ಸುಂಟಿಕೊಪ್ಪ ಮಾ.9 NEWS DESK : ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.
ದೇವಾಲಯದ ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆದು ನಂತರ ನೆರದಿದ್ದ ನೂರಾರು ಭಕ್ತರ ಸಮ್ಮುಖದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು.
ಮಹಾಪೂಜೆ, ಮಹಾಮಂಗಳಾರತಿ ನಂತರ ನೆರೆದದ್ದ ಭಕ್ತಾಧಿಗಳಿಗೆ ತೀರ್ಥಪ್ರಸಾದ ಅನ್ನಸಂತರ್ಪಣೆ ನಡೆಯಿತು.
ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್ ಹಾಗೂ ಸಮಿತಿಯ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಸೇರಿದಂತೆ ಇತರರು ಹಾಜರಿದ್ದರು.
ಸುಂಟಿಕೊಪ್ಪ, ಕೊಡಗರಹಳ್ಳಿ, ಪನ್ಯ, ಉಪ್ಪುತೋಡು, ಕಂಬಿಬಾಣೆ, ಕುಶಾಲನಗರದಿಂದ ಭಕ್ತರು ಆಗಮಿಸಿ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದರು.
ಸಮೀಪದ ಕೊಡಗರಹಳ್ಳಿ, ಶ್ರೀ ಬೈತೂರಪ್ಪ ಪೂವ್ವದಿ, ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಸಮೀಪದ ಕಂಬಿಬಾಣೆ ಮ್ಯಾಗಡೂರ್ ವಿಶ್ವನಾಥ ದೇವಾಲಯ, ನಾಕೂರು ಶಿವ ದೇವಾಲಯ, ಕೆದಕಲ್ ಭದ್ರಕಾಳಿ ದೇವಾಲಯಗಳಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಗಳು ನಡೆದವು.







