Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ವಿಶ್ವ ಶ್ರವಣ ದಿನಾಚರಣೆ : ಶ್ರವಣ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಿ : ಡಾ.ಆನಂದ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ವಿಶ್ವ ಶ್ರವಣ ದಿನಾಚರಣೆ : ಶ್ರವಣ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಿ : ಡಾ.ಆನಂದ್ ಸಲಹೆ*

ಮಾರ್ಚ್ 4, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.4 NEWS DESK  : ಪ್ರತಿ ಮನುಷ್ಯರಿಗೂ ಶ್ರವಣ(ಕಿವಿ) ಪ್ರಮುಖ ಅಂಗವಾಗಿದ್ದು, ಸೂಕ್ಷ್ಮ ಪ್ರದೇಶವಾದ ಕಿವಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರದ ಸಹಯೋಗದಲ್ಲಿ `ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ’ದಡಿಯಲ್ಲಿ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉಪನ್ಯಾಸ ಕೊಠಡಿಯಲ್ಲಿ ನಡೆದ `ವಿಶ್ವ ಶ್ರವಣ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಒಂದು ಸಾವಿರ ಜನರಲ್ಲಿ 291 ಮಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಶ್ರವಣದೋಷ ಇರುತ್ತದೆ. ಆದ್ದರಿಂದ ಸೂಕ್ಷ್ಮ ಭಾಗವಾದ ಶ್ರವಣ ಬಗ್ಗೆ ಎಚ್ಚರವಹಿಸಬೇಕು. 75 ಡಿಸಿಬಲ್‍ಗಿಂತ ಕಡಿಮೆ ಶಬ್ಧ ಬಳಸಬೇಕು ಎಂದು ಸಲಹೆ ಮಾಡಿದರು.
ಸಣ್ಣ ಮಕ್ಕಳಿಗೂ ಸಹ ಶ್ರವಣದೋಷ ಇರುತ್ತದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶ್ರವಣದೋಷ ಇರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಡಾ.ಆನಂದ್ ವಿವರಿಸಿದರು.
ಮಕ್ಕಳಲ್ಲಿ ಶ್ರವಣದೋಷ ಎಷ್ಟು ಬೇಗ ಪತ್ತೆ ಮಾಡುತ್ತೇವೆ ಅಷ್ಟು ಒಳ್ಳೆಯದು. ಶ್ರವಣದೋಷ ಇದ್ದಲ್ಲಿ ಮಕ್ಕಳು ಮಾತನಾಡಲು ತೊಂದರೆಯಾಗುತ್ತದೆ. ಆದ್ದರಿಂದ ಪ್ರಾಥಮಿಕ ಹಂತದಲ್ಲಿಯೇ ಗುಣಪಡಿಸಲು ಮುಂದಾಗಬೇಕು. ಜಿಲ್ಲೆಯಲ್ಲಿ ಇಂತಹ ಎರಡು ಪ್ರಕರಣಗಳು ವರದಿಯಾಗಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು ಮತ್ತು ಗಂಟಲು ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾ, ಸೂಕ್ಷ್ಮ ಅಂಗವಾದ ಕಿವಿಯ ರಕ್ಷಣೆಯ ಕುರಿತು ಮಾತನಾಡಿ, ಯುವಜನರು ತಮ್ಮ ಇಯರ್‌ಫೋನ್‌ಗಳು ಮತ್ತು ಹೆಡ್‌ಫೋನ್ (ಕರ್ಣವಾಣಿ) ಬಳಕೆಯನ್ನು ಮಿತಿಗೊಳಿಸಬೇಕಾದ ಅಗತ್ಯ ಬಗ್ಗೆ ಒತ್ತಿ ಹೇಳಿದರು. ಮಕ್ಕಳಲ್ಲಿ ಎರಡು ವರ್ಷದ ವಯಸ್ಸಿನೊಳಗೆ ಆರೈಕೆ ಸಾಧ್ಯವಾದಷ್ಟು ಬೇಗ ಪ್ರಾರಂಭಿಸಬೇಕು ಎಂದು ತಿಳಿಸಿದರು.
