ಮಡಿಕೇರಿ ಮಾ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು.
ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆಯಿಂದ ಯಡವನಾಡು ರಸ್ತೆ ಕಾಮಗಾರಿ, ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಶಾಲಾ ಮುಂಬಾಗದ ರಸ್ತೆ, ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಶಾಸಕರು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಥಳೀಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು.









