗಿಕರಣ ಗೊಳಿಸಿದ್ದಾರೆ. ಜನರಿಗೆ 2700 ಕ್ಯಾಲೋರಿ ಆಹಾರ ಪ್ರತಿದಿನ ಸಿಗದ ಪರಿಣಾಮ ಇಂದು ಭಾರತ ಹಸಿವಿನ ಸೂಚ್ಯಾಂಕದಲ್ಲಿ 111ನೇ ಸ್ಥಾನಕ್ಕೆ ಕುಸಿದಿದೆ ಎಂದರು.

ಆರ್ಥಿಕ ಬಿಕ್ಕಟ್ಟನ್ನು ಕರೋನಾ ಮುಂಚಿತವಾಗಿದ್ದ ಬೆಳವಣಿಗೆಗೆ ಹೋಲಿಸದೇ ಕರೋನಾ ನಂತರದ ಬೆಳವಣಿಗೆಗೆ ಹೋಲಿಸಿ ಆರ್ಥಿಕ ಬಿಕ್ಕಟ್ಟು ಸುಧಾರಿಸಿದೆ ಎಂದು ಹೇಳಲಾಗುತ್ತಿದೆ. ಆರ್ಥಿಕ ಬಿಕ್ಕಟ್ಟು ಸುಧಾರಿಸಿದ್ದರೆ ಕಾರ್ಮಿಕ ಕಾನೂನುಗಳ ತಿದ್ದುಪಡಿ ಮಾಡಿ ಮುಷ್ಕರದ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕನ್ನು ಏಕೆ ಕಸಿಯಲಾಗುತ್ತಿದೆ. 5 ಟ್ರಿಲಿಯನ್ ಆರ್ಥಿಕತೆಯನ್ನು ಸಾಧಿಸುವ ಭಾರತದಲ್ಲಿ ಶೇ.42.3  ನಿರುದ್ಯೋಗ ಏಕೆ? ಬಂಡವಾಳ ಹೂಡಿಕೆಯಾಗುತ್ತಿದೆ ಎಂದು ಪ್ರತಿಪಾದನೆ ಮಾಡುವ ಸರ್ಕಾರ 100ಕ್ಕೆ ಶೇ.60 ಗುತ್ತಿಗೆ-ಹೊರಗುತ್ತಿಗೆಯ ಹುದ್ದೆಗಳನ್ನು ಏಕೆ ಸೃಷ್ಟಿಸಲಾಗುತ್ತಿದೆ ಎಂದು ಪ್ರಶ್ನಿಸಿದರು.

ಭಾರತವನ್ನು ಕಟ್ಟಿರುವ ಸಾರ್ವಜನಿಕ ಕೈಗಾರಿಕೆಗಳನ್ನು ಖಾಸಗೀಕರಿಸಿದ್ದಲ್ಲದೇ ಸರ್ಕಾರದ ಆಸ್ತಿಯನ್ನು NMP ಯ ಮುಖಾಂತರ ಖಾಸಗೀಯವರಿಗೆ ದಾನ ಮಾಡಿದರೆ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಲು ಸಾದ್ಯವಿದೆಯಾ? ಗರಿಷ್ಠ ಆಡಳಿತ ಕನಿಷ್ಠ ಸರ್ಕಾರ ಎಂದರೆ ಸಾರ್ವಜನಿಕ ಒಡೆತನವನ್ನು ಖಾಸಗಿ ವ್ಯಕ್ತಿಗಳಿಗೆ ಅಡಮಾನ ಇಡುವುದೇ? ದೇಶಕ್ಕೆ ಅನ್ನ ನೀಡುವ ರೈತ ಬೆಳೆದ ಬೆಳೆಗಳಿಗೆ ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಬೆಂಬಲ ಬೆಲೆಗೆ ಕಾನೂನು ತರುವ ಬದಲು ರೈತನನ್ನು ಬಲಿ ತೆಗೆದು ಕೊಳ್ಳುವ ನೀತಿ ಸರಿಯೇ ಎಂದರು.

