Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾಗಮಂಡಲದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆ : ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಗೆ ಶಾಸಕ ಎ.ಎಸ್.ಪೊನ್ನಣ್ಣ ಸ್ಪಂದನೆ : ಟೆಂಡರ್ ಪ್ರಕ್ರಿಯೆ ಶೀಘ್ರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲದಲ್ಲಿ ವಿದ್ಯುತ್ ಉಪಕೇಂದ್ರ ಸ್ಥಾಪನೆ : ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಗೆ ಶಾಸಕ ಎ.ಎಸ್.ಪೊನ್ನಣ್ಣ ಸ್ಪಂದನೆ : ಟೆಂಡರ್ ಪ್ರಕ್ರಿಯೆ ಶೀಘ್ರ

ಮಾರ್ಚ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.11 NEWS DESK : ಭಾಗಮಂಡಲದ ಜನರ ಹಲವು ವರ್ಷಗಳ ಬೇಡಿಕೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸ್ಪಂದನೆ ನೀಡಿದ್ದು, ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಪರಿಶೀಲಿಸಿದರು.
ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು.
ಈ ಸಂದರ್ಭ ಶಾಸಕರ ಆಪ್ತ ಸಹಾಯಕರಾದ ನಿವೃತ್ತ ಅಧಿಕಾರಿ ಮುತ್ತಣ್ಣ ಹಾಗೂ ಕುಂದಚೇರಿ ಗ್ರಾ.ಪಂ ಸದಸ್ಯ ಕೆ.ಯು.ಹಾರಿಸ್ ಪದಕಲ್ಲು ಅವರು ಯೋಜನೆ ಕುರಿತು ಮಾಹಿತಿ ನೀಡಿದರು.
ಸ್ವಿಚಿಂಗ್ ಸ್ಟೇಷನ್ ಸ್ಥಾಪನೆ ಮತ್ತು ಮುಖ್ಯ ವಿದ್ಯುತ್ ಮಾರ್ಗ ಕಾಮಗಾರಿ ಆಗುವಲ್ಲಿಯವರೆಗೆ ಸೋಲಾರ್ ಘಟಕ ನಿರ್ಮಾಣಗೊಳ್ಳಲಿದೆ. ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸುತ್ತಿರುವ ಬಗ್ಗೆ ಗ್ರಾಮಸ್ಥರು ಶಾಸಕ ಪೊನ್ನಣ್ಣ ಅವರಿಗೆ ಕೃತಜ್ಞತೆ ಸಲ್ಲಿಸಿದರು.
::: ವಿವಿಧ ಅಭಿವೃದ್ಧಿ :::
ಚೆಟ್ಟಿಮಾನಿ (ಕುಂದಚೇರಿ) ಪಂಚಾಯಿತಿ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಇದೇ ಸಂದರ್ಭ ಚಾಲನೆ ನೀಡಿದರು. ಕೋಪಟ್ಟಿ, ಸಿಂಗತ್ತೂರು, ಕುಂದಚೇರಿ ಮತ್ತು ಪದಕಲ್ಲು ಗ್ರಾಮದ 1.26 ಕೋಟಿ ವೆಚ್ಚದ ಗ್ರಾಮೀಣ ಸಂಪರ್ಕ ರಸ್ತೆ ಅಭಿವೃದ್ಧಿಗೆ ಪದಕಲ್ಲು ಗ್ರಾಮದ ನವಗ್ರಾಮದಲ್ಲಿ (ನಂಗಾರು ರಸ್ತೆ) ಭೂಮಿಪೂಜೆ ನೆರವೇರಿಸಿದರು.
ನಂತರ ಪದಕಲ್ಲು 61/3ರ 85 ನಿವೇಶನ ವೀಕ್ಷಿಸಿ, ವಸತಿ ರಹಿತರ ಜೊತೆ ಚರ್ಚಿಸಿದರು. ತಕ್ಷಣ ಹಕ್ಕುಪತ್ರ ಮತ್ತು ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ ನೀಡುವುದಾಗಿ ಭರವಸೆ ನೀಡಿದರು.
ನಂತರ ಜಲ್ ಜೀವನ್ ಮಿಷನ್ (ಜೆಜೆಎಂ) ನಡಿ ಕುಡಿಯುವ ನೀರಿನ ಕಾಮಗಾರಿಯನ್ನು ಪದಕಲ್ಲು ಗ್ರಾಮದ ನವಗ್ರಾಮದಲ್ಲಿ ಪರಿಶೀಲಿಸಿ ಗುತ್ತಿಗೆದಾರರಾದ ಈ.ಕೆ.ಖಾದರ್ ಹಾಗೂ ಈ.ಕೆ.ಅಬ್ದುಲ್ಲ ಅವರ ಜೊತೆ ಸಮಾಲೋಚನೆ ನಡೆಸಿದರು. ಕಾಮಗಾರಿ ಗುಣಮಟ್ಟದಿಂದ ಕೂಡಿದೆ ಎಂದು ತೃಪ್ತಿ ವ್ಯಕ್ತಪಡಿಸಿದರು.
