Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 8, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.8 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕಿನ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಮೇಕೇರಿ, ಹಾಗೂ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಸೇತುವೆ, ತಡೆಗೋಡೆ ಸೇರಿದಂತೆ ಸುಮಾರು 25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಸೇತುವೆ ಕಾಮಗಾರಿ, ಹಾಗೆಯೇ ಚೆಂಬು ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ, ಆಟದ ಮೈದಾನ ನಿರ್ಮಾಣಕ್ಕಾಗಿ ಕ್ರೀಡಾಇಲಾಖೆಗೆ 4 ಎಕರೆ ಭೂಮಿ ಹಸ್ತಾಂತರ, ತಡೆಗೋಡೆ ಉದ್ಘಾಟನೆ, ಮದೆನಾಡು ಗ್ರಾ.ಪಂ.ವ್ಯಾಪ್ತಿಯ ಕಾಟಕೇರಿ ಬಳಿ 12.6 ಕೋಟಿ ರೂ ವೆಚ್ಚದಲ್ಲಿ 66/11 ಕೆವಿ ಸಾಮಥ್ರ್ಯದ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ, ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ 4 ಕೋಟಿ ರೂ ವೆಚ್ಚದ ರಸ್ತೆ ನಿರ್ಮಾಣ ಹೀಗೆ ವಿವಿಧ ಗ್ರಾ.ಪಂ.ಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಾರ್ವಜನಿಕರ ಅಹವಾಲು ಆಲಿಸಿ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಅಭಿವೃದ್ಧಿಗೆ ಸುಮಾರು 250 ಕೋಟಿ ರೂ.ಗೆ ಅನುಮೋದನೆ ನೀಡಿದೆ ಎಂದು ಎ.ಎಸ್.ಪೊನ್ನಣ್ಣ ಮಾಹಿತಿ ನೀಡಿದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರವು ವಿಶಾಲ ವ್ಯಾಪ್ತಿ ಹೊಂದಿದೆ. ಕರಿಕೆ, ಪೆರಾಜೆ, ಸಂಪಾಜೆಯಿಂದ, ಕುಟ್ಟ, ಮಾಲ್ದಾರೆ ವ್ಯಾಪ್ತಿಗೆ ಒಳಗೊಂಡಂತೆ ವಿಶಾಲ ಭೂವಿಸ್ತೀರ್ಣ ಹೊಂದಿದೆ. ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊನ್ನಣ್ಣ ತಿಳಿಸಿದರು.
ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ರಸ್ತೆ, ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಸಾರ್ವಜನಿಕರಿಗೆ ಸ್ಪಂದಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಶ್ರಮಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುವುದು ಜವಾಬ್ದಾರಿಯಾಗಿದೆ ಎಂದು ಶಾಸಕರು ಹೇಳಿದರು.
ಮೂಲಭೂತ ಸೌಲಭ್ಯಗಳ ಜೊತೆಗೆ ದೇವಾಲಯಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು. ವಿರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವಲ್ಲಿ ಶ್ರಮಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ವಿವರಿಸಿದರು.
ಸರ್ಕಾರ ಶಕ್ತಿ, ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಸೇರಿ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಜೊತೆಗೆ ವಿದ್ಯುತ್ ದರವನ್ನು ಕಡಿಮೆ ಮಾಡಿದೆ ಎಂದು ತಿಳಿಸಿದರು.
ಸರ್ಕಾರ ಬಡವರ ಪರ ಕೆಲಸ ಮಾಡುತ್ತಿದ್ದು, ಧ್ವನಿ ಇಲ್ಲದವರನ್ನು ಮೇಲೇತ್ತಲು ಪ್ರಯತ್ನಿಸುತ್ತಿದೆ. ಅಭಿವೃದ್ಧಿ ಪರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರೊಬ್ಬರು ಮಾತನಾಡಿ ಚೆಂಬು ಗ್ರಾ.ಪಂ.ಕಚೇರಿ ಯಿಂದ ಕುದುರೆಪಾಯ ಮಾರ್ಗದ ಮೂರು ಕಡೆಗಳಲ್ಲಿ ರಸ್ತೆಯನ್ನು ಅಗೆದಿದ್ದು, ಹಾಳು ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ರಸ್ತೆ ಕಾಮಗಾರಿ ಹೆಸರಿನಲ್ಲಿ ದುರುಪಯೋಗ ಆಗಬಾರದು ಎಂದು ಶಾಸಕರ ಗಮನಕ್ಕೆ ತಂದರು.
ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಯಾವುದೇ ಕಾಮಗಾರಿಯಲ್ಲಿ ದುರುಪಯೋಗ ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಎಲ್ಲರೂ ಶ್ರದ್ಧೆ, ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಪೊನ್ನಣ್ಣ ಅವರು ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.
ಮೇಲುಚೆಂಬು ಭಾಗದಲ್ಲಿ ಆಟದ ಮೈದಾನ ನಿರ್ಮಾಣ ಸಂಬಂಧ ಜಾಗ ಹಸ್ತಾಂತರ ಸಂದರ್ಭದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಿಕೊಡುವಂತೆ ಶಾಸಕರಲ್ಲಿ ಸ್ಥಳೀಯರು ಕೋರಿದರು.
ಚೆಂಬು ಗ್ರಾಮದ ಪ್ರಮುಖರಾದ ಹೊಸೂರು ಸೂರಜ್ ಮಾತನಾಡಿ ಪೆರಾಜೆ, ಚೆಂಬು, ಸಂಪಾಜೆ ಭಾಗಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೆಚ್ಚಿನ ಅನುದಾನ ಒದಗಿಸಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯಕ್ಕೆ ಒತ್ತು ನೀಡಿದ್ದಾರೆ. ಹಾಗೆಯೇ ದೇವಾಲಯಗಳ ಅಭಿವೃದ್ಧಿಗೂ ಸಹ ಕೈಜೋಡಿಸಿದ್ದಾರೆ ಎಂದು ಹೇಳಿದರು.
ಪ್ರಮುಖರಾದ ಎಂ.ಲಕ್ಷ್ಮಣ ಮಾತನಾಡಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಆಗಬೇಕಿರುವ ಕೆಲಸಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಸಾಮಥ್ರ್ಯವಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕಿನ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷರಾದ ನೆರವಂಡ ಉಮೇಶ್, ಪ್ರಮುಖರಾದ ಧರ್ಮಜ ಉತ್ತಪ್ಪ, ಇಸ್ಮಾಯಿಲ್, ಕೊಲ್ಯದ ಗಿರೀಶ್, ತೆನ್ನಿರಾ ಮೈನಾ, ಸುರೇಶ್, ಶಶಿ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಮಾ.17 : ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕಾರ್ಯವೈಖರಿಯನ್ನು ಮೆಚ್ಚಿ ಕುಶಾಲನಗರದ ಸೆಂಟ್ರಲ್…

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.