ಆದ್ದರಿಂದ ಸರ್ಕಾರ ಸಂಪೂರ್ಣವಾಗಿ ತನ್ನ ನೀತಿಗಳನ್ನು ಬದಲಾಯಿಸಬೇಕೆಂದೂ ಒತ್ತಾಯಿಸಿ ದೇಶದ ಎಲ್ಲಾ ರೈತರು, ಕೂಲಿಕಾರರು, ಕಾರ್ಮಿಕರು ಒಂದಾಗಿ ಚಳುವಳಿ ನಡೆಸುತ್ತಿದ್ದಾರೆ. ಇಂತಹ ಚಳುವಳಿಗಳ ಮೇಲೆ ದೆಹಲಿಯಲ್ಲಿ ಪೊಲೀಸ್ ದಬ್ಬಾಳಿಕೆ ಮಾಡಿರುವುದನ್ನು  ಖಂಡನೀಯ ಎಂದರು.

ಬೇಡಿಕೆಗಳು :: 
ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು,  ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಮತ್ತು NMP  ಯನ್ನೊಳಗೊಂಡಂತೆ ಎಲ್ಲಾ ಸ್ವರೂಪದ ಖಾಸಗಿಕರಣವನ್ನು ಕೈಬಿಡಬೇಕು, ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು, ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು, ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸುವುದು,  ನರೇಗಾ ಯೋಜನೆಯನ್ನು 200 ದಿನಗಳಿಗೆ ಹೆಚ್ಚಿಸಿ. 600 ರೂ ಕೂಲಿ ನಿಗದಿ ಮಾಡಿ, ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡುವುದು,  ನ್ಯಾಯಯುತ GST ಪಾಲನ್ನು ರಾಜ್ಯಗಳಿಗೆ ಕೊಡುವ ಮುಖಾಂತರ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಒತ್ತಾಯಿಸಿದರು.