ಕಾಕ್ಲಿಯರ್ ಇಂಪ್ಲಾಂಟ್ಸ್, ವಯಸ್ಸಾದವರಲ್ಲಿ ಶ್ರವಣದೋಷವನ್ನು ಗುರುತಿಸುವ ಅಗತ್ಯತೆ ಮತ್ತು ಅದು ಬುದ್ಧಿಮಾಂದ್ಯತೆಗೆ ಹೇಗೆ ಸಂಬಂಧಿಸಿದೆ ಎಂಬುದನ್ನು ಅವರು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ.ನರಸಿಂಹ ರೈ ಮಾತನಾಡಿ, ಇಯರ್‌ಫೋನ್‌ ಬಳಕೆಯನ್ನು ಮಿತಿಗೊಳಿಸುವ ಮಹತ್ವದ ಬಗ್ಗೆ ವಿವರಿಸಿದರು.
ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್ ಮಾತನಾಡಿ ವಯಸ್ಸಾದವರಲ್ಲಿ ಶ್ರವಣೇಂದ್ರಿಯ ಆರೈಕೆಯ ಪ್ರಾಮುಖ್ಯತೆ ಮತ್ತು ಶ್ರವಣ ದೋಷದ ಭಾವನಾತ್ಮಕ ಮತ್ತು ಸಾಮಾಜಿಕ ಪರಿಣಾಮ ಕುರಿತು ತಿಳಿಸಿದರು.
ಮೂರನೇ ಎಂಬಿಬಿಎಸ್ ವಿದ್ಯಾರ್ಥಿ ಸುಮಂತ್ ಶ್ರವಣದೋಷವನ್ನು ಗುರುತಿಸುವುದು ಮತ್ತು ಶ್ರವಣಾರೈಕೆಯ ಮಹತ್ವದ ಕುರಿತು ಮಾತನಾಡಿ, ಶ್ರವಣೇಂದ್ರಿಯದ ಮಹತ್ವ ಕುರಿತು ಮಾತನಾಡಿದರು.
ಮೂರನೇ ಎಂಬಿಬಿಎಸ್ ವಿದ್ಯಾರ್ಥಿ ವಿಕ್ರಮ್‍ಶೆಟ್ಟಿ ವಿಶ್ವ ಶ್ರವಣ ದಿನದ ಬಗ್ಗೆ ಮಾತನಾಡಿ ಮತ್ತು ಕಿವಿ-ಶ್ರವಣವನ್ನು ರಕ್ಷಿಸುವ ಮಹತ್ವ ನೀಡಿದರು.
ಮೂರನೇ ಎಂಬಿಬಿಎಸ್ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಪ್ರಾರ್ಥಿಸಿದರು, ತೃತೀಯ ಎಂಬಿಬಿಎಸ್ ವಿದ್ಯಾರ್ಥಿ ಸುಮಂತ್ ವಂದಿಸಿದರು.
ಜಾಥ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ-ಔಟ್ರೀಚ್ ಸೇವಾ ಕೇಂದ್ರದ ಸಹಯೋಗದೊಂದಿಗೆ ವಿಶ್ವ ಶ್ರವಣ ದಿನ 2024 ಅನ್ನು ಆಚರಿಸಲಾಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂರನೇ ಎಂಬಿಬಿಎಸ್ ವಿದ್ಯಾರ್ಥಿಗಳ ಜಾಥಾ ನಡೆಸಿದರು.
ನಗರದ ರಾಜಾಸೀಟು ಬಳಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದ ಅಧಿಕಾರಿ ಡಾ.ಆನಂದ್ ಮತ್ತು ಕೊ.ವೈ.ವಿ.ಸಂ. ನ ಪ್ರಾಂಶುಪಾಲರು ಡಾ.ನರಸಿಂಹ ರೈ, ಡಾ.ಶ್ವೇತ ಚಾಲನೆ ನೀಡಿದರು.
ಕೊ.ವೈ.ವಿ.ಸಂ ಬೋಧನಾ ಆಸ್ಪತ್ರೆಗೆ ವಿದ್ಯಾರ್ಥಿಗಳು ಕಿವಿ ಮತ್ತು ಶ್ರವಣೇಂದ್ರಿಯದ ಬಗ್ಗೆ ಫಲಕಗಳು ಮತ್ತು ಭಿತ್ತಿಪತ್ರಗಳನ್ನು ಹಿಡಿದು ಜಾಗೃತಿ ಮೂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.