Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*
  • *ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*
  • *ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದ ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದ ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.1 NEWS DESK :  ಸುಂಟಿಕೊಪ್ಪದ ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಗಳ್ ಶಿಕ್ಷಣ ಸಂಸ್ಥೆಯಲ್ಲಿ 6 ವರ್ಷಗಳ ಕಾಲ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಶರಫಿ ಪದವಿಯನ್ನು ಪಡೆದು ಉನ್ನತ ಶಿಕ್ಷಣಕ್ಕಾಗಿ ದಕ್ಷಿಣ ಏಷ್ಯದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ನುರಿಯ ಅರಬಿಕ್ ಕಾಲೇಜ್ ಗೆ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಎಸ್‍ಎಂಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಸಂಭ್ರಮದಿಂದ ಅದ್ದೂರಿಯಾಗಿ ಬೀಳ್ಕೊಟ್ಟರು.
ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಕೊಡಗು ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುಧಾರಣೆಯನ್ನು ಗುರಿಯಾಗಿಸಿ 2016ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಸಂಸ್ಥೆ ಶ್ರೇಷ್ಠವಾದ ಕೊಡುಗೆಯನ್ನು ನೀಡುತ್ತಿದೆ ಮತ್ತು ಸೇವೆಯನ್ನು ಮಾಡುತ್ತಿದೆ ಎಂದರು.
ಮನುಕುಲಕ್ಕೆ ಅನುಗ್ರಹವಾಗುವ ಮತ್ತು ಸಮಾಜಕ್ಕೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಸೇವೆ ಮಾಡಲು ಶಕ್ತರು ಹಾಗೂ ಸಮರ್ಥರಾದ ಬಹುಭಾಷಾ 14 ಯುವ ಪಂಡಿತರನ್ನು ಸಮರ್ಪಿಸಲು ಸಾಧ್ಯವಾಗಿರುವುದು ನಮ್ಮ ಸಂಸ್ಥೆಯ ದೊಡ್ಡ ಸಾಧನೆ ಎಂದು ಹರ್ಷ ವ್ಯಕ್ತಪಡಿಸಿದರು.
ಹತ್ತನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧಾರ್ಮಿಕ ಮತ್ತು ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ನೀಡಲು ಈ ಸಂಸ್ಥೆ ಆಸರೆಯಾಗಿದೆ. ಯಾವುದೇ ಶುಲ್ಕವನ್ನು ಪಡೆಯದೆ ಶಿಕ್ಷಣ, ವಸತಿ ಮತ್ತು ಆಹಾರ ಎಲ್ಲವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಗುರಿಯನ್ನು ಮುಂದಿಟ್ಟುಕೊಂಡು ಶೈಕ್ಷಣಿಕವಾಗಿ ಹಲವಾರು ಹೊಸ ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದರು.
2024-25ನೇ ಅವಧಿಗೆ 10ನೇ ತರಗತಿಯಿಂದ ಉತ್ತೀರ್ಣರಾದ 30 ವಿದ್ಯಾರ್ಥಿಗಳಿಗೆ ಹೊಸದಾಗಿ ಅವಕಾಶವನ್ನು ಕಲ್ಪಿಸಿಕೊಡಲಾಗುವುದು. ಆಸಕ್ತಿ ಇರುವ ಪೋಷಕರು ಅಥವಾ ವಿದ್ಯಾರ್ಥಿಗಳು ದಾಖಲಾತಿಗೆ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಅಬ್ದುಲ್ ಹಮೀದ್ ಮೌಲವಿ ಹೇಳಿದರು.
ಇದೇ ಸಂದರ್ಭ ಖುರಾನ್ ಅನ್ನು ಪೂರ್ತಿಯಾಗಿ ಕಂಠಪಾಠ ಮಾಡಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಹಾಫಿಝ್ ಪದವಿಯನ್ನು ನೀಡಲಾಯಿತು. ಮಾಜಿ ಶಾಸಕರು ಹಾಗೂ ಸಂಸ್ಥೆಯ ಮಹಾ ಮುಖ್ಯಸ್ಥರೂ ಆದ ಕೆ.ಎಂ.ಇಬ್ರಾಹಿಂ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲೆಯ ಉಪಕಾಝಿ ಹಾಗೂ ಸಂಸ್ಥೆಯ ಉಪಾಧ್ಯಕ್ಷ ಎಂ.ಎಂ.ಅಬ್ದುಲ್ಲ ಫೈಝಿ ಅವರು ಸಭೆಯನ್ನು ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲರಾದ ಜೈನುದ್ದೀನ್ ಫೈಝಿಯವರು ಮುಖ್ಯ ಪ್ರಭಾಷಣ ಮಾಡಿದರು.
ಸಂಸ್ಥೆಯ ಅಧ್ಯಕ್ಷ ವೈ.ಎಂ.ಉಮರ್ ಫೈಝಿ, ಕಾಲೇಜು ಮುದರಿಸುಗಳಾದ ಉಸ್ಮಾನ್ ಫೈಝಿ ಅಹಮದ್ ಕಬೀರ್ ಫೈಝಿ ಹಾಗೂ ಉಪನ್ಯಾಸಕ ಸುಬ್ರಹ್ಮಣ್ಯ ಆನಂದ ಸಭೆಯನ್ನುದ್ದೇಶಿಸಿ ಮಾತನಾಡಿದರು
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹುಸೈನ್ ಕುಶಾಲನಗರ, ಉಪಾಧ್ಯಕ್ಷರಾದ ಬಾಪು ಹಾಜಿ, ಕೊಡಗರಹಳ್ಳಿ ಸಿದ್ದೀಕ್ ಹಾಜಿ ಕೊಡ್ಲಿಪೇಟೆ, ನೆಲ್ಯಹುದಿಕೇರಿಯ ಹಸನ್ ಕುನ್ನಿ ಹಾಜಿ ಮೊಹಮ್ಮದ್ ಎಸ್ ಎಂ ಸುಂಟಿಕೊಪ್ಪ ಅಬ್ಬಾಸ್ ಅಝರಿ ಮುಂತಾದವರು ಉಪಸ್ಥಿತರಿದ್ದರು.
ಉನ್ನತ ಶಿಕ್ಷಣಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ನಗದು ನೆರವನ್ನು ಬಶೀರ್ ನೆಲ್ಯಹುದಿಕೇರಿ ಹಾಗೂ ಸುಂಟಿಕೊಪ್ಪದ ರಫೀಕ್ ಹಾಜಿ ಪುಸ್ತಕದ ನೆರವನ್ನು ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಅರಿವು*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಆ.28 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಬ್ರಹ್ಮಶ್ರೀ…

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಸಿಎಂ, ಶಾಸಕ ಪೊನ್ನಣ್ಣ ಭೇಟಿ*

ಆಗಷ್ಟ್ 26, 2026

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.