Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
  • *ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಮುಡಿಗೇರಿಸಿಕೊಂಡ “ಕಂದೀಲು”*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಮುಡಿಗೇರಿಸಿಕೊಂಡ “ಕಂದೀಲು”*

ಮಾರ್ಚ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.9  NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನ ದ ಕನ್ನಡ ಚಲನಚಿತ್ರ “ಕಂದೀಲು” (The Ray of hope) ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ನಡೆದ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗದಲ್ಲಿ ಆಯ್ಕೆಗೊಂಡು 12 ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಂಡು ಅಂತಿಮ ಘಟ್ಟದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಬೆಂಗಳೂರಿನ ವಿಧಾನಸೌಧ ದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಅದ್ದೂರಿ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ ಖ್ಯಾತ ನಟ, ಚಲನಚಿತ್ರೋತ್ಸವದ ರಾಯಭಾರಿ ಡಾಲಿ ಧನಂಜಯ ಹಾಗೂ ಕನ್ನಡ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ಮತ್ತು ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಂದ “ಕಂದೀಲು” ಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಪತಿ ಪ್ರಕಾಶ್ ಕಾರ್ಯಪ್ಪ ಹಾಗೂ ಕ್ಯಾಮರಾಮೆನ್ ಪಿ.ವಿ.ಆರ್ ಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಮತ್ತು ಚಿತ್ರೋತ್ಸವ ಸಮಿತಿ ಅಧ್ಯಕ್ಷ ಡಾ.ತ್ರಿಲೋಕ್ ಚಂದ್ರ ಐಎಎಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ಎನ್.ವಿದ್ಯಾಶಂಕರ್, ಖ್ಯಾತ ನಟ ಜೈ ಜಗದೀಶ್, ನಟಿಯರಾದ ಭಾವನಾ, ಪೂಜಾ ಗಾಂಧಿ, ಭವ್ಯ ಹಾಗೂ ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಹಿರಿಯ ನಿರ್ದೇಶಕ ಪದ್ಮಶ್ರೀ ಎಂ.ಎಸ್.ಸತ್ಯು ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭ ಚಿತ್ರದ ನಾಯಕ ನಟ ಪ್ರಭಾಕರ್ ಬಿ.ಕುಂದರ್, ನಟಿ ಈರಮಂಡ ಹರಿಣಿ ವಿಜಯ್ ಉತ್ತಯ್ಯ, ಕಥೆ-ಸಂಕಲನಕಾರ ನಾಗೇಶ್ ಹಾಗೂ ವಿಜಯ್ ಉತ್ತಯ್ಯ ಹಾಜರಿದ್ದರು.
ಚಿತ್ರದಲ್ಲಿ ಬಡ ರೈತ ಕುಟುಂಬ ತನ್ನ ಹೆಂಡತಿ, ಮಗ ಮಗಳೊಂದಿಗೆ ತನ್ನ ಬರಡು ಭೂಮಿಯಲ್ಲಿ ಕೃಷಿ ಮಾಡುವ ಕನಸನ್ನು ಈಡೇರಿಸಲು ಮಗ ನನ್ನು ಸಾಲ ಮಾಡಿ ದೂರದ ದುಬೈ ಗೆ ಕೆಲಸಕ್ಕೆ ಕಳುಹಿಸಿ ತನ್ನ ಊರಿನಲ್ಲಿ ರಾಜಕಾರಣಿ ಹಾಗೂ ಉದ್ಯಮಿ ಗಳಿಂದ ಪಡ ಬಾರದ ಕಷ್ಟ ಅನುಭವಿಸುವ ಕುಟುಂಬ, ದುಬೈಯಲ್ಲಿ ಮೃತಪಟ್ಟ ಮಗನನ್ನು ಭಾರತಕ್ಕೆ ಕರೆ ತರಲು ಪಡುವ ಕಷ್ಟ, ಇವುಗಳ ನಡುವೆ ಊರಿನಲ್ಲಿನ ಕಟ್ಟುಪಾಡುಗಳು, ಊರಿನ ಜನರ ಅವ ಹೇಳನಕಾರಿ ಮಾತುಗಳು ಇವೆಲ್ಲವನ್ನು ಅತ್ಯಂತ ಭಾವನಾತ್ಮಕ, ನೈಜತೆ ಯಿಂದ ಮತ್ತು ಮನೋಜ್ಞವಾಗಿ ಚಿತ್ರಿಸಿರುವ ಬಗ್ಗೆ ತೀರ್ಪುಗಾರರು ಹಾಗೂ ಸಿನಿ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂತಾರ ಖ್ಯಾತಿಯ ಪ್ರಭಾಕರ್ ಕುಂದರ್ ಬಡ ರೈತ ತಂದೆ ಪಾತ್ರದಲ್ಲಿ, ಮೈಸೂರಿನ ವನಿತಾ ರಾಜೇಶ್ ತಾಯಿಯ ಪಾತ್ರ, ಮಗನ ಪಾತ್ರದಲ್ಲಿ ಗುರು ತೇಜಸ್, ಮಗಳ ಪಾತ್ರದಲ್ಲಿ ಕನ್ನಡ ಮತ್ತು ಕೊಡವ ಭಾಷೆಯ ಚಿತ್ರಗಳಲ್ಲಿ ನಟಿಸಿರುವ ಕೊಡಗಿನ ಬಾಲನಟಿ ಈರಮಂಡ ಕುಶಿ ಕಾವೇರಮ್ಮ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ, ಉಳಿದಂತೆ ವೆಂಕಟೇಶ್ ಪ್ರಸಾದ್, ಚಂದ್ರಕಾಂತ್ ಕೋಟಪಾಡಿ, ಹರಿಣಿ ವಿಜಯ್, ಬಸವರಾಜು, ಆಡುಗುಡಿ ಶ್ರೀನಿವಾಸ್, ಮಂಜುನಾಥ್, ರತ್ನ ಕುಮಾರಿ, ಬಂಗಾರುಪೇಟೆ ಮುದುವಾಡಿ, ರೋಹಿಣಿ ರವರುಗಳು ನಟಿಸಿದ್ದಾರೆ.
ಕೊಡಗಿನವರಾದ ಕೊಟ್ಟೂಕತ್ತಿರ ಯಶೋಧ ಪ್ರಕಾಶ್ ಅವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿ ಬಂದ ಕಂದೀಲು. 29ನೇ ಕಲ್ಕತ್ತಾ ಹಾಗೂ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಆಯ್ಕೆಗೊಂಡು ಪ್ರಶಸ್ತಿ ದೊರಕಿರುವುದು ಹೆಮ್ಮೆಯ ವಿಚಾರ. ಜನರಿಗೆ ಸಾಮಾಜಿಕ ಸಂದೇಶ, ಉತ್ತಮ ಸದಾಭಿರುಚಿಯ ಸಿನಿಮಾಗಳನ್ನು ನಿರ್ಮಿಸಿ ಜನರಿಗೆ ತಲುಪಿಸುವ ಜವಾಬ್ದಾರಿ ಹೆಚ್ಚಾಗಿದೆ ಎಂದು ನಿರ್ದೇಶಕಿ ಹಾಗೂ ನಿರ್ಮಾಪಕಿ ಯಶೋಧ ಪ್ರಕಾಶ್ ಹಾಗೂ ಚಿತ್ರ ತಂಡ ಸಂತಸವನ್ನು ವ್ಯಕ್ತ ಪಡಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.17 NEWS DESK : ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟ್ರದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ…

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.