ಬೆಂಗಳೂರು ಮಾ.4 NEWS DESK : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಧಾನಸೌಧ ಪೊಲೀಸ್ ಠಾಣೆಯ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ. ದೆಹಲಿ ಮೂಲದ ಇಲ್ತಿಯಾಜ್, ಆರ್.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿತ ಆರೋಪಿಗಳಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇತ್ತೀಚಿಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರು ಗೆಲುವು ಸಾಧಿಸಿದ ಸಂದರ್ಭ ಪಾಕಿಸ್ತಾನದ ಪರ ಘೋಷಣೆ ಕೇಳಿ ಬಂದಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.