ಕನಿಷ್ಟ ವೇತನವನ್ನು ಅಕುಶಲ ಕಾರ್ಮಿಕರಿಗೆ ರೂ 31,000 ಹಾಗು ಹೆಚ್ಚಿನ ಕೌಶಲ್ಯದ ಪ್ರತಿ ಹಂತಕ್ಕೆ ಶೇ.15 ಹೆಚ್ಚಳದೊಂದಿಗೆ ನಿಗದಿಪಡಿಸಬೇಕು. ಗ್ರಾಹಕ ಬೆಲೆ ಸೂಚ್ಯಾಂಕದ ಪ್ರತಿ ಅಂಶದ ಹೆಚ್ಚಳಕ್ಕೆ ಪ್ರತಿ ದಿನಕ್ಕೆ 6 ಪೈಸೆಗಳ ತುಟ್ಟಿಭತ್ಯೆ ನಿಗದಿಪಡಿಸಬೇಕು, ಬೆಲೆ ಸೂಚ್ಯಾಂಕವನ್ನು ಪ್ರಾಮಾಣಿಕವಾಗಿ ಪ್ರಕಟಿಸಬೇಕು, ಸರ್ವೋಚ್ಚ ನ್ಯಾಯಾಲಯದ ತೀರ್ಪಿನನ್ವಯ ವೈಜ್ಞಾನಿಕ ರೀತಿಯಲ್ಲಿ ಕನಿಷ್ಟ ವೇತನವನ್ನು ನಿಗದಿಪಡಿಸಿ ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ನಮ್ಮ ಸಂವಿಧಾನದ ಪರಿಚ್ಛೇದ 39(ಡಿ)ನಲ್ಲಿ ಪ್ರತಿಪಾದಿಸಿರುವ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಬೇಕು,  ಕಡಿಮೆ ವೇತನ ನೀಡುತ್ತಾ ಗುತ್ತಿಗೆ-ಹೊರಗುತ್ತಿಗೆ ಹಾಗೂ ಹಂಗಾಮಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಕೊನೆಗಾಣಿಸಬೇಕು, ಕೇಂದ್ರ-ರಾಜ್ಯ ಸರ್ಕಾರಗಳು, ವಿವಿಧ ಇಲಾಖೆಗಳು, ನಿಗಮ ಮಂಡಳಿ ಆಸ್ಪತ್ರೆ, ಮುಸ್ಸಿಪಾಲಿಟಿ, ಖಾಸಗಿ ಕಂಪನಿಗಳಲ್ಲಿ ಗುತ್ತಿಗೆ ಆಧಾರಿತವಾಗಿ ವರ್ಷಗಟ್ಟಲೆಯಿಂದ ದುಡಿಸಿಕೊಳ್ಳುತ್ತಿರುವ ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಖಾಯಂಯಾತಿಗೆ ಶಾಸನ ತರಬೇಕು, ದೇಶದಲ್ಲಿರುವ ಕೋಟ್ಯಾಂತರ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಭಾಗವಾಗಿ ಕನಿಷ್ಠ ಮಾಸಿಕ ಪಿಂಚಣಿ 6,000/- ರೂ. ಪಿ.ಎಫ್. ಪಿಂಚಣಿ 10,000/-ಕ್ಕೆ ಹೆಚ್ಚಿಸಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರ ಸಮಗ್ರ ಸಾಮಾಜಿಕ ಭದ್ರತೆಗೆ ಜಿಡಿಪಿ 6%ನ್ನು ಮೀಸಲಿರಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಕಾನೂನು-1996 ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸೆಸ್ ಕಾನೂನು-1996 ಗಳನ್ನು ಪುನರ್ ಸ್ಥಾಪಿಸಬೇಕು,  ಆಹಾರ, ಆರೋಗ್ಯ, ಶಿಕ್ಷಣ ಮತ್ತು ಪೌಷ್ಠಿಕ ಆಹಾರಕ್ಕಾಗಿರುವ ಯೋಜನೆಗಳಾದ ICDS, MDM, NHM, ICPS, SSA, MNRE ಮುಂತಾದ ಯೋಜನೆಗಳನ್ನು ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು,  3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಕೊಡಲು ಕಾನೂನು ರೂಪಿಸಬೇಕು. NEP ನಿಲ್ಲಿಸಬೇಕು,  49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು 20 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ರೂ. ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕನಿಷ್ಠ 10 ಸಾವಿರ ರೂ. ಪಿಂಚಣಿ ಕೊಡಬೇಕು, 29 ಕಾರ್ಮಿಕ ಕಾನೂನುಗಳ ಸಂಯುಕ್ತ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿಗೊಳಿಸಬೇಕು, ಬರಪಿಡಿತ ಕರ್ನಾಟಕ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಈ ಸಂದರ್ಭಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು, ಜಿಲ್ಲಾ ಖಜಾಂಚಿ ಕುಟ್ಟಪ್ಪನ್, ಉಪಾಧ್ಯಕ್ಷ ಮಹದೇವ್, ಪ್ರಮುಖರಾದ ಟಿ.ಟಿ ಉದಯನ್, ಚಂದ್ರನ್, ಶಿವರಾಮನ್, ಮುಸ್ತಫ, ಮಹದೇವ ಎಂ.ಜಿ ಜೋಸ್, ಸೌಕತ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಬೇಡಿಕೆಗಳನ್ನು ಮುಂದಿಟ್ಟು ಸಾವಿರಾರು ಮಂದಿ ಸಹಿ ಮಾಡಿರುವ ಪತ್ರವನ್ನು ಅಂಚೆ ಕಚೇರಿಗಳ ಮೂಲಕ
ಪ್ರಧಾನಮಂತ್ರಿಗೆ ಕಳಿಸಲು ಜಿಲ್ಲಾಧಿಕಾರಿಗಳಿಗೆ ಕಳಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.25 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡರಾಮ ದೇವಾಲಯದಲ್ಲಿ…

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026

*ನಾಪೋಕ್ಲು ಸುತ್ತಮುತ್ತ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.