Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೊದ್ದೂರು ಗ್ರಾಮ ಸಭೆ : ಸ್ಮಾರ್ಟ್ ಕ್ಲಾಸ್ ಪೂರಕ ಸಲಕರಣೆ ಹಾಗೂ ಪುಸ್ತಕ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೊದ್ದೂರು ಗ್ರಾಮ ಸಭೆ : ಸ್ಮಾರ್ಟ್ ಕ್ಲಾಸ್ ಪೂರಕ ಸಲಕರಣೆ ಹಾಗೂ ಪುಸ್ತಕ ವಿತರಣೆ*

ಮಾರ್ಚ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.8 NEWS DESK : ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯು ಪಂಚಾಯತಿ ಅಧ್ಯಕ್ಷ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹೊದ್ದೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರಾದ ಕೃತಿಕಾರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇದ್ದು, ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧ್ಯಕ್ಷರು ಸೂಚನೆ ನೀಡಿದರು.
ವಿದ್ಯುತ್ ಸಮಸ್ಯೆ ಕುರಿತು ಸಸ್ಕ್ ಮುರ್ನಾಡು ಅಭಿಯಂತರರು ಮಾಹಿತಿ ನೀಡಿದರು,
ಪಂಚಾಯತಿ ವ್ಯಾಪ್ತಿಯಲ್ಲಿ ಟ್ರಾನ್ಸ್ಫಾರ್ಮರ್ ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ಸದಸ್ಯರಾದ ಹಮೀದ್, ಮೊಣ್ಣಪ್ಪ, ಟೈನಿ ಗಮನ ಸೆಳೆದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ಕುರಿತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಭಿಯಂತರರಾದ ರಘು ಮಾಹಿತಿ ನೀಡಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ವಿಶೇಷ ಮುತುವರ್ಜಿಯಿಂದ ಹೊದ್ದೂರು ಗ್ರಾ.ಪಂ ಗೆ ಒಂದು ಕೋಟಿ ಎಪ್ಪತ್ತು ಲಕ್ಷ ರೂಪಾಯಿಗಳ ವಿವಿಧ ರಸ್ತೆ ಕಾಮಗಾರಿಗಳು ಮಂಜೂರಾಗಿದೆ ಹಾಗೂ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಅಧ್ಯಕ್ಷರಾದ ಹಂಸ ಮಾಹಿತಿ ನೀಡಿದರು,
ಹೊದ್ದೂರು ಕಬಡಕೇರಿ ಸರ್ವೆ ನಂಬರ್ 77/2 ಹಾಗೂ 88/1 ಆಶ್ರಯ ನಿವೇಶನ ಯೋಜನೆ ಅಡಿಯಲ್ಲಿ 60 ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಕಂದಾಯ ಇಲಾಖೆಯ ಎಲ್ಲಾ ಕಾರ್ಯಗಳಿಗೂ ಉತ್ತಮವಾಗಿ ಸ್ಪಂದಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಯದ ಸಂತೋಷ್ ಪಾಟೀಲ್ ಅವರ ಕಾರ್ಯ ವೈಖರಿ ಬಗ್ಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು. ಪಂಚಾಯಿತಿ ವ್ಯಾಪ್ತಿಯ ಅನುದಾನ ರಹಿತ ಶಾಲೆಗಳ ಕಟ್ಟಡ ತೆರಿಗೆ ಬೇರೆ ಗ್ರಾಮ ಪಂಚಾಯಿತಿಗಳಿಗಿಂತಲೂ ಹೆಚ್ಚುವರಿಯಾಗಿ ವಿಧಿಸುತ್ತಿರುವ ಬಗ್ಗೆ ಗ್ರಾಮಸ್ಥರಾದ ಮೊಹಮ್ಮದ್ ರವರು ಸಭೆಯ ಗಮನ ಸೆಳೆದರು ಈ ಕುರಿತು ಪಿಡಿಓ ಅಬ್ದುಲ್ಲಾ ಮಾಹಿತಿ ನೀಡಿ ಗ್ರಾಮ ಪಂಚಾಯಿತಿ ತೆರಿಗೆ ನಿಯಮಾವಳಿಗಳ ಪ್ರಕಾರ ಈ ಹಿಂದಿನಂತೆ ತೆರಿಗೆ ವಸೂಲಿ ಮಾಡುತ್ತಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ನಿಯಮ 202 ರ ಅನ್ವಯ ಮೇಲ್ಮನವಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು
ಈ ಬಗ್ಗೆ ಮುಂದಿನ ಸಭೆಯಲ್ಲಿ ಪರಿಶೀಲಿಸಲಾಗುವುದು ಎಂದು ಅಧ್ಯಕ್ಷರು ಮಾಹಿತಿ ನೀಡಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯ ವಾಟೆಕಾಡು ಮತ್ತು ಹೊದವಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಗೆ ಪೂರಕವಾಗಿರುವ ಸ್ಮಾರ್ಟ್ ಟಿವಿಯನ್ನು ಹಾಗೂ ಪಂಚಾಯತಿ ವ್ಯಾಪ್ತಿಯ 12 ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸ್ನೇಹಿ ಪೀಠೋಪಕರಣಗಳು ಹಾಗೂ ಅಂಗನವಾಡಿ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಗ್ರಾಮಸಭೆಯಲ್ಲಿ ವಿತರಿಸಲಾಯಿತು.
ಸಭೆಯಲ್ಲಿ ಪಂಚಾಯತಿ ಉಪಾಧ್ಯಕ್ಷರಾದ ಅನುರಾಧ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಕೆ ಮೊನ್ನಪ್ಪ, ಪಂಚಾಯಿತಿ ಸದಸ್ಯರಾದ ಎಂ ಬಿ ಹಮೀದ್, ಕಡ್ಲೆರ ಟೈನಿ, ಪಾರ್ವತಿ ,ಕೆ ಆರ್ ಅನಿತಾ ,ಲಕ್ಷ್ಮಿ, ಮೈದು, ಚೌರಿರ ಅನಿತಾ, ಚೌರೀರ ನವೀನ್, ಸರಸು, ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರು ಹಾಜರಿದ್ದರು.

ವರದಿ : ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಆ.24:ಕೊಡಗಿನಲ್ಲಿ ಮೋಡಬಿತ್ತನೆ ಮಾಡಿದರೆ ಕೃಷಿ ಫಸಲಿನ ಮೇಲೆ ದುಷ್ಪರಿಣಾಮ ಬೀರಲಿದ್ದು, ಸರ್ಕಾರ ಮೋಡಬಿತ್ತನೆ ಮಾಡಬಾರದು ಎಂದು…

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.