ತಕ್ಷವೇ ಜೆಜೆಎಂ ಹಾಗೂ ಚೆಸ್ಕಾಂ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರಿನ ಮೋಟಾರ್ ಮತ್ತು ಘಟಕಕ್ಕೆ ವಿದ್ಯುತ್ ಸಂಪರ್ಕ ನೀಡುವುದಾಗಿ ಭರವಸೆ ನೀಡಿದರು.
ಕುಂದಚೇರಿಯ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಕಟ್ಟಡದ ಮುಂದುವರೆದ ಭಾಗಕ್ಕೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ಕಟ್ಟಡ ಕಾಮಗಾರಿಗೆ ಅನುದಾನ ಒದಗಿಸಿಕೊಡುವ ಭರವಸೆ ನೀಡಿದ ಶಾಸಕರು, ಕಾಟಕೇರಿಯಿಂದ ಕರಿಕೆಗೆ ಸಾಗುವ ಹೆದ್ದಾರಿ ಮಾರ್ಗದ ಕಾಮಗಾರಿ ಕುರಿತು ಸಮಾಲೋಚನೆ ನಡೆಸಿದರು.
ಪ್ರಶಾಂತ್ ಕುಮಾರ್ ಪೂಜಾ ಕಾರ್ಯವನ್ನು ನಡೆಸಿಕೊಟ್ಟರು. ಗ್ರಾ.ಪಂ ಸದಸ್ಯ ಹ್ಯಾರಿಸ್ ಸ್ವಾಗತಿಸಿದರು.
ಪಂಚಾಯಿತಿ ಅಧ್ಯಕ್ಷ ಪಿ.ಬಿ.ದಿನೇಶ್, ಉಪಾಧ್ಯಕ್ಷ ಹೆಚ್.ಸಿ.ಬೇಬಿ, ಸದಸ್ಯರಾದ ವಿಶು ಪ್ರವೀಣ್ ಕುಮಾರ್, ಡಿಸಿಸಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಮುಖಂಡರುಗಳಾದ ತೆನ್ನಿರಾ ಮೈನಾ, ಕೆದಂಬಾಡಿ ಸುರೇಂದ್ರ, ಕೆ.ಟಿ.ರಮೇಶ್, ಕೆ.ಎಂ.ಇಸ್ಮಾಯಿಲ್, ಮಂಗೇರಿರ ಜಗದೀಶ್, ಕೀರ್ತಿ ಉತ್ತಪ್ಪ, ಸಿ.ಎಸ್.ವೇಣುಗೋಪಾಲ್, ಮೂವನ ಶಿವರಾಮ್, ದೊಡ್ಡೇರ ರಘು, ನಾಗೇಂದ್ರ, ಕೆ.ಕೆ.ಹಂಸ, ಡಿ.ರಂಜಿತ್, ವಲಯ ಅಧ್ಯಕ್ಷ ಕೆ.ಎಂ.ಹರೀಶ್, ಗುತ್ತಿಗೆದಾರ ಸಿ.ಎಸ್.ರಶೀದ್, ನಮೀಕಾ ಕಿರಣ್, ಡಿಸಿಸಿ ಸದಸ್ಯರಾದ ಸುನಿಲ್ ಪತ್ರಾವೋ, ಲತೀಫ್, ವೆಂಕಟೇಶ್, ಸುರೇಶ್, ಗೌರಿ, ಕಿರಣ್ ಮಂಜು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ ಸುಮೀತ ಗಂಗಮ್ಮ, ಎಂ.ಬಿ.ಕೆ.ಪುಷ್ಪ, ರುಪಾಶಿವಕುಮಾರ್, ಬೆಳ್ಳಿಪ್ಪಾಡಿ ಪುಟ್ಟ ಜಯಪ್ರಕಾಶ್, ಪಿ.ನವೀನ್, ಅಚ್ಚಪಂಡ ಸುಬ್ರಮಣಿ, ರೀನಾ ಸುರೇಶ್, ಯುವ ನಾಯಕರಾದ ತಮೀಮ್, ಸಿ.ಕೆ.ಫೈಸಲ್, ಕೆ.ಆರ್.ಪ್ರಶು, ಹಿರಿಯರಾದ ಕಡ್ಯದ ಗೋಪಾಲ್, ನಂಗಾರು ಗೋಪಾಲ್ (ವಿಜಯ) ಹಾಗೂ ಚೆಟ್ಟಿಮಾನಿ, ಚೇರಂಬಾಣೆ, ಭಾಗಮಂಡಲ ಗ್ರಾಮದ ಪ್ರಮುಖರು, ನವಗ್ರಾಮದ ಫಲಾನುಭವಿಗಳು, ಶಾಸಕರ ಆಪ್ತ ಸಹಾಯಕರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಸಮುದಾಯದ ಬಾಂಧವರಿಗೆ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮವು…

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.